ಜಿಬಿಎ ವ್ಯಾಪ್ತಿಯಲ್ಲಿ ಶೆ.74 ಪಿಯು ಫಲಿತಾಂಶ

KannadaprabhaNewsNetwork |  
Published : Apr 10, 2026, 01:30 AM IST
ಜಿಬಿಎ | Kannada Prabha

ಸಾರಾಂಶ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಶಿಕ್ಷಣ ಇಲಾಖೆಯ ಪದವಿ ಪೂರ್ವ ಕಾಲೇಜುಗಳು ಶೇ.74.16 ರಷ್ಟು ಫಲಿತಾಂಶ ದಾಖಲಿಸಿದ್ದು ಕಳೆದ ವರ್ಷಕ್ಕಿಂತ ಈ ಬಾರಿ ಶೇ.4ರಷ್ಟು (ಶೇ.70.11) ಹೆಚ್ಚಿನ ಸಾಧನೆ ಮಾಡಿವೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಶಿಕ್ಷಣ ಇಲಾಖೆಯ ಪದವಿ ಪೂರ್ವ ಕಾಲೇಜುಗಳು ಶೇ.74.16 ರಷ್ಟು ಫಲಿತಾಂಶ ದಾಖಲಿಸಿದ್ದು ಕಳೆದ ವರ್ಷಕ್ಕಿಂತ ಈ ಬಾರಿ ಶೇ.4ರಷ್ಟು (ಶೇ.70.11) ಹೆಚ್ಚಿನ ಸಾಧನೆ ಮಾಡಿವೆ. ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಬರುವ ಶಿಕ್ಷಣ ಇಲಾಖೆಯಲ್ಲಿ ಒಟ್ಟು 19 ಪದವಿ ಪೂರ್ವ ಕಾಲೇಜುಗಳಿದ್ದು, 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 2,593 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 1,923 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 74.16 ರಷ್ಟು ಫಲಿತಾಂಶ ಬಂದಿರುತ್ತದೆ. ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 2,593 ವಿದ್ಯಾರ್ಥಿಗಳ ಪೈಕಿ 260 ವಿದ್ಯಾರ್ಥಿಗಳು ಶೇ. 85 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಜಿಬಿಎ ನಗರ ಪಾಲಿಕೆಗಳ ಪದವಿ ಪೂರ್ವ ಕಾಲೇಜುಗಳಲ್ಲಿ ಪಶ್ಚಿಮ ನಗರ ಪಾಲಿಕೆಯ ಭೈರವೇಶ್ವರನಗರ ಪದವಿ ಪೂರ್ವ ಕಾಲೇಜು ಶೇ. 88.82 ಫಲಿತಾಂಶದೊಂದಿಗೆ ಅಗ್ರಸ್ಥಾನ ಪಡೆದಿದೆ. ಕೇಂದ್ರ ನಗರ ಪಾಲಿಕೆಯ ಕಸ್ತೂರಿಬಾನಗರ ಪದವಿ ಪೂರ್ವ ಕಾಲೇಜು ಶೇ. 86.45 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನ, ಪಶ್ಚಿಮ ನಗರ ಪಾಲಿಕೆಯ ಶ್ರೀರಾಂಪುರ ಪದವಿ ಪೂರ್ವ ಕಾಲೇಜು ಶೇ. 81.99 ಫಲಿತಾಂಶದೊಂದಿಗೆ ತೃತೀಯ ಸ್ಥಾನ ಪಡೆದಿದೆ.

ವೈಯಕ್ತಿಕ ಸಾಧನೆಯಲ್ಲಿ, ಉತ್ತರ ನಗರ ಪಾಲಿಕೆಯ ಕ್ಲೀವ್‌ ಲ್ಯಾಂಡ್ ಟೌನ್ ಪದವಿ ಪೂರ್ವ ಕಾಲೇಜಿನ ಫಿರ್ದೋಸ್ ಹಾಗೂ ಶಾಜೀದ್ ಅವರು ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 582 ಅಂಕಗಳನ್ನು (ಶೇ.97) ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಅದೇ ಕಾಲೇಜಿನ ಅರ್ಫಿನ್ ಖಾನಂ ವಿಜ್ಞಾನ ವಿಭಾಗದಲ್ಲಿ 600 ಕ್ಕೆ 578 ಅಂಕಗಳನ್ನು (ಶೇ.96.33) ಪಡೆದು ಮೆಚ್ಚುಗೆ ಪಡೆದಿದ್ದಾರೆ. ಪಶ್ಚಿಮ ನಗರ ಪಾಲಿಕೆಯ ಭೈರವೇಶ್ವರನಗರ ಪದವಿ ಪೂರ್ವ ಕಾಲೇಜಿನ ಮುಸ್ರತ್ ಅವರು ಕಲಾ ವಿಭಾಗದಲ್ಲಿ 600 ಕ್ಕೆ ಲ್ಲಿ 574 ಅಂಕಗಳನ್ನು (ಶೇ.95.66) ಗಳಿಸಿ ಸಾಧನೆ ಮಾಡಿದ್ದಾರೆ. ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಎಲ್ಲಾ 260 ವಿದ್ಯಾರ್ಥಿಗಳಿಗೆ ನಗರಪಾಲಿಕೆಗಳ ವತಿಯಿಂದ ತಲಾ 35 ಸಾವಿರ ರು.ಗಳ ಪ್ರೋತ್ಸಾಹಧನ ನೀಡಿ ಗೌರವಿಸಲಾಗುವುದು ಎಂದು ಜಿಬಿಎ ಶಿಕ್ಷಣ ವಿಭಾಗದ ಹಿರಿಯ ಸಹಾಯಕ ನಿರ್ದೇಶಕ ಮುನಿಶಾಮಪ್ಪ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಅಭಿನಂದನೆಜಿಬಿಎ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಭಿನಂದನೆ ತಿಳಿಸಿದ್ದಾರೆ.4 ವರ್ಷಗಳ ಫಲಿತಂಶ ಪಟ್ಟಿಶೈಕ್ಷಣಿಕ ವರ್ಷಫಲಿತಾಂಶ 2025-26ಶೇ.74.16

2024-25ಶೇ.70.11

2023-24ಶೇ.77.83

2022-23ಶೇ.63.18

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಝೂಂಬಿ ಡ್ರಗ್ಸ್ ಬಗ್ಗೆ ಸುಳ್ಳು ಸುದ್ದಿಹರಡಿದರೆ ಕ್ರಮ: ಸಿಂಗ್ ಎಚ್ಚರಿಕೆ
ಖಾಸಗಿ ಗೋದಾಮಿಗೆ ಬೆಂಕಿ:ಕೊಟ್ಯಂತರ ರು. ವಸ್ತು ಭಸ್ಮ