ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಭಾರತೀಯ ಜನಸಂಘದ ಸ್ಥಾಪಕರಲ್ಲೋರ್ವರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪಂಡಿತ್ ಜೀ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ
ಉಡುಪಿ: ಇಂದು ನಾವು ಪರ್ವ ಕಾಲದಲ್ಲಿದ್ದೇವೆ. ಇಬ್ಬರು ಮಹಾನ್ ನಾಯಕರಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರ ಕನಸು ನನಸಾಗಿದೆ. ಸಂವಿಧಾನದ 370ನೇ ವಿಧಿ ರದ್ಧತಿಯಿಂದಾಗಿ ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ. ಪಂಡಿತ್ ಜೀ ಅವರ ಅಂತ್ಯೋದಯ ಪರಿಕಲ್ಪನೆ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಜನಪರ ಯೋಜನೆಗಳಲ್ಲಿ ಪ್ರತಿಫಲಿಸುತ್ತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.
ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಭಾರತೀಯ ಜನಸಂಘದ ಸ್ಥಾಪಕರಲ್ಲೋರ್ವರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪಂಡಿತ್ ಜೀ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು.ಪಕ್ಷದ ಕಾರ್ಯಕರ್ತರು ಸೇವಾ ಮನೋಭಾವನೆಯಿಂದ ಸೇವೆ ಮಾಡಿದಾಗ ಅದು ಪಕ್ಷ ಕಟ್ಟಲು ಶ್ರಮಿಸಿದ ಹಿರಿಯರಿಗೆ ಸಲ್ಲುವ ಗೌರವ. ಬದ್ಧತೆಯಿಂದ ಪಕ್ಷದ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜಿಲ್ಲೆಯಲ್ಲಿ ಪಕ್ಷವನ್ನು ಇನ್ನಷ್ಟು ಸದೃಢವಾಗಿ ಬೆಳೆಸಲು ಶ್ರಮಿಸೋಣ ಎಂದು ಕುತ್ಯಾರು ತಿಳಿಸಿದರು.ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಅವರು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ತತ್ವಾದರ್ಶಗಳು, ತ್ಯಾಗ, ಬಲಿದಾನದ ಕುರಿತು ಉಪನ್ಯಾಸವನ್ನು ನೀಡಿದರು.ಬಿಜೆಪಿ ಮಂಗಳೂರು ವಿಭಾಗ ಎಸ್ಐಆರ್ ಸಂಚಾಲಕ ಕೆ.ಉದಯ ಕುಮಾರ್ ಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಮಟ್ಟಾರ್ ರತ್ನಾಕರ ಹೆಗ್ಡೆ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು ಸಹಿತ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕಾರಿಣಿ ಹಾಗೂ ಸಮಿತಿ ಸದಸ್ಯರು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಗಿರೀಶ್ ಎಂ. ಅಂಚನ್ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿ, ಶ್ರೀಕಾಂತ್ ನಾಯಕ್ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.