ಸಮಾಜಕ್ಕೆ ಶಾಮನೂರು ಶಿವಶಂಕರಪ್ಪ ಕೊಡುಗೆ ಅಪಾರ

KannadaprabhaNewsNetwork |  
Published : Dec 16, 2025, 01:15 AM IST
ಪೊಟೊ-15ಕೆಎನ್ ಎಲ್‌ಎಮ್‌1-ನೆಲಮಂಗಲ ನಗರದ ಬಿನ್ನಮಂಗಲ ಬಳಿ ಎನ್.ಜಿ.ಎಸ್.ಸದನದಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಘಟಕ ಅಖಿಲ ಭಾರತ ವೀರಶೈವ ಮಹಾಸಭಾದಿಂದ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅದ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ನಿಧನ ಗೌರವಾರ್ಥ ಸಮುದಾಯದ ಮುಖಂಡರು ಅವರ ಭಾವಚಿತ್ರದಲ್ಲಿ ಪುಷ್ಪ ನಮನ ಸಲ್ಲಿಸಿ ಶ್ರದ್ದಾಂಜಲಿ ಅರ್ಪಿಸಿದರು. | Kannada Prabha

ಸಾರಾಂಶ

ನೆಲಮಂಗಲ: ಶಾಮನೂರು ಶಿವಶಂಕರಪ್ಪ ಅವರು ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರಗಳಲ್ಲಿ ಹಾಗೂ ಇತರ ಕ್ಷೇತ್ರಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುವುದರ ಜತೆಗೆ ರಾಜ್ಯದ ಶಾಸಕರಾಗಿ, ಸಚಿವರಾಗಿ ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಿದವರು. ಅವರ ಅಗಲಿಕೆ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಮಾಜಿ ಜಿಲ್ಲಾಧ್ಯಕ್ಷ ನಟರಾಜು ತಿಳಿಸಿದರು.

ನೆಲಮಂಗಲ: ಶಾಮನೂರು ಶಿವಶಂಕರಪ್ಪ ಅವರು ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರಗಳಲ್ಲಿ ಹಾಗೂ ಇತರ ಕ್ಷೇತ್ರಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುವುದರ ಜತೆಗೆ ರಾಜ್ಯದ ಶಾಸಕರಾಗಿ, ಸಚಿವರಾಗಿ ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಿದವರು. ಅವರ ಅಗಲಿಕೆಯ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಮಾಜಿ ಜಿಲ್ಲಾಧ್ಯಕ್ಷ ನಟರಾಜು ತಿಳಿಸಿದರು.

ನಗರದ ಬಿನ್ನಮಂಗಲದಲ್ಲಿ ತಾಲೂಕು ಮತ್ತು ಜಿಲ್ಲಾ ಅಖಿಲ ಭಾರತ ವೀರಶೈವ ಮಹಾಸಭಾ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಅಖಿಲ ಭಾರತ ವೀರಶೈವ ಮಹಾಸಭಾ ಗ್ರಾಮಾಂತರ ಜಿಲ್ಲಾಧ್ಯಕ್ಷ ರೇವಣ್ಣಸಿದ್ದಯ್ಯ ಮಾತನಾಡಿ, ರಾಜ್ಯದ ಧೀಮಂತ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರು ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ಪ್ರಭಾವಿ ನಾಯಕರಾಗಿ ಸೇವೆ ಸಲ್ಲಿಸಿದ್ದರು. ಸತತ 6 ಬಾರಿ ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಬಾಪೂಜಿ ವಿದ್ಯಾಸಂಸ್ಥೆ ಸ್ಥಾಪಿಸಿ ಶಿಕ್ಷಣಕ್ಷೇತ್ರಕ್ಕೂ ಅಪಾರ ಕೊಡುಗೆ ನೀಡಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾಗಿ ಸಮುದಾಯದ ಶ್ರೇಯೋಭಿವೃದ್ಧಿಗೆ ಶ್ರಮಿಸಿದರು ಎಂದರು.

ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ರಾಜಶೇಖರ್ ಮಾತನಾಡಿ, ಶಾಮನೂರು ಶಿವಶಂಕರಪ್ಪ ಅವರು ಶಿಕ್ಷಣ ಕ್ಷೇತ್ರದಲ್ಲಿ ಲಕ್ಷಾಂತರ ಮಂದಿಗೆ ಶಿಕ್ಷಣ, ಉದ್ಯೋಗ, ಆರೋಗ್ಯ ನೀಡಿದ್ದ ಮಹಾನ್ ವ್ಯಕ್ತಿಯಾಗಿ ರಾಜ್ಯದಲ್ಲಿ ಗುರುತಿಸಿಕೊಂಡಿದ್ದರು. ರಾಜಕೀಯ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಮನೆಮನೆ ಮಾತಾಗಿದ್ದರು. ಶಾಮನೂರು ಶಿವಶಂಕರಪ್ಪ ಅವರ ಅಗಲಿಕೆ ತುಂಬಲಾಗದ ನಷ್ಟವಾಗಿದೆ ಎಂದರು.

ಸಭೆಯಲ್ಲಿ ಮಾಜಿ ಪ್ರಧಾನ ಕಾರ್ಯದರ್ಶಿ ದಯಾಶಂಕರ್, ರಾಜ್ಯ ಕೃಷಿ ವಿಭಾಗದ ನಿರ್ದೇಶಕ ಎ.ಎಂ.ಗಂಗಾಧರ್, ರಾಜ್ಯ ಮಹಿಳಾ ಕಾರ್ಯದರ್ಶಿ ರಾಜಮ್ಮ, ಗ್ರಾಮಾಂತರ ಜಿಲ್ಲಾ ಪ್ರದಾನ ಕಾರ್ಯದರ್ಶಿ ಶಾಂತಕುಮಾರ್, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, ಜಿಲ್ಲಾ ನಿರ್ದೇಶಕ ಬೃಂಗೇಶ್, ಮಂಜುಳಾ, ತಾಲೂಕು ಮಹಿಳಾ ಘಟಕ ಅಧ್ಯಕ್ಷೆ ವೇದಾವತಿ, ಮುಖಂಡ ಮಂಜುನಾಥ್, ಹರೀಶ್‌ಕುಮಾರ್, ರೇಣುಕಾಸ್ವಾಮಿ, ಜಯಣ್ಣ, ಉಮೇಶ್, ಸದಾನಂದಾರಾಧ್ಯ, ಗಿರೀಶ್, ಪುಟ್ಟಣ್ಣ, ಶೀಲಾ, ಶೋಭಾ, ಮಂಜುಳಾ, ಸುಮ ಮತ್ತಿತರರು ಉಪಸ್ಥಿತರಿದ್ದರು.

(ಫೋಟೋ ಪ್ಯಾನಲ್‌ನಲ್ಲಿ ಬಳಸಬಹುದು)

ಪೊಟೊ-15ಕೆಎನ್ ಎಲ್‌ಎಮ್‌1-

ನೆಲಮಂಗಲದಲ್ಲಿ ತಾಲೂಕು ಮತ್ತು ಜಿಲ್ಲಾ ಅಖಿಲ ಭಾರತ ವೀರಶೈವ ಮಹಾಸಭಾದಿಂದ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ಗೌರವಾರ್ಥ ಸಮುದಾಯದ ಮುಖಂಡರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶ್ರದ್ದಾಂಜಲಿ ಅರ್ಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!