ಸರ್ಕಾರಿ ಕನ್ನಡ ಶಾಲೆ ಉಳಿವಿಗಾಗಿ ಎಸ್‌ಎಫ್‌ಐ ಪ್ರತಿಭಟನೆ

KannadaprabhaNewsNetwork |  
Published : Nov 15, 2026, 02:15 AM IST
ಗಜೇಂದ್ರಗಡ ಸರ್ಕಾರಿ ಕನ್ನಡ ಶಾಲೆ ಉಳಿವಿಗಾಗಿ ಎಸ್‌ಎಫ್‌ಐ ಸಂಘಟನೆಯಿಂದ ಸಿಆರ್‌ಪಿ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿದರು. | Kannada Prabha

ಸಾರಾಂಶ

ರಾಜ್ಯದಲ್ಲಿ ಎರಡು ಸಾವಿರ ಗ್ರಾಮೀಣ ಸರ್ಕಾರಿ ಕನ್ನಡ ಶಾಲೆಗಳನ್ನು ಖಾಸಗಿ ಮತ್ತು ಕಾರ್ಪೊರೇಟ್ ಸಂಸ್ಥೆಗಳಿಗೆ ದತ್ತು ನೀಡುತ್ತಿರುವ ಸರ್ಕಾರದ ತೀರ್ಮಾನ ವಿರೋಧಿಸಿ ಎಸ್‌ಎಫ್‌ಐನಿಂದ ಶನಿವಾರ ಪ್ರತಿಭಟನೆ ನಡೆಸಿ ಸಿಆರ್‌ಪಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಸಿಆರ್‌ಪಿ ಮೂಲಕ ರಾಜ್ಯಪಾಲರಿಗೆ ಮನವಿ

ಕನ್ನಡಪ್ರಭ ವಾರ್ತೆ ಗಜೇಂದ್ರಗಡ

ರಾಜ್ಯದಲ್ಲಿ ಎರಡು ಸಾವಿರ ಗ್ರಾಮೀಣ ಸರ್ಕಾರಿ ಕನ್ನಡ ಶಾಲೆಗಳನ್ನು ಖಾಸಗಿ ಮತ್ತು ಕಾರ್ಪೊರೇಟ್ ಸಂಸ್ಥೆಗಳಿಗೆ ದತ್ತು ನೀಡುತ್ತಿರುವ ಸರ್ಕಾರದ ತೀರ್ಮಾನ ವಿರೋಧಿಸಿ ಎಸ್‌ಎಫ್‌ಐನಿಂದ ಶನಿವಾರ ಪ್ರತಿಭಟನೆ ನಡೆಸಿ ಸಿಆರ್‌ಪಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಎಸ್‌ಎಫ್‌ಐ ರಾಜ್ಯಾಧ್ಯಕ್ಷ ಗಣೇಶ ರಾಠೋಡ ಮಾತನಾಡಿ, ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ಸರ್ಕಾರ ಒಪ್ಪಿಕೊಂಡಿದೆ. ದಾಖಲಾತಿ ನೆಪಹೇಳಿ ಸರ್ಕಾರಿ ಶಾಲೆಗಳನ್ನು ಸರ್ಕಾರ ಮುಚ್ಚುತ್ತಿದೆ. ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಯಾಕೆ ಕಡಿಮೆಯಾಗುತ್ತಿದೆ ಎಂದು ಅಧ್ಯಯನ ಮಾಡಬೇಕಿದೆ. ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ, ಶಿಕ್ಷಕರ ನೇಮಕಾತಿ, ಸರಿಯಾದ ಸಮಯಕ್ಕೆ ಪಠ್ಯ ಪುಸ್ತಕ ನೀಡದ್ದು ಹಾಗೂ ಸೈಕಲ್ ಯೋಜನೆ ನಿಲ್ಲಿಸಿರುವುದು ಸೇರಿ ಅನೇಕ ಕಾರಣಗಳು ಸಿಗುತ್ತವೆ. ಆದರೆ ಸರ್ಕಾರವು ಸರ್ಕಾರಿ ಶಾಲೆಗಳಿಗೆ ಯಾವುದೇ ಸೌಲಭ್ಯ ನೀಡದೆ ಖಾಸಗಿಯವರ ಲಾಬಿಗಾಗಿ ಇಂದು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ನಾಶಮಾಡಲು ಮುಂದಾಗಿರುವುದು ಖೇದಕರ ಎಂದ ಅವರು, ಸರ್ಕಾರ ವಿಲೀನ ಮಾಡುವ ಕ್ರಮದಿಂದ ರಾಜ್ಯದಲ್ಲಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯೇ ನಾಶವಾಗುತ್ತದೆ. ಎನ್‌ಇಪಿಯನ್ನು ರಾಜ್ಯ ಸರ್ಕಾರ ರದ್ದು ಮಾಡಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತವೆ ಎಂದು ಹೇಳುವ ಸರ್ಕಾರ ಅದಕ್ಕೆ ಸಮಿತಿ ರಚಿಸಿತ್ತು. ಅದರ ವರದಿ ಇವತ್ತಿಗೂ ಬಹಿರಂಗ ಪಡಿಸಿ ಜಾರಿ ಮಾಡುತ್ತಿಲ್ಲ. ಶಾಲಾ ಶಿಕ್ಷಣ ಹಾಗೂ ಸಾಕ್ಷರತೆಯಲ್ಲಿ ೭೯,೬೯೪ ಹುದ್ದೆ ಖಾಲಿ ಇವೆ ಆದರೆ ಭರ್ತಿ ಮಾಡಿಕೊಂಡಿಲ್ಲ. ಅದರ ಬದಲು ೪೩,೫೫೩ ಅತಿಥಿ ಶಿಕ್ಷಕರನ್ನು ನೇಮಕ ಮಾಡಿರುವುದಾಗಿ ಶಿಕ್ಷಣ ಸಚಿವರು ತಿಳಿಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದೋಳಗೆ ೧೮,೦೦೦ ಶಿಕ್ಷಕರನ್ನು ಭರ್ತಿ ಮಾಡುವುದಾಗಿ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಈ ತರಹದ ಹಸಿ ಸುಳ್ಳನ್ನು ಹೇಳಿಕೊಂಡು ಬರುತ್ತಿದೆ. ಆದರೆ ಶಿಕ್ಷಕರನ್ನು ಮಾತ್ರ ಭರ್ತಿ ಮಾಡುತ್ತಿಲ್ಲ ಎಂದು ದೂರಿದರು.

ಕರ್ನಾಟಕ ಪಬ್ಲಿಕ್ ಶಾಲೆಗಳ ಒಂದೇ ಸೂರಿನಡಿಯಲ್ಲಿ ಎಲ್ ಕೆ ಜಿ ಯಿಂದ ಪದವಿ ಪೂರ್ವ ಶಿಕ್ಷಣದವರೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ನಿಂದ ₹೨೫೦೦ ಕೋಟಿ ಸಾಲ ಪಡೆದು ಹಾಗೂ ಸಿ ಎಸ್ ಆರ್ ನಿಧಿಯಲ್ಲಿ ೫೦೦ ಹೊಸ ಪಬ್ಲಿಕ್ ಶಾಲೆ ತೆರೆಯುವುದಾಗಿ ಹಾಗೂ ಕಲ್ಯಾಣ ಕರ್ನಾಟಕದಲ್ಲಿ ೨೦೦ ಶಾಲೆಗಳನ್ನು ತೆರೆಯುದಾಗಿ ಘೋಷಣೆ ಮಾಡಿದೆ. ಆದರೆ ಇಂದು ಸರ್ಕಾರ ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲ್ಲಿಕ್ಕೂ ಆಗದೆ ಇರುವ ಶಾಲೆಗಳನ್ನೇ ಪಂಚಾಯತಿಗೊಂದು ಶಾಲೆಯಾಗಿ ಉನ್ನತೀಕರಣ ಮಾಡುತ್ತೆವೆ ಎನ್ನುತ್ತಿದ್ದಾರೆ. ಸರ್ಕಾರ ಹೇಳುವುದು ಒಂದು ಮಾಡುವುದು ಇನ್ನೊಂದು ಮಾಡುತ್ತಿದೆ. ಹಳ್ಳಿಗಳ ಸರ್ಕಾರಿ ಶಾಲೆಗಳನ್ನು ಮುಚ್ಚುವ ಹಾಗೂ ಶಿಕ್ಷಣ ಕ್ಷೇತ್ರವನ್ನು ಖಾಸಗಿಯವರಿಗೆ ಹಸ್ತಾಂತರಿಸುವ ವ್ಯವಸ್ಥಿತ ಹುನ್ನಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷ ಚಂದ್ರು ರಾಠೋಡ ಮಾತನಾಡಿ, ಹದಿನಾಲ್ಕು ವಯೋಮಾನದ ಪ್ರತಿ ಮಗುವೂ ತನ್ನ ಪ್ರಾಥಮಿಕ ಶಿಕ್ಷಣ ಪೂರ್ಣಗೊಳ್ಳುವವರೆಗೆ ನೆರೆಹೊರೆಯ ಶಾಲೆಯಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯುವುದು ಶಿಕ್ಷಣ ಹಕ್ಕು ಖಾಯ್ದೆ ಹಾಗೂ ಸಂವಿಧಾನದ ಹಕ್ಕಾಗಿದೆ. ಆದರೆ ೨೦೦೦ ಸಾವಿರ ಸರ್ಕಾರಿ ಶಾಲೆ ಖಾಸಗಿ ಜೋಡಣೆಗೆ ಹಾಗೂ ಕೆಪಿಎಸ್‌ಶಾಲೆ ಹೆಸರಿನಲ್ಲಿ ಪಂಚಾಯ್ತಿಗೊಂದು ಸರ್ಕಾರಿ ಶಾಲೆ ತೆರೆದು ಹಳ್ಳಿಗಳ ಸರ್ಕಾರಿ ಶಾಲೆಗಳನ್ನು ಮುಚ್ಚುವುದು ಸಂವಿಧಾನ ವಿರೋಧಿಯಾಗಿದೆ. ಹೀಗಾಗಿ ಈ ಯೋಜನೆಗಳನ್ನು ತಕ್ಷಣ ನಿಲ್ಲಿಸಬೇಕೆಂದು ಎಂದು ಆಗ್ರಹಿಸಿದರು.

ಈ ಸಂದರ್ಭ ಅನಿಲ ಆರ್., ಶರಣು ಮಾಟರಂಗಿ, ರವಿತೇಜ ಮಾದಿ, ಮೇಘನಾ, ಸಂಗಿತಾ, ಸೌಂದರ್ಯ, ಪ್ರೇರಣ, ಯಲ್ಲಮ್ಮ, ಅಕ್ಕಮಹಾದೇವಿ, ಸುರೇಶ, ಭೀಮಪ್ಪ ಸೇರಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫಿಲ್ಟರ್‌ ಮಾಡದೇ ಕಲುಷಿತ ನೀರು ಪೂರೈಕೆ ?
ಚಳಿಗಾಲದ ಅಧಿವೇಶನಕ್ಕೆ ಹೆಸ್ಕಾಂ ಸಕಲ ಸಿದ್ಧತೆ