ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಶಕ್ತಿಧಾಮ ಟ್ರಸ್ಟ್ ನ ಶಕ್ತಿಧಾಮ ವಿದ್ಯಾಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣ ತಜ್ಞರ ಸಲಹೆ ಸೂಚನೆಗಳನ್ನು ಪರಿಗಣಿಸಿ ಎಲ್ಲರಿಗೂ ಸಮಾನವಾದ ಶಿಕ್ಷಣ ಸಿಗುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದರು.
ಜಾತಿ, ಧರ್ಮ ಸೇರಿದಂತೆ ಯಾವುದೇ ಬೇಧವಿಲ್ಲದೆ ಕಲಿಯುವ ವಾತಾವರಣವನ್ನು ನಿರ್ಮಿಸುತ್ತೇವೆ. ಎಲ್ಲಾ ಸಾಧಕರು ಸರ್ಕಾರಿ ಶಾಲೆಯಲ್ಲಿಯೇ ಓದಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೈಬಿಟ್ಟು ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸುತ್ತಿದ್ದು, ಶಿಕ್ಷಣ ಕ್ಷೇತ್ರದ ಪ್ರಗತಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಅವರು ಹೇಳಿದರು.ಹಿಂದೆ ಶಿಕ್ಷಣ ಪಡೆಯುವುದು ಕಷ್ಟವಾಗಿತ್ತು. ತಂದೆ ತಾಯಿಗಳು ಕೂಲಿ ಮಾಡುತ್ತಿದ್ದರಿಂದ ಎಲ್ಲರಿಗೂ ಶಿಕ್ಷಣ ಸಿಗುತ್ತಿರಲಿಲ್ಲ. ಈಗ ಎಲ್ಲರಿಗೂ ಉಚಿತ ಶಿಕ್ಷಣ ಸಿಗುತ್ತಿದೆ. ರಾಜ್ಯದ 1.20 ಲಕ್ಷ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯಲ್ಲಿ ಇದ್ದಾರೆ. ಸರ್ಕಾರಿ ಶಾಲೆಯ ಮಕ್ಕಳು ನೆಲದ ಮೇಲೆ ಕೂರಬಾರದು, ಎಲ್ಲಾ ಮಕ್ಕಳು ಬೆಂಚಿನ ಮೇಲೆ ಕೂರುವ ವ್ಯವಸ್ಥೆ ಮಾಡುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ಅವರು ತಿಳಿಸಿದರು.
ಕೆಎಂಎಫ್‌ಅಧ್ಯಕ್ಷ ಭೀಮಾ ನಾಯಕ್ ಮಾತನಾಡಿ, ಕೆಎಂಎಫ್ ನಿಂದ ಶಕ್ತಿಧಾಮಕ್ಕೆ ನಿತ್ಯ 55 ಲೀಟರ್‌ಹಾಲು ಬರುತ್ತಿದೆ. ಮಕ್ಕಳಿಗಾಗಿ ನಂದಿನಿ ಚಾಕೋಲೇಟ್‌ಸಿಗುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ನಟ ಶಿವರಾಜ್ ಕುಮಾರ್ ಮಾತನಾಡಿ, ನನ್ನನ್ನು ಸೇರಿದಂತೆ ಅನೇಕರು ಸರ್ಕಾರಿ ಶಾಲೆಯಲ್ಲಿ ಓದಿದ್ದಾರೆ. ಎಲ್ಲಿ ಓದುತ್ತೇವೆ ಎಂಬುದು ಮುಖ್ಯವಲ್ಲ. ಯಾವ ರೀತಿ ಓದುತ್ತೇವೆ ಎಂಬುದು ಮುಖ್ಯವಾಗುತ್ತದೆ. ಸರ್ಕಾರಿ ಶಾಲೆಯಲ್ಲಿ ಓದಿ ದೊಡ್ಡ ಮನುಷ್ಯರಾದವರು ಇದ್ದಾರೆ ಎಂದು ತಿಳಿಸಿದರು.