ಕನ್ನಡಪ್ರಭ ವಾರ್ತೆ ಶಹಾಪುರ
ನಗರದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಾಲಯದಲ್ಲಿ ನಡೆದ ಭೀಮರಾಯನಗುಡಿ ವಲಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಆಮಂತ್ರಣ ಪತ್ರಿಕೆಯಲ್ಲಿರುವಂತೆ ಸಮ್ಮೇಳನದ ಉದ್ಘಾಟನೆ, ಮೆರವಣಿಗೆ, ವಿವಿಧ ಗೋಷ್ಠಿಗಳಲ್ಲಿ ಸಂಪನ್ಮೂಲ ವ್ಯಕ್ತಿಗಳು, ವಿದ್ವಾಂಸರು, ಸಾಹಿತಿಗಳು, ಗಣ್ಯ ವ್ಯಕ್ತಿಗಳು ಪಾಲ್ಗೊಂಡು ತಮ್ಮ ಚಿಂತನೆಗಳನ್ನು ವ್ಯಕ್ತಪಡಿಸಲಿದ್ದಾರೆ. ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪೂರ ಅವರು ಎಲ್ಲರನ್ನು ಒಳಗೊಳ್ಳುವ ಮಾದರಿ ಸಮ್ಮೇಳನವಾಗಿಸಲು ಎಲ್ಲಾ ರೀತಿಯಿಂದ ಸಹಕಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.ಮಾ.2ರಂದು ಭೀಮರಾಯನಗುಡಿಯ ಸಿದ್ಧಾರೂಢ ಮಠದಲ್ಲಿ ಜರುಗಲಿರುವ 4ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಾಡಿನ ಸಮಸ್ತ ಕನ್ನಡದ ಬಂಧುಗಳು ಮತ್ತು ಎಲ್ಲಾ ಶಾಲಾ-ಕಾಲೇಜುಗಳ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಭೀಮರಾಯಗುಡಿಯ ವಲಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶರಣಬಸವ ಪೊಲೀಸ್ ಬಿರಾದಾರ್ ಮನವಿ ಮಾಡಿದ್ದಾರೆ.