25 ಸಾವಿರ ರು. ನಗದಿನೊಂದಿಗೆ ಪ್ರಶಸ್ತಿಯನ್ನು ಜನವರಿಯಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪ್ರದಾನ ಮಾಡಲಾಗುವುದು ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಉಡುಪಿ
ಹೆಬ್ರಿಯ ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜನೆಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಕೊಡಮಾಡುವ ‘ಶಾರದಾ ಕೃಷ್ಣ ಪ್ರಶಸ್ತಿ -2025’ಕ್ಕೆ ಈ ಬಾರಿ ಕನ್ನಡ ರಂಗಭೂಮಿಯ ಪ್ರಸಿದ್ಧ ರಂಗನಿರ್ದೇಶಕ, ನಟ, ರಂಗ ಶಿಕ್ಷಕ, ಸಂಘಟಕ ಡಾ.ಜೀವನ್ ರಾಂ ಸುಳ್ಯ ಆಯ್ಕೆಯಾಗಿದ್ದಾರೆ.
25 ಸಾವಿರ ರು. ನಗದಿನೊಂದಿಗೆ ಪ್ರಶಸ್ತಿಯನ್ನು ಜನವರಿಯಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪ್ರದಾನ ಮಾಡಲಾಗುವುದು ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರು ಗೌರವಾಧ್ಯಕ್ಷ ವಿಶ್ವನಾಥ್ ಶೆಣೈ, ಶಾರದಾ ಕೃಷ್ಣ ಪ್ರಶಸ್ತಿ ಸಮಿತಿಯ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು, ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಹೆಬ್ರಿಯ ಸದಸ್ಯ ವೈಕುಂಠ ಹೇರಳೆ, ಗೌರವ ಸಲಹೆಗಾರ ಜನಾರ್ದನ ಕೊಡವೂರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.