ಕನ್ನಡಪ್ರಭ ವಾರ್ತೆ ಬೆಂಗಳೂರು
ಬಿಬಿಎಂಪಿಯಲ್ಲಿನ ಇಂಟಿಗ್ರೇಟೆಡ್ ಕಮಾಂಡ್ ಕಂಟ್ರೋಲ್ ಸೆಂಟರ್‌ಗೆ (ಐಸಿಸಿಸಿ) ಭೇಟಿ ನೀಡಿ ಪರಿಶೀಲಿಸಿದ ಅವರು, ನಗರದಲ್ಲಿನ ಸಮಸ್ಯೆಗಳನ್ನು ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ರಸ್ತೆ ಗುಂಡಿ, ಸಾರಿಗೆ ವ್ಯವಸ್ಥೆ ಉತ್ತಮಗೊಳಿಸುವುದು, ಸಂಚಾರ ದಟ್ಟಣೆ ನಿಯಂತ್ರಣ ಸೇರಿದಂತೆ ಇನ್ನಿತರ ವಿಚಾರದಲ್ಲಿ ಎಲ್ಲ ಇಲಾಖೆಗಳು ಕೆಲಸ ಮಾಡಬೇಕು. ಅಲ್ಲದೆ, ಮಳೆಗಾಲಲ್ಲಿ ದೂರುಗಳು ಬಂದ ಕೂಡಲೇ ಸಂಬಂಧಪಟ್ಟ ಇಲಾಖೆಗಳು ಕೂಡಲೆ ಕಾರ್ಯಪ್ರವೃತ್ತರಾಗಿ ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದರು.ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ.ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಬಿಎಂಆರ್‌ಡಿಎ ಆಯುಕ್ತ ರಾಜೇಂದ್ರ ಚೋಳನ್, ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ನಿರ್ದೇಶಕಿ ಸುಶೀಲಮ್ಮ ಇತರರಿದ್ದರು.