ಕನ್ನಡಪ್ರಭವಾರ್ತೆ ಚಿತ್ರದುರ್ಗ
ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಶ್ರಾವಣ ಮಾಸದ ನಿಮಿತ್ತ ಮುರಿಗೆ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಲೀಲಾ ವಿಶ್ರಾಂತಿ ಸ್ಥಾನದ ಗದ್ದುಗೆಯಲ್ಲಿ ಶುಕ್ರವಾರ ನಡೆದ ವಚನಾಭಿಷೇಕ ಹಾಗೂ ಮುರಿಗಾ ಪರಂಪರೆಯಲ್ಲಿ ಸಾಗಿಬಂದ ಗುರುಪರಂಪರೆಯ ಮಹಾಸ್ವಾಮೀಜಿ ಜೀವನ ದರ್ಶನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಐತಿಹಾಸಿಕ ಚಿತ್ರದುರ್ಗಕ್ಕೆ ಕಳಶ ಪ್ರಾಯವಾದ ಇಲ್ಲಿನ ಚಿನ್ಮೂಲಾದ್ರಿ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠವು, ಮುರಿಗೆಯ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳ ಅವರಿಂದ ಪ್ರಾರಂಭವಾದ ಬಗ್ಗೆ ಇತಿಹಾಸಕಾರರು ಹೇಳುತ್ತಾರೆ.ಈ ಪೀಠ ಸ್ಥಾಪನೆಯ ಬಗ್ಗೆ ಐತಿಹಾಸಿಕ ಮಹತ್ವವಿದೆ. ದನಗಾಹಿ ಹುಡುಗನೊಬ್ಬ ದುರ್ಗದ ದೊರೆಯಾಗುವುದಕ್ಕೆ ಮುರಿಗೆಯ ಶಾಂತವೀರರ ಆಶೀರ್ವಾದದ ಬಲವೇ ಕಾರಣ. ಮುಂದೆ ಆ ಹುಡುಗ ದುರ್ಗದ ದೊರೆ ಭರಮಣ್ಣ ನಾಯಕನಾದುದು ಆಶೀರ್ವದಿಸಿದ ಗುರುಗಳಿಗೆ ಮಠ ಕಟ್ಟಿದ ಪ್ರಸಂಗಗಳು ಸ್ಮರಣೀಯ ಎಂದರು.
ಸಾನ್ನಿಧ್ಯ ವಹಿಸಿದ್ದ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠ ಆಡಳಿತ ಮಂಡಳಿಯ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಮಾತನಾಡಿ, ಮುರುಘಾ ಪರಂಪರೆಯ ಸ್ವಾಮೀಜಿಗಳಲ್ಲಿ ಮುರಿಗೆಯ ಶಾಂತವೀರರ ಐತಿಹ್ಯದ ಬಗ್ಗೆ ಲಾವಣಿ, ತಾರಾವಳಿ, ಜನಪದರು ಕಟ್ಟಿರುವ ಹಾಡುಗಳಲ್ಲಿ ಹಾಗೆಯೇ ರಾಜಾ ಬಿಚ್ಚುಗತ್ತಿ ಭರಮಣ್ಣ ನಾಯಕರ ಇತಿಹಾಸದ ಜತೆಗೆ ಶ್ರೀಗಳ ಚಾರಿತ್ರಿಕ ಘಟನೆಗಳು ಬರುತ್ತವೆ. ಶಾಂತವೀರ ಮಹಾಕರ್ತೃಗಳು ಗುರು-ವಿರಕ್ತ ಪರಂಪರೆ ಯಾಚೆಗಿನ ಭಕ್ತವರ್ಗ ಪರಂಪರೆಯನ್ನು ಕಟ್ಟ ಬಯಸಿ ಆ ಮೂಲಕ ಶ್ರೇಷ್ಠತೆ ಮೆರೆದರು ಎಂದು ಹೇಳಿದರು.
ಈ ವೇಳೆ ವಚನಾಭಿಷೇಕದ ಸೇವಾ ಕರ್ತರಾದ ಗುತ್ತಿನಾಡಿನ ರೈತ ಮುಖಂಡರು, ವೀರಶೈವ ಸಮಾಜದ ನಿರ್ದೇಶಕರೂ ಆದ ಪ್ರಕಾಶ್ ದಂಪತಿ ಸೇರಿ ಮುರುಘಾಮಠದ ಸಾಧಕ ಸ್ವಾಮೀಜಿ ಮುರುಘೇಂದ್ರ ಸ್ವಾಮೀಜಿ ಹಾಗೂ ನಗರದ ಗಣ್ಯರು, ಎಸ್‌ಜೆಎಂ ವಿದ್ಯಾಪೀಠದ ಸಂಸ್ಥೆಗಳ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.