ಸಂಸ್ಕೃತಿ ಪರಂಪರೆ ನೆಲೆಗಟ್ಟು ಭದ್ರಪಡಿಸಿದ ಶಂಕರಾಚಾರ್ಯರು

KannadaprabhaNewsNetwork |  
Published : May 03, 2025, 12:19 AM IST
ಪೋಟೊ: 02ಎಸ್‌ಎಂಜಿಕೆಪಿ01ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಶುಕ್ರವಾರ ಏರ್ಪಡಿಸಿದ್ದ ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಶ್ರೀ ಶಂಕರಾಚಾರ್ಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.  | Kannada Prabha

ಸಾರಾಂಶ

Shankaracharya established and secured cultural heritage

-ಶಿವಮೊಗ್ಗದಲ್ಲಿ ಶ್ರೀಶಂಕರಾಚಾರ್ಯ ಜಯಂತಿ ಕಾರ್ಯಕ್ರಮ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ಅಭಿಮತ

----

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಶಂಕರಾಚಾರ್ಯರು ಸದಾ ಪ್ರಾತಸ್ಮರಣೀಯರು. ದೇಶದ ಉದ್ದಗಲಕ್ಕೂ ಸಂಚರಿಸಿ ತತ್ವಗಳನ್ನು, ಸಂಸ್ಕೃತಿಯನ್ನು ಪಸರಿಸಿ ನಮ್ಮ ಪರಂಪರೆಯ ನೆಲೆಗಟ್ಟನ್ನು ಭದ್ರಪಡಿಸಿದ್ದಾರೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಶುಕ್ರವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಶ್ರೀಶಂಕರಾಚಾರ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ,

ಶಂಕರಾಚಾರ್ಯರ ಮಹತ್ವದ ಕಾರ್ಯದಿಂದಾಗಿ ಧರ್ಮ ಉಳಿದಿದೆ. ದೇಶದ ಉದ್ದಗಲ ಸಂಚರಿಸಿ ಜೀವನಕ್ಕೆ ಅಗತ್ಯವಾದ ತತ್ವಗಳನ್ನು ಉಪದೇಶಿಸಿದ್ದಾರೆ. ಐದು ಕಡೆ ಪೀಠ ಸ್ಥಾಪನೆ ಮಾಡಿರುವ ಇವರು ಶ್ರೇಷ್ಠ ಪರಂಪರೆಯ ರುವಾರಿ. ಸಾಂಸ್ಕೃತಿಕ ಪರಂಪರೆಯ ನೆಲೆಗಟ್ಟು ಭದ್ರ ಆಗಿರುವುವುದು ಇವರಿಂದ. ನಾವೆಲ್ಲ ಸೇರಿ ಅವರ ಮಹತ್ ಕಾರ್ಯಗಳನ್ನು ಮುಂದೆ ತೆಗೆದುಕೊಂಡು ಹೋಗಬೇಕು. ಅವರ ವಿಚಾರಗಳನ್ನು ಎಲ್ಲರಿಗೂ ತಿಳಿಸಬೇಕು. ಇಂತಹ ಮಹಾ ದಾರ್ಶನಿಕರನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸದೇ ಎಲ್ಲರೂ ಸೇರಿ ಜಯಂತಿ ಆಚರಿಸೋಣ ಎಂದು ಕರೆ ನೀಡಿದರು.

ಶಿವಮೊಗ್ಗದ ಪ್ರವಚನಕಾರರಾದ ಜಿ.ಎಸ್. ನಟೇಶ್ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಶಂಕರಾಚಾರ್ಯರು ಮಾನವ ಬದುಕನ್ನು ಸುಂದರ, ಸಾರ್ಥಕಗೊಳಿಸಿಕೊಳ್ಳುವ ತತ್ವಗಳನ್ನು ಅವರು ನೀಡಿದ್ದಾರೆ. ಭಗವಂತನನ್ನು ಅರಿಯುವುದೇ ತತ್ವ ಎಂದಿರುವ ಅವರು ನಾಲ್ಕು ವೇದಗಳನ್ನು ಆಯ್ದ ಮಹಾವಾಕ್ಯ ನೀಡಿದ್ದಾರೆ. ಹಿಂದೆ ಜಾತಿ, ಮತ ಇರಲಿಲ್ಲ. ಅದನ್ನು ನಾವು ಮಾಡಿಕೊಂಡಿದ್ದು. ಬ್ರಹ್ಮ ನೀತಿಯೊಂದೇ ಇದ್ದದ್ದು. ದಾರ್ಶನಿಕರು ನಮ್ಮ ಜೀವನ ಸಾರ್ಥಕಗೊಳಿಸಲು, ಸುಗುಮಗೊಳಿಸುವುದಕ್ಕಾಗಿ ತತ್ವಗಳನ್ನು ನೀಡಿದ್ದಾರೆ ಎಂದರು.

ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್.ರವಿಕುಮಾರ್ ಹಾಗೂ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಭೂಪಾಲ್ ಮತ್ತು ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಮಾತನಾಡಿದರು.

ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಕೆ.ಸಿ.ನಟರಾಜ ಭಾಗವತ್, ಶೃಂಗೇರಿ ಶಂಕರಮಠದ ಧರ್ಮಾಧಿಕಾರಿ ಡಾ.ಪಿ.ನಾರಾಯಣ್, ಭಜನಾ ಪರಿಷತ್ ಅಧ್ಯಕ್ಷ ಸಂದೇಶ್ ಉಪಾಧ್ಯ, ಸಮಾಜದ ಮುಖಂಡರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಉಮೇಶ್ ಸಮಾಜದ ಮುಖಂಡರು, ಮಹಿಳೆಯರು ಪಾಲ್ಗೊಂಡಿದ್ದರು.

--

ಪೋಟೊ: ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಏರ್ಪಡಿಸಿದ್ದ ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಶ್ರೀ ಶಂಕರಾಚಾರ್ಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''