ವಿಶ್ವವಿದ್ಯಾಲಯದ ಕಬಡ್ಡಿ ತಂಡಕ್ಕೆ ಶಾಂತಾಬಾಯಿ ಆಯ್ಕೆ

KannadaprabhaNewsNetwork |  
Published : Nov 21, 2024, 01:01 AM IST
೨೦ಬಿಎಸ್ವಿ೦೧- ಶಾಂತಾಬಾಯಿ ಲಮಾಣಿ. | Kannada Prabha

ಸಾರಾಂಶ

ಬಸವನಬಾಗೇವಾಡಿ: ನ.೨೬ ರಿಂದ ೩೦ರವರೆಗೆ ಅಲಗಪ್ಪ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ದಕ್ಷಿಣ ವಲಯದ ಕಬಡ್ಡಿ ಪಂದ್ಯಾವಳಿಗೆ ವಿಶ್ವವಿದ್ಯಾಲಯದ ಕಬಡ್ಡಿ ತಂಡಕ್ಕೆ ಬಿಎಲ್‌ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿನಿ ಶಾಂತಾಬಾಯಿ ವಿಜಯ ಲಮಾಣಿ ಆಯ್ಕೆಯಾಗಿದ್ದಾಳೆ. ಶನಿವಾರ ಮತ್ತು ಭಾನುವಾರ ಜರುಗಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮಹಿಳೆಯರ ಕಬಡ್ಡಿ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಶಾಂತಾಬಾಯಿಯನ್ನು ಆಯ್ಕೆ ಮಾಡಲಾಯಿತು.

ಬಸವನಬಾಗೇವಾಡಿ: ನ.೨೬ ರಿಂದ ೩೦ರವರೆಗೆ ಅಲಗಪ್ಪ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ದಕ್ಷಿಣ ವಲಯದ ಕಬಡ್ಡಿ ಪಂದ್ಯಾವಳಿಗೆ ವಿಶ್ವವಿದ್ಯಾಲಯದ ಕಬಡ್ಡಿ ತಂಡಕ್ಕೆ ಬಿಎಲ್‌ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿನಿ ಶಾಂತಾಬಾಯಿ ವಿಜಯ ಲಮಾಣಿ ಆಯ್ಕೆಯಾಗಿದ್ದಾಳೆ. ಶನಿವಾರ ಮತ್ತು ಭಾನುವಾರ ಜರುಗಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮಹಿಳೆಯರ ಕಬಡ್ಡಿ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಶಾಂತಾಬಾಯಿಯನ್ನು ಆಯ್ಕೆ ಮಾಡಲಾಯಿತು. ಆಯ್ಕೆಯಾದ ವಿದ್ಯಾರ್ಥಿನಿಗೆ ಸಂಸ್ಥೆಯ ಅಧ್ಯಕ್ಷ ಡಾ.ಬಿ.ಎಂ.ಪಾಟೀಲ, ಪ್ರಧಾನ ಕಾರ್ಯದರ್ಶಿ ಪ್ರೊ.ಜಿ.ಕೆ.ಪಾಟೀಲ, ಮುಖ್ಯ ಆಡಳಿತಾಧಿಕಾರಿ ಡಾ.ಆರ್‌.ವ್ಹಿ.ಕುಲಕರ್ಣಿ, ಆಡಳಿತಾಧಿಕಾರಿ ಪ್ರೊ.ವಿಲಾಸ ಬಗಲಿ, ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ, ಬೋಧಕ-ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ ಅಭಿನಂದನೆ ತಿಳಿಸಿದ್ದಾರೆ ಎಂದು ಮಹಾವಿದ್ಯಾಲಯದ ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌