ಅಭಾವೀಮ ಚುನಾವಣೆಗೆ ಪುನರಾಯ್ಕೆ ಬಯಸಿ ಶಾಮನೂರು ನಾಮಪತ್ರ

KannadaprabhaNewsNetwork |  
Published : Sep 06, 2024, 01:03 AM IST
5ಕೆಡಿವಿಜಿ13-ಅಭಾವೀಮ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಪುನರಾಯ್ಕೆ ಬಯಸಿ ಹಾಲಿ ಅಧ್ಯಕ್ಷರು, ದಾವಣಗೆರೆ ದಕ್ಷಿಣ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಬೆಂಗಳೂರಿನ ಮಹಾಸಭಾ ಕಚೇರಿಯಲ್ಲಿ ಗುರುವಾರ ಮುಖ್ಯ ಚುನಾವಣಾಧಿಕಾರಿ ಎಂ.ಬಿ.ದ್ಯಾಬೇರಿ ಅವರಿಗೆ ನಾಮಪತ್ರ ಸಲ್ಲಿಸಿದರು. | Kannada Prabha

ಸಾರಾಂಶ

ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಪುನರಾಯ್ಕೆ ಬಯಸಿ ಹಾಲಿ ಅಧ್ಯಕ್ಷರು, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾದ ಸಮಾಜದ ಹಿರಿಯ ಡಾ. ಶಾಮನೂರು ಶಿವಶಂಕರಪ್ಪ ಬೆಂಗಳೂರಿನಲ್ಲಿ ಮಹಾಸಭಾದ ಕಚೇರಿಯಲ್ಲಿ ಗುರುವಾರ ಮಹಾಸಭಾದ ಮುಖ್ಯ ಚುನಾವಣಾಧಿಕಾರಿ, ನಿವೃತ್ತ ಐಎಎಸ್ ಅಧಿಕಾರಿ ಎಂ.ಬಿ. ದ್ಯಾಬೇರಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ದಾವಣಗೆರೆ

ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಪುನರಾಯ್ಕೆ ಬಯಸಿ ಹಾಲಿ ಅಧ್ಯಕ್ಷರು, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾದ ಸಮಾಜದ ಹಿರಿಯ ಡಾ. ಶಾಮನೂರು ಶಿವಶಂಕರಪ್ಪ ಬೆಂಗಳೂರಿನಲ್ಲಿ ಮಹಾಸಭಾದ ಕಚೇರಿಯಲ್ಲಿ ಗುರುವಾರ ಮಹಾಸಭಾದ ಮುಖ್ಯ ಚುನಾವಣಾಧಿಕಾರಿ, ನಿವೃತ್ತ ಐಎಎಸ್ ಅಧಿಕಾರಿ ಎಂ.ಬಿ. ದ್ಯಾಬೇರಿ ಅವರಿಗೆ ನಾಮಪತ್ರ ಸಲ್ಲಿಸಿದರು. ಬೆಂಗಳೂರಿನ ಮಹಾಸಭಾ ಕಚೇರಿಯಲ್ಲಿ ಅಭಾವೀಮ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಪುನರಾಯ್ಕೆ ಬಯಸಿ ಡಾ.ಶಾಮನೂರು ಶಿವಶಂಕರಪ್ಪ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಮಹಾಸಭಾದ ರಾಜ್ಯ ಘಟಕದ ನೂತನ ಅಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಬಿದರಿ, ಚುನಾಯಿತ ಮಹಾಸಭಾ ಕಾರ್ಯಕಾರಿ ಸಮಿತಿ ಸದಸ್ಯರಾದ ಅಥಣಿ ಎಸ್.ವೀರಣ್ಣ, ಎಂ.ಎನ್‌.ರಾಜಶೇಖರಪ್ಪ(ಅಣಬೇರು ರಾಜಣ್ಣ), ಬಿ.ಎಸ್.ಸಚ್ಚಿದಾ ನಂದಮೂರ್ತಿ, ಎಚ್.ಎಂ.ರೇಣುಕ ಪ್ರಸನ್ನ, ಚಿದಾನಂದ ಎಸ್.ಮಠದ, ಕೋರಿ ವಿರುಪಾಕ್ಷಪ್ಪ, ಗಂಗಮ್ಮ ಬಸವರಾಜು, ಚಂದ್ರಕಲ ಶ್ರೀಕಂಠಾರಾಧ್ಯ, ರೂಪಶೇಖರ, ಶಂಭು ಉರೇಕೊಂಡಿ, ಬಿ.ಜಿ.ರಮೇಶ, ಡೋಲಿ ಚಂದ್ರು, ಸಮಿತಿ ಸದಸ್ಯರು, ಸೂಚಕರು, ಅನುಮೋದಕರು, ಇತರರು ಇದ್ದರು.

ಮಹಾಸಭಾಗೆ ನಾಮಪತ್ರಗಳನ್ನು ಸಲ್ಲಿಸಲು ಸೆ.11 ಅಂತಿಮ ದಿನವಾಗಿದೆ. ಸೆ.12 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಸೆ.15ರಂದು ನಾಮಪತ್ರ ಹಿಂಪಡೆಯಲು ಅವಕಾಶ ಇದೆ. ಅಗತ್ಯವಿದ್ದಲ್ಲಿ ಸೆ.29ರಂದು ಚುನಾವಣೆ ನಡೆಯಲಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಉಪ ಚುನಾವಣಾಧಿಕಾರಿ, ಸಹಕಾರ ಸಂಘಗಳ ನಿವೃತ್ತ ಅಪರ ನಿಬಂಧಕ ಸಿ.ಎಸ್.ವೀರೇಶ ತಿಳಿಸಿದ್ದಾರೆ.

----5ಕೆಡಿವಿಜಿ13: ಅಭಾವೀಮ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಪುನರಾಯ್ಕೆ ಬಯಸಿ ಹಾಲಿ ಅಧ್ಯಕ್ಷರು, ದಾವಣಗೆರೆ ದಕ್ಷಿಣ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಬೆಂಗಳೂರಿನ ಮಹಾಸಭಾ ಕಚೇರಿಯಲ್ಲಿ ಗುರುವಾರ ಮುಖ್ಯ ಚುನಾವಣಾಧಿಕಾರಿ ಎಂ.ಬಿ. ದ್ಯಾಬೇರಿ ಅವರಿಗೆ ನಾಮಪತ್ರ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ