ಶಾಮನೂರು ಮನೆತನಕ್ಕೆ ರಾಜಕಾರಣ ಹೊಸದಲ್ಲ

KannadaprabhaNewsNetwork |  
Published : Apr 07, 2024, 01:53 AM IST
ಪಟ್ಟಣದ ಹೊರ ವಲಯದಲ್ಲಿರುವ ಜವಳಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರ ಸಭೆಯ ಉದ್ಘಾಟನೆಯನ್ನು ನೆರವೇರಿಸಿದ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಡಾ.ಪ್ರಭಾಮಲ್ಲಿಕಾರ್ಜುನ್, ಶಾಸಕ ಶಿವಗಂಗಾ ವಿ.ಬಸವರಾಜ್, ಮಾಜಿ ಶಾಸಕ ವಡ್ನಾಳ್ ರಾಜಣ್ಣ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದಾರೆ | Kannada Prabha

ಸಾರಾಂಶ

ಶಾಮನೂರು ಮನೆತನಕ್ಕೆ ರಾಜಕಾರಣ ಹೊಸದಲ್ಲ ನಾನು ಸಹ ಕಳೆದ 25 ವರ್ಷಗಳಿಂದ ಮಾವನವರಾದ ಶಾಮನೂರು ಶಿವಶಂಕ್ರಪ್ಪ ಮತ್ತು ಎಸ್.ಎಸ್.ಮಲ್ಲಿಕಾರ್ಜುನ್ ಸ್ಪರ್ಧಿಸಿದ್ದ ಚುನಾವಣೆಗಳಲ್ಲಿ ಪ್ರಚಾರ ಮಾಡಿ ಯಶಸ್ಸನ್ನು ಕಂಡಿದ್ದೇವೆ.

ಚನ್ನಗಿರಿ: ಶಾಮನೂರು ಮನೆತನಕ್ಕೆ ರಾಜಕಾರಣ ಹೊಸದಲ್ಲ ನಾನು ಸಹ ಕಳೆದ 25 ವರ್ಷಗಳಿಂದ ಮಾವನವರಾದ ಶಾಮನೂರು ಶಿವಶಂಕ್ರಪ್ಪ ಮತ್ತು ಎಸ್.ಎಸ್.ಮಲ್ಲಿಕಾರ್ಜುನ್ ಸ್ಪರ್ಧಿಸಿದ್ದ ಚುನಾವಣೆಗಳಲ್ಲಿ ಪ್ರಚಾರ ಮಾಡಿ ಯಶಸ್ಸನ್ನು ಕಂಡಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಮಾತ್ರ ಯಶಸ್ಸುಗಳಿಸಲು ಸಾಧ್ಯವಾಗುತ್ತಿಲ್ಲ. ಆದರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹಾಗೆ ಆಗಬಾರದು ಕಾರ್ಯಕರ್ತರು ವಿಧಾನಸಭಾ ಚುನಾವಣೆಯಲ್ಲಿ ಕೆಲಸ ಮಾಡಿದ ರೀತಿಯಲ್ಲಿ ಲೋಕಸಭಾ ಚುನಾವಣೆಯಲ್ಲೂ ಕೆಲಸ ಮಾಡಿದರೆ ಯಶಸ್ಸು ಲಭಿಸಲಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ಜವಳಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಕಳೆದ 3 ಲೋಕಸಭಾ ಚುನಾವಣೆಗಳಲ್ಲಿ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಸ್ಪರ್ಧಿಸಿದ್ದರು. ಆ ಮೂರು ಚುನಾವಣೆಗಳಲ್ಲಿಯೂ ಚನ್ನಗಿರಿ ವಿಧಾನಸಭಾ ಕ್ಷೇತ್ರದಿಂದ ನಿರೀಕ್ಷಿತ ಮತಗಳು ಬಾರದೆ ಹಿನ್ನಡೆಯಾಗಿದ್ದು, ಈ ಮಾತನ್ನು ಚನ್ನಗಿರಿ ವಿಧಾನಸಭಾ ಕ್ಷೆತ್ರದ ಕಾರ್ಯಕರ್ತರೇ ಒಪ್ಪಿಕೊಂಡಿದ್ದು, ಈ ಬಾರಿಯ ಚುನಾವಣೆಯಲ್ಲಿ ಹೀಗಾಗದಂತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಕೊಡಿಸಿದ ಮತಗಳಿಗಿಂತ ಹೆಚ್ಚಿನ ಮತಗಳನ್ನು ಕೊಡಿಸಬೇಕು ಎಂದರು.

ಶಾಸಕ ಬಸವರಾಜು ವಿ.ಶಿವಗಂಗಾ ಮಾತನಾಡಿ, ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ನಾಯಕರಿಗೆ ಧೈರ್ಯ ಇದ್ದರೆ ಸ್ಥಳೀಯ ವ್ಯಕ್ತಿಗಳಿಗೆ ಟಿಕೆಟ್ ನೀಡಿ ಗೆಲ್ಲಿಸಿಕೊಳ್ಳಲಿ. ಅದು ಬಿಟ್ಟು ಚಿತ್ರದುರ್ಗ ಜಿಲ್ಲೆಯವರಿಗೆ ಟಿಕೆಟ್ ನೀಡುತ್ತಿದ್ದೀರಿ ದಾವಣಗೆರೆ ಜಿಲ್ಲೆಯಲ್ಲಿ ಬಿಜೆಪಿಯ ಯಾವ ನಾಯಕರಿಗೂ ಸಂಸದರಾಗುವ ಆರ್ಹತೆಗಳಿಲ್ಲವೆ ಎಂದು ಕೆಣಕಿದರು.

ಮಾಜಿ ಶಾಸಕ ವಡ್ನಾಳ್ ರಾಜಣ್ಣ ಮಾತನಾಡಿ, ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ರಾಜ್ಯದ ಜನತೆಗೆ ನೀಡಿದ್ದ ಎಲ್ಲಾ 5 ಗ್ಯಾರಂಟಿಗಳನ್ನು ಈಡೇರಿಸಿದ್ದು, ಕಾರ್ಯಕರ್ತರು ಧೈರ್ಯವಾಗಿ ಮತದಾರರ ಬಳಿ ಹೋಗಿ ಮತಗಳನ್ನು ಕೇಳಬಹುದು ಎಂದು ಹೇಳುತ್ತಾ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪ್ರತಿ ಬೂತ್‌ನಿಂದ ಪಕ್ಷಗಳಿಸಿದ ಮತಗಳಿಗಿಂತ 50 ಮತಗಳನ್ನು ಹೆಚ್ಚಿಗೆ ಕೊಡಿಸಿ. ಲೋಕಸಭಾ ಚುನಾವಣೆಯಲ್ಲಿ ಸೋಲಿಗೆ ಚನ್ನಗಿರಿ ಕ್ಷೇತ್ರವೇ ಕಾರಣ ಎಂಬ ಕಳಂಕವನ್ನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅಳಿಸಿ ಹಾಕೋಣ ಎಂದರು.

ಮುಖ್ಯ ಅತಿಥಿಗಳಾಗಿ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಸಿ.ಎಚ್.ಶ್ರೀನಿವಾಸ್, ಮುಖಂಡರಾದ ಹೊದಿಗೆರೆ ರಮೇಶ್, ಪಾಂಡೋಮಟ್ಟಿ ಲೋಕಣ್ಣ, ಬಿ.ಜಿ.ನಾಗರಾಜ್, ಅಮಾನುಲ್ಲಾ, ಸಂತೆಬೆನ್ನೂರು ಸಿದ್ದಣ್ಣ, ವಿರೇಶ್ ನಾಯ್ಕ್, ವಡ್ನಾಳ್ ಜಗದೀಶ್, ಜ್ಯೋತಿ ಕೊಟ್ರೇಶ್ ಕೋರಿ, ಶಶಿಕಲಾ ಮೂರ್ತಿ, ಸಿ.ನಾಗರಾಜ್, ಜಿ.ನಿಂಗಪ್ಪ, ಕೆ.ಆರ್.ಮಂಜುನಾಥ್, ಜಿತೇಂದ್ರ ಕಂಚುಗಾರ್, ಶಶಿಕುಮಾರ್, ಗೌಸ್ ಪೀರ್, ಅಮೀರ್ ಅಹಮದ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದ್ದರು.

ಸಭೆ ಆರಂಭಕ್ಕೂ ಮುನ್ನ ಪಟ್ಟಣದ ತರಳಬಾಳು ವೃತ್ತದಿಂದ ಪಕ್ಷದ ಕಾರ್ಯಕರ್ತರು ಬೈಕ್ ರ್‍ಯಾಲಿ ಮೂಲಕ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಭವ್ಯ ಸ್ವಾಗತ ಕೋರಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಕರೆ ತಂದರು.

PREV

Recommended Stories

ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''