ಶೀಘ್ರ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಟಿ.ಎಂ.ಶಾಹೀದ್‌

KannadaprabhaNewsNetwork |  
Published : Nov 28, 2026, 02:45 AM IST
ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಾಹೀದ್ ತೆಕ್ಕಿಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು  | Kannada Prabha

ಸಾರಾಂಶ

ರಾಜ್ಯ ಸರ್ಕಾರ ಹೊರಡಿಸಿದ ಕನಿಷ್ಠ ವೇತನ ಅಧಿಸೂಚನೆಯ ವಿಚಾರವಾಗಿ ಮಾಲಕರ ಸಂಘಟನೆಗಳು ಹೈಕೋರ್ಟ್ ಮೆಟ್ಟಿಲೇರಿವೆ. ಇದನ್ನು ಬಗೆ ಹರಿಸುವ ನಿಟ್ಟಿನಲ್ಲಿ ಸರ್ಕಾರ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ 8 ಸಚಿವರನ್ನೊಳಗೊಂಡ ಸಚಿವ ಸಂಪುಟ ಉಪಸಮಿತಿ ರಚಿಸಿದ್ದು, ಅದರ ಮೂಲಕ ನ್ಯಾಯಾಲಯದ ವಿಚಾರಗಳನ್ನು ಪರಿಹರಿಸಿ ಶೀಘ್ರ ಕನಿಷ್ಠ ವೇತನ ಜಾರಿಗೊಳಿಸಲು ಪ್ರಯತ್ನ ನಡೆಯುತ್ತಿದೆ ಎಂದು ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಾಹೀದ್ ತೆಕ್ಕಿಲ್ ತಿಳಿಸಿದರು.

ಮಂಗಳೂರು: ರಾಜ್ಯ ಸರ್ಕಾರ ಹೊರಡಿಸಿದ ಕನಿಷ್ಠ ವೇತನ ಅಧಿಸೂಚನೆಯ ವಿಚಾರವಾಗಿ ಮಾಲಕರ ಸಂಘಟನೆಗಳು ಹೈಕೋರ್ಟ್ ಮೆಟ್ಟಿಲೇರಿವೆ. ಇದನ್ನು ಬಗೆ ಹರಿಸುವ ನಿಟ್ಟಿನಲ್ಲಿ ಸರ್ಕಾರ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ 8 ಸಚಿವರನ್ನೊಳಗೊಂಡ ಸಚಿವ ಸಂಪುಟ ಉಪಸಮಿತಿ ರಚಿಸಿದ್ದು, ಅದರ ಮೂಲಕ ನ್ಯಾಯಾಲಯದ ವಿಚಾರಗಳನ್ನು ಪರಿಹರಿಸಿ ಶೀಘ್ರ ಕನಿಷ್ಠ ವೇತನ ಜಾರಿಗೊಳಿಸಲು ಪ್ರಯತ್ನ ನಡೆಯುತ್ತಿದೆ ಎಂದು ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಾಹೀದ್ ತೆಕ್ಕಿಲ್ ತಿಳಿಸಿದರು.ಅವರು ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಮೇ 22ರಂದು ಹೊರಡಿಸಿದ ಪರಿಷ್ಕೃತ ಕನಿಷ್ಠ ವೇತನ ಅಧಿಸೂಚನೆಯ ಪ್ರಕಾರ, ರಾಜ್ಯದ ಕಾರ್ಮಿಕರ ಕನಿಷ್ಠ ವೇತನವನ್ನು ಸರಾಸರಿ ಶೇ. 60 ರಷ್ಟು ಹೆಚ್ಚಿಸಲಾಗಿದೆ. ಆದರೆ ಇದನ್ನು ವಿರೋಧಿಸಿ ಉದ್ಯೋಗದಾತರ ಸಂಘಟನೆಗಳು ಹೈಕೋರ್ಟ್ ಮೆಟ್ಟಿಲೇರಿದೆ. ಆದರೆ ಈ ಅಧಿಸೂಚನೆಗೆ ಯಾವುದೇ ತಡೆಯಾಜ್ಞೆ ನೀಡಿಲ್ಲ. ಕೆಲವು ಸಂಸ್ಥೆಗಳು ವೇತನ ಹೆಚ್ಚಳ ಮಾಡಿ ಬಳಿಕ ಕಡಿಮೆ ಮಾಡಿವೆ ಎಂದರು.ರಾಜ್ಯದಲ್ಲಿ ಸುಮಾರು 3.5 ಕೋಟಿ ಕಾರ್ಮಿಕರಿದ್ದು, ಜಿಲ್ಲೆಯಲ್ಲಿ ಸುಮಾರು 2.5 ಲಕ್ಷ ಕಾರ್ಮಿಕರಿದ್ದಾರೆ. ಸುಮಾರು 9 ವರ್ಷದಿಂದ ರಾಜ್ಯದಲ್ಲಿ ಕನಿಷ್ಠ ವೇತನ ಹೆಚ್ಚಿಸಿರಲಿಲ್ಲ. ಈ ಬಾರಿಯ ಕನಿಷ್ಠ ವೇತನ ಜಾರಿಯಾದರೆ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಬಡ-ಮಧ್ಯಮದ ವರ್ಗದವರಿಗೆ ನೆರವಾಗಲಿದೆ. ಕಾರ್ಮಿಕರಿಗೆ ನ್ಯಾಯವೊದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಲಾಗುವುದು ಎಂದರು.

ಹಿರಿಯ ಕಾರ್ಮಿಕ ನಿರೀಕ್ಷಕಿ ಮೇರಿ ಫೆಡ್ರಿಕ್, ಅಧ್ಯಕ್ಷರ ಆಪ್ತ ಸಹಾಯಕ ಗುಲಾಂ ಮುಸ್ತಫಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಅಸ್ವಸ್ಥ ಯುವತಿ ಮೇಲೆ ಅತ್ಯಾಚಾರ: ಆರೋಪಿ ಸೆರೆ
ಮೋಡಿ ಲಿಪಿ ದಾಖಲೆ ಭಾಷಾಂತರ, ಸಂರಕ್ಷಣೆಗೆ ಒಪ್ಪಂದ