ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ 95ನೇ ವರ್ಷದ ಜನ್ಮದಿನಾಚರಣೆ ಅಂಗವಾಗಿ 101 ಜೋಡಿಗಳ ಉಚಿತ ಸಾಮೂಹಿಕ ವಿವಾಹವನ್ನು ಜೂ.16ರಂದು ಎಸ್‌ಎಸ್‌ಎಂ ಅಭಿಮಾನಿಗಳ ಬಳಗ ಹಮ್ಮಿಕೊಂಡಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ಹೇಳಿದರು.
ಹೆಸರು ನೋಂದಾಯಿಸಲು ಇಚ್ಛಿಸುವವರು ಆಯಾ ಕ್ಷೇತ್ರಗಳ ಶಾಸಕರ ಕಚೇರಿ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕು, ಹೋಬಳಿಮಟ್ಟದಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಆಸಕ್ತ ವಧು-ವರರು ತಮ್ಮ ವಯಸ್ಸು, ನಿವಾಸ ಸೇರಿದಂತೆ ಮೂಲ ದಾಖಲಾತಿಗಳೊಂದಿಗೆ ಕಚೇರಿಗೆ ತಲುಪಿಸಬೇಕು. ಹೆಸರು ನೋಂದಣಿಗೆ ಜೂ.12 ಕೊನೆ ದಿನ ಎಂದರು.
ಸಾಮೂಹಿಕ ವಿವಾಹ ಮಹೋತ್ಸವ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಸಚಿವರಾದ ಈಶ್ವರ್ ಖಂಡ್ರೆ, ಎಂ.ಬಿ. ಪಾಟೀಲ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಅನೇಕ ಸಚಿವರು, ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಮುಖಂಡರು, ನಾಯಕರು, ಅಭಿಮಾನಿಗಳು ಪಾಲ್ಗೊಳ್ಳುವರು ಎಂದು ತಿಳಿಸಿದರು.ಕಾಂಗ್ರೆಸ್ ಹಿರಿಯ ಮುಖಂಡ ಕಕ್ಕರಗೊಳ್ಳ ಕೆ.ಜಿ.ಬಸವನಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡರ ಗಿರೀಶ, ಮಾಜಿ ಮೇಯರ್ ಕೆ.ಚಮನ್ ಸಾಬ್, ಆರ್.ನಾಗಪ್ಪ, ಎ.ನಾಗರಾಜ, ಆರ್.ಎಸ್.ಶೇಖರಪ್ಪ, ಆರ್.ಎಚ್.ನಾಗಭೂಷಣ, ಬಸವಾಪಟ್ಟಣ ನಾಗರಾಜ, ನಿಂಗಪ್ಪ, ಎಸ್.ಮಲ್ಲಿಕಾರ್ಜುನ, ಅಂಜಿನಪ್ಪ, ವಡ್ನಾಳ್ ಜಗದೀಶ, ಹನುಮಂತಪ್ಪ, ಬಾಗಳಿ ಸಿದ್ದೇಶ, ಗಡಿಗುಡಾಳ ಮಂಜುನಾಥ, ಬಾತಿ ಸಿದ್ದಲಿಂಗಪ್ಪ, ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.
ನಾವು ಅನೇಕ ಬಾರಿ ಸಾಮೂಹಿಕ ವಿವಾಹ ಕಾರ್ಯಕ್ರಮ ಮಾಡಿದ್ದೇವೆ. ಸಮಯ ಬಹಳ ಕಡಿಮೆ ಇದೆ. ಪಕ್ಷದ ಪ್ರತಿಯೊಬ್ಬರೂ ಬಡವರನ್ನು ಗುರುತಿಸಿ ಸಾಮೂಹಿಕ ವಿವಾಹ ಕುರಿತು ಮಾಹಿತಿ ನೀಡುವ ಕೆಲಸವಾಗಬೇಕು.- ಬಿ.ವೀರಣ್ಣ, ಹಿರಿಯ ಮುಖಂಡ, ಕಾಂಗ್ರೆಸ್