ಕನ್ನಡಪ್ರಭ ವಾರ್ತೆ ಬಳ್ಳಾರಿ
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೀವಿ ಸಂಘದ ಪದಾಧಿಕಾರಿಗಳು ಹಾಗೂ ಹಿತೈಷಿಗಳು, ಟಿ.ಎಂ. ಲಿಂಗರಾಜ್ ಅವರ ನಿವೃತ್ತ ಬದುಕಿಗೆ ಶುಭ ಹಾರೈಸಿದರಲ್ಲದೆ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಶ್ರಮಿಸಿದ ಲಿಂಗರಾಜ್ ಅವರ ಕೊಡುಗೆಯನ್ನು ಸ್ಮರಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವೀವಿ ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ್ ಅವರು, ಟಿ.ಎಂ. ಲಿಂಗರಾಜ್ ಅವರು ಕೌಶಲ್ಯಪೂರ್ಣ ಬೋಧನೆ, ವಿದ್ಯಾರ್ಥಿಗಳಿಗೆ ಕಲಿಕೆಗೆ - ಮನವರಿಕೆಗೆ ಮತ್ತು ಮನನಕ್ಕೆ ಪೂರಕವಾಗಿ ಇಂಗ್ಲೀಷ್ ಭಾಷೆಯನ್ನು ಬೋಧಿಸಿದ್ದಾರೆ. ಹೀಗಾಗಿಯೇ ಅವರು ಅಪಾರ ಶಿಷ್ಯ ಬಳಗಕ್ಕೆ ಪ್ರೀತಿಯ ಮೇಷ್ಟ್ರು ಎನಿಸಿಕೊಂಡಿದ್ದಾರೆ. ಮಿತಭಾಷಿಯಾಗಿರುವ ಲಿಂಗರಾಜ್ ಅವರು ತಮ್ಮಲ್ಲಿರುವ ಅಗಾಧ ಜ್ಞಾನವನ್ನು ಮಕ್ಕಳಿಗೆ ಧಾರೆ ಎರೆದು ಶಿಕ್ಷಕ ವೃತ್ತಿಯ ಪಾವಿತ್ರ್ಯವನ್ನು ಕಾಪಾಡಿದ್ದಾರೆ.ಕೌಶಲ್ಯಪೂರ್ಣವಾದ ಬೋಧನೆಯಿಂದಾಗಿ ಶಿಕ್ಷಕರು ಮಕ್ಕಳಿಗೆ ಆಪ್ತರಾಗುತ್ತಾರೆ. ಅಷ್ಟೇ ಅಲ್ಲ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗುತ್ತಾರೆ ಎಂಬುದಕ್ಕೆ ಲಿಂಗರಾಜ್ ಅವರು ಸಾಕ್ಷಿಯಾಗಿದ್ದಾರೆ ಎಂದು ಬಣ್ಣಿಸಿದರು.
ವೀವಿ ಸಂಘದ ಖಜಾಂಚಿ ಬೈಲುವದ್ದಿಗೇರಿ ಎರ‍್ರಿಸ್ವಾಮಿ ಹಾಗೂ ಎಎಸ್‌ಎಂ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷೆ ಕಾತ್ಯಾಯಿನಿ ಎಂ. ಮರಿದೇವಯ್ಯ, ಲಿಂಗರಾಜ್ ಅವರ ಸೇವಾ ನಿವೃತ್ತಿ ಜೀವನ ಸುಖವಾಗಿರಲಿ. ವೀವಿ ಸಂಘದ ಪ್ರಗತಿಗೆ ಅವರು ಶ್ರಮಿಸಲಿ ಎಂದು ಹಾರೈಸಿದರು.
ಮಹಾದಾನಿ ಕೆ.ಎಂ. ಪಾರ್ವತಮ್ಮ, ವೀವಿ ಸಂಘದ ಮಾಜಿ ಅಧ್ಯಕ್ಷ ಎಚ್.ಎಂ. ಗುರುಸಿದ್ದಸ್ವಾಮಿ, ನಿವೃತ್ತ ಪ್ರಾಂಶುಪಾಲ ಎಲ್.ಲಿಂಗನಗೌಡ, ಕೆ.ದ್ವಾರಕೀಶ್,
ಎಸ್‌ಜಿ ಪ್ರೌಢಶಾಲೆಯ ಮುಖ್ಯಗುರು ನಾಗರತ್ನ ಪಾಟೀಲ್, ಎಸ್‌ಜಿ ಕಾಲೇಜಿನ ಪ್ರಾಂಶುಪಾಲ ಶರಣಬಸವರಾಜ್, ಡಾ. ಸಂಪಿಗೆ ನಾಗರಾಜ್ ಹಾಗೂ ದೈಹಿಕ ಶಿಕ್ಷಕ ಶರಣಗೌಡ ಅವರು ಕಾರ್ಯಕ್ರಮ ನಿರ್ವಹಿಸಿದರು.