ಕನ್ನಡಪ್ರಭ ವಾರ್ತೆ ಹೊಸದುರ್ಗ
ಪಟ್ಟಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ಪೋಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಗುರುವಾರ ಆಯೋಜಿಸಲಾಗಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧ ದಿನ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿದ ಪೋಷಕರಿಗೂ ಹಾಗೂ ಉದ್ಯೋಗ ನೀಡಿದವರಿಗೂ ಕಾನೂನಿನ ಪ್ರಕಾರ ಶಿಕ್ಷೆ ನೀಡಲಾಗುತ್ತದೆ. ಹೀಗಾಗಿ ಪಾಲಕರು ಮಕ್ಕಳನ್ನು ಕೆಲಸಕ್ಕೆ ದೂಡದೇ ಉತ್ತಮ ಶಿಕ್ಷಣ, ಆರೋಗ್ಯ ನೀಡುವುದರ ಮೂಲಕ ಉತ್ತಮ ಪ್ರಜೆಗಳನ್ನಾಗಿ ಮಾಡಬೇಕು. ಶಿಕ್ಷಣ ಪಡೆಯುವುದು ಮಗುವಿನ ಮೂಲಭೂತ ಹಕ್ಕಾಗಿದೆ. ಸಾಮಾಜಿಕ ಪಿಡುಗಾಗಿರುವ ಬಾಲಕಾರ್ಮಿಕ ಪದ್ಧತಿಯನ್ನು ತೊಡೆದು ಹಾಕಲು ಎಲ್ಲರೂ ಕೈಜೋಡಿಸುವ ಮೂಲಕ ಸಮಾಜದ ಏಳಿಗೆಗಾಗಿ ಸಹಕರಿಸಬೇಕು ಎಂದು ಹೇಳಿದರು.ಈ ವೇಳೆ ಪ್ರಧಾನ ಸಿವಿಲ್ ನ್ಯಾಯಾಧೀಶ ಸಿ.ಪ್ರಸನ್ನ ಕುಮಾರ್, ವಕೀಲರ ಸಂಘದ ಅಧ್ಯಕ್ಷ ಎಚ್.ಬಿ.ರವಿಕುಮಾರ್, ಇ.ಟಿ.ರಮೇಶ್, ಮೈಲಾರಪ್ಪ, ದೈಹಿಕ ಶಿಕ್ಷಕ ಮಹಂತೇಶ್ ಮತ್ತಿತರರಿದ್ದರು.