ಕನ್ನಡಪ್ರಭ ವಾರ್ತೆ ಕಲಬುರಗಿ
ಕಲ್ಯಾಣ ನಾಡಿನ ಹೆಬ್ಬಾಗಿಲು ಕಲಬುರಗಿಯಲ್ಲಿ ಗುರುವಾರ ನಡೆದ 79ನೇ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಪಾಲ್ಗೊಂಡು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್‌ರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದ ನಂತರ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸತ್ಯಕ್ಕೆ ಸಮನಿಲ್ಲ. ಹಸ್ತಕ್ಕಿಂತ ಅಧಿಕ ಹಿತವಿಲ್ಲ. ಈ ಹಸ್ತದಿಂದಲೇ ದೇಶದ ಅಭಿವೃದ್ಧಿಯಾಗಿದೆ. ಕರ್ನಾಟಕದ ಅಭಿವೃದ್ಧಿಯಾಗಿದೆ. ಕಾಂಗ್ರೆಸ್‌ನಿಂದಲೇ ಕಲ್ಯಾಣ ನಾಡಿನ ಹಣೆ ಬರಹ ಬದಲಾಗುತ್ತಿದೆ ಎಂದು ಪ್ರತಿಪಾದಿಸಿದರು.ಕಲ್ಯಾಣ ಕರ್ನಾಟಕದ ಕಲ್ಯಾಣ ತಮ್ಮ ಸರ್ಕಾರದ ಆದ್ಯತೆ ಎಂದು ಹೇಳಿದ ಮುಖ್ಯಮಂತ್ರಿಗಳು, ಬೆಂಗಳೂರು ಕರ್ನಾಟಕದ ಕಿರೀಟ, ಕಲ್ಯಾಣ ಕರ್ನಾಟಕ ರಾಜ್ಯದ ಶಕ್ತಿಪೀಠ ಎಂದು ಬಣ್ಣಿಸಿದರು.
ಇದಕ್ಕಾಗಿ ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ನೇತೃತ್ವದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯದ ಮುಖ್ಯಮಂತ್ರಿಗಳನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಈ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ ಎಂದರು.
ಧರಂಸಿಂಗ್ ವರದಿಯ ಆಧಾರದ ಮೇಲೆ 1990ರಲ್ಲಿ ಹೈದರಾಬಾದ್-ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪನೆಯಾಯಿತು.
ಬಸವಣ್ಣನವರ ಹೋರಾಟದ ನೆಲ, ಸಮಾನತೆ, ಮಾನವೀಯತೆ, ಸಹಬಾಳ್ವೆಯ ಸಂದೇಶ ನೀಡಿದ ಪುಣ್ಯಭೂಮಿ ಈ ಕಲ್ಯಾಣ ಕರ್ನಾಟಕ. ಬಸವಣ್ಣನವರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದ ನೆಲ ಕಲ್ಯಾಣ ಕರ್ನಾಟಕ. ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರ ಶ್ರಮದಿಂದ ಕಲ್ಯಾಣವಾಗುತ್ತಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಕಲಬುರಗಿ ಶಾಸಕರಾದ ಅಲ್ಲಂಪ್ರಭು ಪಾಟೀಲ್, ಖನೀಜ್ ಫಾತೀಮಾ, ಮೇಯರ್ ಅಜ್ಮಲ್ ಗೋಲಾ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಹರವಾಳ್, ಕುಡಾ ಅಧ್ಯಕ್ಷ ಮಜರ್ ಅಲಂ ಖಾನ್, ಡೀಸಿ ಇಕ್ರಂ ಶರೀಫ್, ಪೊಲೀಸ್ ಕಮೀಶ್ನರ್ ಡಾ. ಶರಣಪ್ಪ ಢಗೆ, ಎಸ್ಪಿ ಅಡ್ಡೂರು ಶ್ರೀನಿವಾಸುಲು, ಐಜಿಪಿ ಶಾಂತನು ಸಿನ್ಹಾ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು ಇದ್ದರು.
1. ಕಲ್ಯಾಣ ಕರ್ನಾಟಕ ಎಕಾನಮಿ ಮಿಷನ್: ಕೈಗಾರಿಕಾ ಬೆಳವಣಿಗೆ, ಹೂಡಿಕೆಗೆ ವೇಗ ನೀಡಲು ಸೆಕ್ಷನ್ 8 ಕಂಪನಿಯಾಗಿ ಕಲ್ಯಾಣ ಕರ್ನಾಟಕ ಎಕಾನಮಿ ಮಿಷನ್ ಸ್ಥಾಪಿಸಿ ಹೂಡಿಕೆಗಳನ್ನು ಆಕರ್ಷಿಸಿ ಹೊಸ ಆರ್ಥಿಕ ಅವಕಾಶಗಳ ಸೃಷ್ಟಿಗೆ ಒತ್ತು
3. ರಕ್ತಹೀನತೆ ವಿರುದ್ಧ ವಿಶೇಷ ಅಭಿಯಾನ: ಈ ಪ್ರದೇಶದಲ್ಲಿ ರಕ್ತಹೀನತೆಯ ಪ್ರಮಾಣವನ್ನು ಕಡಿಮೆ ಮಾಡಲು ಮುಂದಿನ 2 ವರ್ಷಗಳ ಕಾಲ ತಪಾಸಣೆ, ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗೆ ವಿಶೇಷ ಅಭಿಯಾನ.
4. ಕಲಬುರಗಿ ನಗರದ ಮೂಲಸೌಕರ್ಯ: ವೇಗವಾಗಿ ಬೆಳೆಯುತ್ತಿರುವ ಕಲಬುರಗಿ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಸೇಡಂ ರಸ್ತೆಯ ರಿಂಗ್ ರೋಡ್‌ನಲ್ಲಿ ಮೇಲ್ಸೇತುವೆ ನಿರ್ಮಾಣ, ಹೊಸ ಪೆರಿಫೆರಲ್ ರಿಂಗ್ ರೋಡ್ ಡಿಪಿಆರ್ ಸಿದ್ಧಪಡಿಸಲು ಕ್ರಮ, ₹30 ಕೋಟಿ ವೆಚ್ಚದಲ್ಲಿ ಹಸಿರು ಮತ್ತು ಸಾರ್ವಜನಿಕ ವಿಹಾರ ತಾಣವಾಗಿ ಅಪ್ಪನ ಕೆರೆ, ಉದ್ಯಾನ ಅಭಿವೃದ್ಧಿ.5. ನಿವೇಶನರಹಿತ ಕುಟುಂಬಗಳಿಗೆ 50,000 ನಿವೇಶನಗಳು.
6. ಕಲಬುರಗಿಯಲ್ಲಿ ಐಟಿ ಪಾರ್ಕ್ ಮತ್ತು KRIYA: ಐಟಿ ಮತ್ತು ನಾವೀನ್ಯತಾ ಕ್ಷೇತ್ರದ ಬೆಳವಣಿಗೆಯನ್ನು ಬೆಂಗಳೂರಿನಾಚೆಗೂ ವಿಸ್ತರಿಸಲು ಕಲಬುರಗಿಯಲ್ಲಿ 30 ಎಕರೆ ಪ್ರದೇಶದಲ್ಲಿ ಐಟಿ ಪಾರ್ಕ್ ಅಭಿವೃದ್ಧಿ, ನಾವೀನ್ಯತೆ, ಸ್ಟಾರ್ಟ್‌ಅಪ್‌ಗಳು ಮತ್ತು ಯುವ ಉದ್ಯಮಿಗಳನ್ನು ಉತ್ತೇಜಿಸಲು KRIYA - Kalaburagi Research, Innovation and Youth Accelerator ಸ್ಥಾಪನೆ.7 . ಪ್ರವಾಸೋದ್ಯಮ ಮತ್ತು ಪಾರಂಪರಿಕ ತಾಣಗಳ ಅಭಿವೃದ್ಧಿ: ಕಲಬುರಗಿ ಕೋಟೆ, ಶರಣಬಸವೇಶ್ವರ ದೇವಸ್ಥಾನ, ಖ್ವಾಜಾ ಬಂದೇ ನವಾಜ್ ದರ್ಗಾ, ಬುದ್ಧ ವಿಹಾರ, ಮಳಖೇಡ, ಸನ್ನತಿ ಮತ್ತು ಗಾಣಗಾಪುರವನ್ನು ಸಂಪರ್ಕಿಸುವ ಪುಣ್ಯ ಯಾತ್ರಾ ಸರ್ಕ್ಯೂಟ್ ಅಭಿವೃದ್ಧಿ. ಕೆಕೆಆರ್‌ಡಿಬಿ ಅನುದಾನದಲ್ಲಿ ಮಳಖೇಡ, ನಾಗಾವಿ, ಕಾಳಗಿ ಮತ್ತು ಸನ್ನತಿಯ ಪಾರಂಪರಿಕ ತಾಣಗಳ ಪುನರಾಭಿವೃದ್ಧಿ. ಗಾಣಗಾಪುರದಲ್ಲಿ ಮೊದಲ ಹಂತದಲ್ಲಿ ₹50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೆ ಯೋಜನೆ, ಕಲಬುರಗಿಯಲ್ಲಿ ವಚನ ಮಂಟಪ ಸ್ಥಾಪನೆ.
8. ಕ್ರೀಡಾ ಮೂಲಸೌಕರ್ಯ: ಕಲಬುರಗಿ ಚಂದ್ರಶೇಖರ ಪಾಟೀಲ ಕ್ರೀಡಾಂಗಣ ಆಧುನಿಕ ಕ್ರೀಡಾ ಮೂಲಸೌಕರ್ಯದೊಂದಿಗೆ ಸಮಗ್ರ ಪುನರಾಭಿವೃದ್ಧಿ ಕ್ರಿಕೆಟ್ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಕೆಎಸ್‌ಸಿಎ ಜೊತೆ ಒಡಂಬಡಿಕೆ, ಹಡಗಿಲ ಹಾರುತಿ ಗ್ರಾಮದಲ್ಲಿ “ಸ್ಪೋಟ್ಸ್ ಸಿಟಿ” ಸ್ಥಾಪನೆ.9. ಕೋಟಿ ವೃಕ್ಷ ಅಭಿಯಾನ: ಹಸಿರು ಹೊದಿಕೆಯನ್ನು ಹೆಚ್ಚಿಸಲು ಮುಂದಿನ ಎರಡು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಾದ್ಯಂತ ಕೋಟಿ ವೃಕ್ಷ ಅಭಿಯಾನ