ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪಟ್ಟಣದ ಬಿಜಿಎಸ್ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರದಲ್ಲಿ ಅವರು ಮಾತನಾಡಿದರು. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಮುಖ್ಯವಾಗಿದ್ದು ಪೋಷಕರು ಬಡತನದಲ್ಲಿ ಇದ್ದರೂ ಎಷ್ಟು ಕಷ್ಟ ಪಟ್ಟರು ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುತ್ತಾರೆ. ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂದು ಬಯಸುತ್ತಾರೆ ಪೋಷಕರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಚೆನ್ನಾಗಿ ಓದಬೇಕು ಎಂದರು ವಿದ್ಯೆ ಜೊತೆ ಸಂಸ್ಕಾರ ರೂಢಿಸಿಕೊಂಡರೆ ಜೀವನದಲ್ಲಿ ಎಂದಿಗೂ ಕೆಡಕಾಗದು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಆದಿಚುಂಚನಗಿರಿ ಮಠದಿಂದ ಬೆಂಗಳೂರು ಮತ್ತು ನವ ದೆಹಲಿಯಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.
ಶಾಸಕ ಸಿಎಂ ಬಾಲಕೃಷ್ಣ ಮಾತನಾಡಿ, ವಿದ್ಯಾರ್ಥಿ ಗಳು ಸಮಯಕ್ಕೆ ಮಹತ್ವ ನೀಡಬೇಕು ಎಂದು ಅವರು ತಾಲೂಕು ಒಕ್ಕಲಿಗರ ಸಂಘಕ್ಕೆ ಪಟ್ಟಣದಲ್ಲಿ ಸೂಕ್ತ ಜಾಗ ಗುರುತಿಸಲಾಗಿದ್ದು ಶೀಘ್ರದಲ್ಲೇ ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದರು.ವಿಧಾನ ಪರಿಷತ್ ಮಾಜಿ ಸದಸ್ಯ ಎಂ. ಎ. ಗೋಪಾಲಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಅಧ್ಯಕ್ಷ ಎಚ್ ಎನ್ ಲೋಕೇಶ್ ಈ ಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಎಂ ಶಂಕರ್ ಮಾತನಾಡಿದರು. ಕರ್ನಾಟಕ ವಿದ್ಯುತ್ ಕಾರ್ಖಾನೆ ಅಧ್ಯಕ್ಷ ಎಚ್ ಸಿ ದೀಪು, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ರಘು ಗೌಡ, ಪಿ ಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಿ ಎನ್ ಮಂಜುನಾಥ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಿ ಆರ್ ಮೂರ್ತಿ, ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕ ಬಿ ಎನ್ ಮಂಜುನಾಥ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎವಿ ಜಯಪಾಲ್, ಕುವೆಂಪು ವೇದಿಕೆ ಅಧ್ಯಕ್ಷ ರಮೇಶ್ ಕುಂಬಾರಹಳ್ಳಿ, ಸಮಾಜ ಸೇವಕರಾದ ದೇವರಾಜ್ ಮತ್ತಿತರಿದ್ದರು.