ಶನಿವಾರಸಂತೆ: ಕಾಂಗ್ರೆಸ್ ಅಭ್ಯರ್ಥಿ ಚುನಾವಣಾ ಪ್ರಚಾರ

KannadaprabhaNewsNetwork |  
Published : Apr 12, 2024, 01:06 AM IST
ಶನಿವಾರಸಂತೆ ಪಟ್ಟಣದ ಕೆಆರ್‍ಸಿ ವೃತ್ತದಲ್ಲಿ ಕೊಡಗು-ಮೈಸೂರು ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಗೌಡ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿರುವುದು | Kannada Prabha

ಸಾರಾಂಶ

ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಶನಿವಾರಸಂತೆ ಪಟ್ಟಣದ ಕೆಆರ್‍ಸಿ ವೃತ್ತದಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿಮತ ಯಾಚಿಸಿದರು.

ಕನ್ನಡಪ್ರಭ ವಾರ್ತೆ ಶನಿವಾರಸಂತೆ

ಕೇಂದ್ರದ ಬಿಜೆಪಿ ಸರ್ಕಾರ ಪೊಳ್ಳು ಭರವಸೆಗಳನ್ನು ನೀಡಿ ಧರ್ಮ ಧರ್ಮಗಳ ನಡುವೆ ಜಾತಿ ಜಾತಿಗಳ ನಡುವೆ ಸಮುದಾಯಗಳ ನಡುವೆ ಬೆಂಕಿ ಹಚ್ಚಿರುವ ಕೆಲಸವನ್ನು ಮಾಡಿದ್ದು ಬಿಟ್ಟರೆ ಬೇರೆ ಯಾವುದೇ ಅಭಿವೃದ್ಧಿ ಕಾರ್ಯವನ್ನು ಮಾಡಿಲ್ಲ ಎಂದು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅಭಿಪ್ರಾಯ ಪಟ್ಟರು.

ಅವರು ಬುಧವಾರ ಪಟ್ಟಣದ ಕೆಆರ್‍ಸಿ ವೃತ್ತದಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೇಂದ್ರದ ಬಿಜೆಪಿ ಸರ್ಕಾರ ಪೊಳ್ಳು ಭರವಸೆಯನ್ನು ನೀಡುತ್ತಾ ಸಮುದಾಯಗಳ ನಡುವೆ ವಿಷಬೀಜ ಬಿತ್ತುವುದರಲ್ಲೇ ಕಾಲ ಕಳೆದಿದೆ. ಕೊಡಗು-ಮೈಸೂರು ಬಿಜೆಪಿ ಸಂಸದರು ಕೊಡಗು ಜಿಲ್ಲೆಯನ್ನು ಅಭಿವೃದ್ಧಿ ಪಡಿಸಬಹುದಾಗಿತ್ತು. ಆದರೆ ಕಳೆದ 10 ವರ್ಷದಲ್ಲಿ ಬಿಜೆಪಿ ಸಂಸದ ಕೊಡಗು ಜಿಲ್ಲೆಯನ್ನು ಕಿಂಚಿತ್ತೂ ಅಭಿವೃದ್ದಿ ಪಡಿಸಿಲ್ಲ ಎಂದು ದೂರಿದರು.

ಈ ಸಂದರ್ಭ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ, ಶನಿವಾರಸಂತೆ ಪಟ್ಟಣದಲ್ಲಿ ಅಭ್ಯರ್ಥಿ ಲಕ್ಷ್ಮಣ್ ಗೌಡ ಪರವಾಗಿ ಮತಯಾಚಿಸಿದರು. ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಟಿ.ಪಿ.ರಮೇಶ್, ಎಚ್.ಎಸ್.ಚಂದ್ರಮೌಳಿ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಜಿ.ಪಂ.ಅಧ್ಯಕ್ಷೆ ಕೆ.ಪಿ.ಚಂದ್ರಕಲಾ ಮಾತನಾಡಿದರು. ಈ ಸಂದರ್ಭ ಕಾಂಗ್ರೆಸ್ ಪಕ್ಷದ ಪ್ರಮುಖರು, ಪಕ್ಷದ ಕಾರ್ಯಕರ್ತರು ಹಾಜರಿದ್ದರು. ಈ ಸಂದರ್ಭ ಲಕ್ಷ್ಮಣ್ ಶನಿವಾರಸಂತೆ ಮತ್ತು ಕೊಡ್ಲಿಪೇಟೆ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಿದರು.

ಚುನಾವಣೆ ಚಟುವಟಿಕೆಗೆ ಮಕ್ಕಳ ಬಳಕೆ ನಿಷೇಧ

ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ಯಾವುದೇ ಚುನಾವಣಾ ಸಂಬಂಧಿತ ಪ್ರಕ್ರಿಯೆ ಮತ್ತು ಚಟುವಟಿಕೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ