ಶಾಂತಗೌಡ ಪಾಟೀಲರ ಪುತ್ರಿಯ ವಿವಾಹ

KannadaprabhaNewsNetwork |  
Published : Feb 03, 2024, 01:50 AM IST
ವಿವಾಹ ಮಹೋತ್ಸವದಲ್ಲಿ ಭಾಗವಹಿಸಿದ ಸಂಸದ ಪಿ.ಸಿ.ಗದ್ದಿಗೌಡರ ಮತ್ತು ಮುಖಂಡರು. | Kannada Prabha

ಸಾರಾಂಶ

ಬಾದಾಮಿ: ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲರ ಪುತ್ರಿ ಶಿವಾನಿ (ಶಿವಬಸಮ್ಮ) ವಿವಾಹ ಬೆಳಗಾವಿ ಜಿಲ್ಲೆಯ ರಾಮದುರ್ಗದ ಎಸ್.ವೈ. ಜಯಣ್ಣ ಪುತ್ರ ಸುದರ್ಶನ ಜೊತೆಗೆ ಶುಕ್ರವಾರ ನಗರದ ಎಸ್.ವಿ.ಪಿ. ಸಂಸ್ಥೆಯ ಬಸವಭವನದಲ್ಲಿ ಅದ್ದೂರಿಯಾಗಿ ಜರುಗಿತು. ಸಂಸದ ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್‌ ವಿರೋಧ ಪಕ್ಷದ ಮುಖ್ಯಸಚೇತಕ ಎನ್. ರವಿಕುಮಾರ, ತೇರದಾಳ ಶಾಸಕ ಸಿದ್ದು ಸವದಿ, ವಿಧಾನ ಪರಿಷತ್‌ ಸದಸ್ಯ ಪಿ.ಎಚ್. ಪೂಜಾರ ಸೇರಿದಂತೆ ಶಾಸಕರು, ಮುಖಂಡರು ಪಾಲ್ಗೊಂಡಿದ್ದರು.

ಬಾದಾಮಿ: ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಇವರ ಪುತ್ರಿ ಶಿವಾನಿ (ಶಿವಬಸಮ್ಮ) ಇವರ ವಿವಾಹ ಬೆಳಗಾವಿ ಜಿಲ್ಲೆಯ ರಾಮದುರ್ಗದ ಎಸ್.ವೈ. ಜಯಣ್ಣ ಪುತ್ರ ಸುದರ್ಶನ ಇವರ ಜೊತೆಗೆ ಶುಕ್ರವಾರ ನಗರದ ಎಸ್.ವಿ.ಪಿ. ಸಂಸ್ಥೆಯ ಬಸವಭವನದಲ್ಲಿ ಅದ್ದೂರಿಯಾಗಿ ಜರುಗಿತು.

ವಿವಾಹ ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್‌ ವಿರೋಧ ಪಕ್ಷದ ಮುಖ್ಯಸಚೇತಕ ಎನ್. ರವಿಕುಮಾರ, ತೇರದಾಳ ಶಾಸಕ ಸಿದ್ದು ಸವದಿ, ವಿಧಾನ ಪರಿಷತ್‌ ಸದಸ್ಯ ಪಿ.ಎಚ್. ಪೂಜಾರ, ಮಾಜಿ ಶಾಸಕರಾದ ಡಾ.ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ, ಎಸ್.ಜಿ. ನಂಜಯ್ಯನಮಠ, ಶ್ರೀಕಾಂತ ಕುಲಕರ್ಣಿ, ಮುಖಂಡ ಮಹೇಶ ಹೊಸಗೌಡ್ರ ಅವರು ಸೇರಿದಂತೆ ತಾಲೂಕಿನ ಹಾಗೂ ಜಿಲ್ಲೆಯ ವಿವಿಧೆಡೆಗಳಿಂದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿ ವಧು-ವರರಿಗೆ ಅಕ್ಷತೆ ಹಾಕಿ ಶುಭ ಹಾರೈಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಪತ್ನಿ ಲಕ್ಷ್ಮೀ ಪಾಟೀಲ ಸೇರಿದಂತೆ ಅಪಾರ ಬಂಧು ಬಳಗದವರು ಹಾಜರಿದ್ದರು. ಗುರುವಾರ ರಾತ್ರಿ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಬಿ. ಶ್ರೀರಾಮುಲು, ಮುಖಂಡರಾದ ಜಗದೀಶ ಕಾರಂತ ಇನ್ನಿತರರು ಭಾಗವಹಿಸಿ ಶುಭ ಕೋರಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ