ಶಂಕರನಾರಾಯಣ: ಮದರ್ ತೆರೇಸಾ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

KannadaprabhaNewsNetwork |  
Published : Jun 22, 2025, 11:48 PM IST
21ಮದರ್ | Kannada Prabha

ಸಾರಾಂಶ

ಶಂಕರನಾರಾಯಣದ ಮದರ್ ತೆರೇಸಾ ಮೆಮೋರಿಯಲ್ ಶಾಲೆಯಲ್ಲಿ ಶನಿವಾರ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಶಾಲೆಯ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಂಸ್ಥೆಯಿಂದ ನೀಡಲಾಗಿರುವ ಯೋಗದ ಸಮವಸ್ತ್ರದಲ್ಲಿ ಶಿಸ್ತು ಬದ್ಧರಾಗಿ ಭಾಗವಹಿಸಿದ್ದರು.

ಕನ್ನಡಪ್ರಭ ವಾರ್ತೆ ಕುಂದಾಪುರ

ಇಲ್ಲಿನ ಶಂಕರನಾರಾಯಣದ ಮದರ್ ತೆರೇಸಾ ಮೆಮೋರಿಯಲ್ ಶಾಲೆಯಲ್ಲಿ ಶನಿವಾರ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಶಾಲೆಯ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಂಸ್ಥೆಯಿಂದ ನೀಡಲಾಗಿರುವ ಯೋಗದ ಸಮವಸ್ತ್ರದಲ್ಲಿ ಶಿಸ್ತು ಬದ್ಧರಾಗಿ ಭಾಗವಹಿಸಿದ್ದರು.

ಇದೇ ಸಂಸ್ಥೆಯ ಉಪ ಮುಖ್ಯೋಪಾಧ್ಯಾಯರು ಹಿರಿಯ ಶಿಕ್ಷಕರು ಹಾಗೂ ರಾಜ್ಯಮಟ್ಟದ ಯೋಗ ಪರಿಣಿತಿರಾದ ಸಂತೋಷ್ ಕುಮಾರ್ ಹಾಗೂ ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಶಾಲೆಯ ದೈನಂದಿನ ತರಗತಿಗಳಲ್ಲಿ ಯೋಗ ಅಭ್ಯಾಸವನ್ನು ನೀಡುತ್ತಿರುವ ಶ್ರೀಮತಿ ಜಯಲಕ್ಷಿ ಯೋಗ ಶಿಕ್ಷಕರು ಇವರು ವಿದ್ಯಾರ್ಥಿಗಳಿಗೆ ವಿವಿಧ ಆಸನಗಳನ್ನು ಮಾಡಿಸುವ ಮೂಲಕ ಅವರಿಗೆ ಯೋಗದ ಮಹತ್ವವನ್ನು, ಅದರ ಪರಿಣಾಮವನ್ನು ತಿಳಿಸಿಕೊಟ್ಟು, ಯೋಗವು ಸ್ವಯಂ ಅನ್ವೇಷಣೆ ಮತ್ತು ಸ್ವಯಂ ಸುಧಾರಣೆಯ ಒಂದು ಮಾರ್ಗ ಎಂಬುದರ ಅರಿವು ಮೂಡಿಸಿದರು. ಹಾಗೂ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ತಮ್ಮ ದೈನಂದಿನ ತರಗತಿಗಳಲ್ಲಿ ಮಾಡುವ ಯೋಗಭ್ಯಾಸದಿಂದ ಆಗುವ ಉಪಯುಕ್ತತೆಯ ಬಗ್ಗೆ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು ಹಾಗೂ ಎಲ್ಲಾ ಶಿಕ್ಷಕರು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಸಂಪನ್ನಗೊಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ