ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶಾರದಾ ಪೂಜೆ, ಆಯುಧ ಪೂಜೆ

KannadaprabhaNewsNetwork |  
Published : Oct 22, 2025, 01:03 AM IST
ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶ್ರದ್ಧಾಭಕ್ತಿಯ ಶಾರದಾ ಪೂಜೆ, ಆಯುಧ ಪೂಜೆ   ವಿದ್ಯೆಯಿಂದ ವಿನಯ, ವಿನಯದಿಂದ ಭ್ರಾತ್ವತ್ವ-ಶ್ರೀ ರಾಜಶೇಖರಾನಂದ ಸ್ವಾಮೀಜಿ | Kannada Prabha

ಸಾರಾಂಶ

ಪುತ್ತೂರಿನ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಾರದಾ ಪೂಜೆ ಮತ್ತು ಆಯುಧ ಪೂಜೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು.

ಪುತ್ತೂರು: ಮನುಷ್ಯನ ಜೀವನದಲ್ಲಿ ಸಂಸ್ಕೃತಿ ಎಂಬುದು ಅವಿಭಾಜ್ಯ ಅಂಗ. ಸಂಸ್ಕೃತಿ, ಸಂಸ್ಕಾರದ ಜೊತೆಗೆ ಶಿಕ್ಷಣ ಸಾಗಬೇಕು. ವಿದ್ಯೆಯಿಂದ ವಿನಯ, ವಿನಯದಿಂದ ಭ್ರಾತೃತ್ವ ಹಾಗೂ ಭ್ರಾತೃತ್ವದಿಂದ ಧನ ಗಳಿಸಬಹುದು. ಆದರೆ ಸುಖವು ಧನ ಅಥವಾ ಸಂಪತ್ತನ್ನು ಹೇಗೆ ಬಳಸುತ್ತೇವೆ ಎಂಬುವುದರಿಂದ ಪ್ರಾಪ್ತವಾಗುತ್ತದೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು.ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅದ್ದೂರಿಯಾಗಿ ಸಂಪನ್ನಗೊಂಡ ಶಾರದಾ ಪೂಜೆ ಮತ್ತು ಆಯುಧ ಪೂಜೆ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಜಯಂತ್ ನಡುಬೈಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲರಿಗೂ ಉದ್ಯೋಗವಕಾಶ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಪದವಿ ಶಿಕ್ಷಣದೊಂದಿಗೆ ವೃತ್ತಿಪರ ಕೋರ್ಸ್‌ಗಳನ್ನು ಇದರ ಜೊತೆಗೆ ಪದವಿ ಪೂರ್ವ ಶಿಕ್ಷಣವನ್ನು ಆರಂಭಿಸಿದ್ದೇವೆ. ನಮ್ಮ ಸಂಸ್ಥೆಯಲ್ಲಿ ಪ್ರತಿಯೊಂದು ಹಬ್ಬ ಹರಿದಿನಗಳನ್ನು ಆಚರಿಸುತ್ತಿರುವುದು ಸಂಪ್ರದಾಯವಾಗಿದೆ. ವಿದ್ಯೆಯ ಜೊತೆಗೆ ಧಾರ್ಮಿಕತೆಗೆ, ಸಾಂಸ್ಕೃತಿಕತೆಗೆ ಸಂಸ್ಥೆಯು ಹೆಚ್ಚಿನ ಒತ್ತು ನೀಡುತ್ತಾ ಬಂದಿದೆ ಎಂದರು.ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಆಡಳಿತ ನಿರ್ದೇಶಕಿ ಕಲಾವತಿ ಜಯಂತ್, ಆಡಳಿತ ಅಧಿಕಾರಿ ಅರ್ಪಿತ್ ಟಿ.ಎ., ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗಂಗಾರತ್ನ ಉಪಸ್ಥಿತರಿದ್ದರು.

ಈ ಸಂದರ್ಭ ಅಕ್ಷಯ ಕಾಲೇಜಿನ ವಾರ್ಷಿಕ ಸಂಚಿಕೆ ‘ಅಕ್ಷಯ’ವನ್ನು ಸ್ವಾಮೀಜಿ ಶ್ರೀ ರಾಜಶೇಖರಾನಂದ ಹಾಗೂ ಇತರ ಗಣ್ಯರು ಅನಾವರಣಗೊಳಿಸಿದರು.

ಸಂಸ್ಕೃತ ಕ್ವಿಜ್, ಸಂಸ್ಕೃತ ಸ್ಕಾಲರ್ ಶಿಪ್ ಪರೀಕ್ಷೆಯಲ್ಲಿ ರ್‍ಯಾಂಕ್‌ ವಿಜೇತರಿಗೆ ಪ್ರಶಸ್ತಿ ಪತ್ರ ಹಸ್ತಾಂತರಿಸಲಾಯಿತು. ಕುಣಿತ ಭಜನೆಯಲ್ಲಿ ಪಾಲ್ಗೊಂಡ ಕಾಲೇಜಿನ ಮೂರು ತಂಡದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಪ್ರಮುಖರಾದ ಪ್ರಗತಿಪರ ಕೃಷಿಕ ಕಡಮಜಲು ಸುಭಾಷ್ ಚಂದ್ರ ರೈ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ, ಧಾರ್ಮಿಕ ಮುಖಂಡರು, ಕುದ್ರೋಳಿ ಶ್ರೀ ಗೋಕರ್ನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್., ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಜಿ ಅಧ್ಯಕ್ಷ ಪೀತಾಂಬರ ಹೇರಾಜೆ, ಪುತ್ತೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ವಿಜಯಕುಮಾರ್ ಸೊರಕೆ, ರೋಟರಿ ಅಸಿಸ್ಟೆಂಟ್ ಗವರ್ನರ್ ಡಾ.ರಾಜಾರಾಮ್ ಕೆ.ಬಿ., ಬಿಜೆಪಿ ಗ್ರಾಮಾಂತರ ಮಂಡಳಿ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ರೈ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ, ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಕೆ.ಪಿ.ದಿವಾಕರ್, ಧನ್ವಂತರಿ ಆಸ್ಪತ್ರೆಯ ಡಾ.ರವಿಪ್ರಕಾಶ್, ಡಾ.ರವಿ ಕಕ್ಕೆ ಪದವು, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಪ್ರತಿಭಾರಂಗದ ಮುಖ್ಯಸ್ಥ ನಾರಾಯಣ ರೈ ಕುಕ್ಕುವಳ್ಳಿ, ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಮಾಜಿ ಕಾರ್ಯನಿರ್ವಹಣಾಧಿಕಾರಿ ಆರ್‌.ಸಿ. ನಾರಾಯಣ, ನ್ಯಾಯವಾದಿ ಚಿದಾನಂದ ಬೈಲಾಡಿ, ತಂತ್ರಿಗಳಾದ ಪ್ರೀತಂ ಪುತ್ತೂರಾಯ, ಉದ್ಯಮಿ ಶಿವರಾಮ ಆಳ್ವ, ಮಾಜಿ ಡಿ.ಆರ್.ಎಫ್.ಸಿ ಡಾ.ಸೂರ್ಯ ನಾರಾಯಣ, ರೋಟರಿ ಕ್ಲಬ್ ಪುತ್ತೂರು ಈಸ್ಟ್ ಪೂರ್ವಾಧ್ಯಕ್ಷ ಡಾ.ಶ್ಯಾಮ್ ಪ್ರಸಾದ್ , ರೋಟರಿ ಕ್ಲಬ್ ಪುತ್ತೂರು ಈಸ್ಟ್ ಅಧ್ಯಕ್ಷ ಶಶಿಧರ್ ಕಿನ್ನಿಮಜಲು, ಪದ್ಮಶ್ರೀ ಸೋಲಾರ್ ನ ಪದ್ಮನಾಭ ಶೆಟ್ಟಿ, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಪೂಜಾರಿ ಬೆದ್ರಾಳ, ನಿತೀಶ್ ಶಾಂತಿವನ, ಬಿಲ್ಲವ ಸಂಘ ಪುತ್ತೂರು ಇದರ ಪದಾಧಿಕಾರಿಗಳು, ಯುವವಾಹಿನಿ ಪುತ್ತೂರು ಇದರ ಪದಾಧಿಕಾರಿಗಳು ಮತ್ತು ಅನೇಕರು ಪಾಲ್ಗೊಂಡರು. ಉಪನ್ಯಾಸಕಿ ರಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

ಆಯುಧಪೂಜೆ..ಶಾರದಾ ಪೂಜೆ ಮೊದಲು ಕಾಲೇಜಿನ ಉಪನ್ಯಾಸಕರ ಹಾಗೂ ವಿದ್ಯಾರ್ಥಿಗಳ ವಾಹನಗಳಿಗೆ, ಕಾಲೇಜಿನ ಯಂತ್ರೋಪಕರಣಗಳಿಗೆ, ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಕಿಶನ್ ಯು. ರಾವ್ ಆಯುಧ ಪೂಜೆ ಮಾಡಿದರು. ಬಳಿಕ ಶಾರದಾ ಪೂಜೆ ನೆರವೇರಿತು.

ಸ್ವಾಮೀಜಿಗೆ ಪೂರ್ಣಕುಂಭ ಸ್ವಾಗತಕಾರ್ಯಕ್ರಮಕ್ಕೆ ಆಗಮಿಸಿದ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರನ್ನು ಪೂರ್ಣಕುಂಭದ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ಬಳಿಕ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಜಯಂತ್ ನಡುಬೈಲು ದಂಪತಿ ಸ್ವಾಮೀಜಿಯವರಿಗೆ ಹಾರಾರ್ಪಣೆ ಮಾಡುವ ಮೂಲಕ ಸ್ವಾಗತಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಕೆಶಿ ಸಿಎಂ ಆದರೆ ನನಗೆ ಸಚಿವ ಸ್ಥಾನವೇ ಬೇಡ : ರಾಜಣ್ಣ
ದರ್ಶನ್‌ ಜೈಲಿಂದ ಹೊರಬರಲು ನಿತ್ಯ ಪ್ರಾರ್ಥಿನೆ: ನಟ ಜೈದ್‌