ಕಾರಟಗಿ:
ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಿದ ಹಿನ್ನೆಲೆ ಪಟ್ಟಣದ ಕೇಂದ್ರ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಸ್‌ಗಳಿಗೆ ಪೂಜೆ ಸಲ್ಲಿಸಿ, ಸಿಹಿ ಹಂಚಿ ಮಾತನಾಡಿದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಎರಡು ವರ್ಷ ಪೂರೈಸಿದ್ದು, ಕೋಟ್ಯಂತರ ಮಹಿಳೆಯರು ಇದರ ಸದುಪಯೋಗ ಪಡೆದುಕೊಂಡಿದ್ದಾರೆ. ಯೋಜನೆಯಿಂದ ಮಹಿಳೆಯರು ಉಚಿತವಾಗಿ ಪ್ರವಾಸಿ ತಾಣ, ಧಾರ್ಮಿಕ ಸ್ಥಳ ಮತ್ತು ವ್ಯಾಪಾರ-ವಹಿವಾಟುಗಳಿಗೆ ಪ್ರಯಾಣಿಸಿದ್ದಾರೆ. ಪ್ರಯಾಣದಿಂದ ಉಳಿದ ಹಣ ದೈನಂದಿನ ಜೀವನಕ್ಕೆ ಬಳಸಬಹುದಾಗಿದೆ. ಇದರಿಂದ ಮಹಿಳೆಯರು ಪುರುಷರ ಮೇಲೆ ಎಲ್ಲದಕ್ಕೂ ಅವಲಂಬಿತವಾಗಿರುವುದನ್ನು ತಪ್ಪಿಸಲಾಗಿದೆ ಎಂದರು. ಬಳಿಕ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ನಾಗರಾಜ್ ಅರಳಿ ಹಾಗೂ ಸಮಿತಿ ಸದಸ್ಯ ಸೋಮನಾಥ್ ದೊಡ್ಡಮನಿ ಮಾತನಾಡಿದರು.ಈ ವೇಳೆ ಗ್ಯಾರಂಟಿ ಸಮಿತಿ ತಾಲೂಕು ಹಾಗೂ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಶಕ್ತಿ ಯೋಜನೆ ಫಲಾನುಭವಿಗಳಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಬಳಿಕ ಸಂಚಾರ ನಿಯಂತ್ರಕ ಪರಶುರಾಮ ಬಣ್ಣದ, ಹುಸೇನಸಾಬ್ ಹಾಗೂ ಚಾಲಕ ಚನ್ನಬಸಯ್ಯ ತೋಟದ, ನಿರ್ವಾಹಕ ಹನುಮಂತಪ್ಪ ಮುಳ್ಳೂರು ಅವರನ್ನು ಸನ್ಮಾನಿಸಲಾಯಿತು.