ಸಮಾನತೆ ಸಾರಿದ ಶರಣ ಅಂಬಿಗರ ಚೌಡಯ್ಯ

KannadaprabhaNewsNetwork |  
Published : Jan 24, 2026, 02:45 AM IST
23ಎಚ್ಎಸ್ಎನ್4 : ಚನ್ನರಾಯಪಟ್ಟಣ ತಾಲೂಕು ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಶಾಸಕ ಸಿ.ಎನ್. ಬಾಲಕೃಷ್ಣ ಪುಷ್ಪಾರ್ಚನೆ ಮಾಡಿದರು.  | Kannada Prabha

ಸಾರಾಂಶ

ಹನ್ನೆರಡನೇ ಶತಮಾನ ಕಂಡ ಸಾವಿರಾರು ಶಿವಶರಣರಲ್ಲಿ ಅಂಬಿಗರ ಚೌಡಯ್ಯನೂ ಒಬ್ಬರು, ಅವರು ವಚನಗಳ ಮೂಲಕ ಶ್ರೇಷ್ಠ ವಚನಕಾರರಾಗಿ ಸಮಾಜದ ಅಂಕುಡೊಂಕು ತಿದ್ದಿದ ಶಿವಶರಣರು, ಜಾತ್ಯತೀತ ಸಮಾಜ ನಿರ್ಮಿಸುವ ಉದ್ದೇಶದಿಂದ ಹೋರಾಡಿದ ನಿಜಶರಣ ಅಂಬಿಗರ ಚೌಡಯ್ಯನವರ ವಚನಗಳು, ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿವೆ. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗ ಪ್ರವೃತ್ತಿಯಲ್ಲಿ ಅನುಭವಿ, ನೇರ-ನಿರ್ಭಿತ ನುಡಿಗಳಿಂದ ವಚನಗಳನ್ನು ಬರೆದಿರುವುದು ಗೋಚರಿಸುತ್ತದೆ. ಇವರ ಆಚಾರ-ವಿಚಾರ, ತತ್ವಾದರ್ಶ ನಮ್ಮ ಸಂಸ್ಕೃತಿಯನ್ನು ಬಿಂಬಿಸುತ್ತದೆ.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣಅಂಬಿಗರ ಚೌಡಯ್ಯ ಅವರು ತಮ್ಮ ವಚನ ಸಾಹಿತ್ಯದ ಮೂಲಕ ಸಮಾನತೆ ಸಾರಿದ ಶರಣರಾಗಿದ್ದಾರೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಅಭಿಪ್ರಾಯಪಟ್ಟರು.ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಗಂಗಾಮತಸ್ಥರ ಸಂಘದಿಂದ ಆಯೋಜಿಸಿದ್ದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.ಹನ್ನೆರಡನೇ ಶತಮಾನ ಕಂಡ ಸಾವಿರಾರು ಶಿವಶರಣರಲ್ಲಿ ಅಂಬಿಗರ ಚೌಡಯ್ಯನೂ ಒಬ್ಬರು, ಅವರು ವಚನಗಳ ಮೂಲಕ ಶ್ರೇಷ್ಠ ವಚನಕಾರರಾಗಿ ಸಮಾಜದ ಅಂಕುಡೊಂಕು ತಿದ್ದಿದ ಶಿವಶರಣರು, ಜಾತ್ಯತೀತ ಸಮಾಜ ನಿರ್ಮಿಸುವ ಉದ್ದೇಶದಿಂದ ಹೋರಾಡಿದ ನಿಜಶರಣ ಅಂಬಿಗರ ಚೌಡಯ್ಯನವರ ವಚನಗಳು, ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿವೆ. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗ ಪ್ರವೃತ್ತಿಯಲ್ಲಿ ಅನುಭವಿ, ನೇರ-ನಿರ್ಭಿತ ನುಡಿಗಳಿಂದ ವಚನಗಳನ್ನು ಬರೆದಿರುವುದು ಗೋಚರಿಸುತ್ತದೆ. ಇವರ ಆಚಾರ-ವಿಚಾರ, ತತ್ವಾದರ್ಶ ನಮ್ಮ ಸಂಸ್ಕೃತಿಯನ್ನು ಬಿಂಬಿಸುತ್ತದೆ. ವಚನಕಾರರು ಸಮಾಜದ ಅವ್ಯವಸ್ಥೆಯ ವಿರುದ್ಧ ವಚನ ಸಾಹಿತ್ಯದ ಮೂಲಕ ಹೋರಾಟ ನಡೆಸಿದ್ದಾರೆ. ಇವರ ವಿಚಾರಧಾರೆಗಳು ಮುಂದಿನ ಪೀಳಿಗೆಗೂ ತಲುಪಿಸುವಂತಾಗಬೇಕು ನಿಜಶರಣ ಅಂಬಿಗರ ಚೌಡಯ್ಯ ಅವರ ಆದರ್ಶ ನಾವೇಲ್ಲರೂ ಪಾಲಿಸಬೇಕು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು. ಚೌಡಯ್ಯ ಅವರ ವಚನಗಳು ನಮ್ಮಲ್ಲರಿಗೂ ದಾರಿದೀಪ ಎಂದರು.ತಾಲೂಕಿನಲ್ಲಿರುವ ಎಲ್ಲ ಕೆರೆಗಳು ಶೇ.೯೦ ಭಾಗ ಭರ್ತಿಯಾಗಿದ್ದು, ಮತ್ತೋದ್ಯಮಕ್ಕೆ ಅನುಕೂಲ ವಾಗಲಿದೆ. ಸಮಾಜದ ಕಾರ್ಯ ಚಟುವಟಿಕೆಗಳಿಗೆ ಅನುಕೂಲವಾಗಲೆಂದು ಭವನ ನಿರ್ಮಾಣ ಮಾಡಲು ತಾಲೂಕು ಆಡಳಿತ ವತಿಯಿಂದ ನಿವೇಶನ ನೀಡಿದ್ದು, ಅನುದಾನದ ಲಭ್ಯತೆ ಆಧಾರದ ಮೇಲೆ ಭವನ ನಿರ್ಮಾಣಕ್ಕೆ ಸಹಕರಿಸಲಾಗುವುದು ಎಂದರು.ಜಯಂತ್ಯುತ್ಸವದಲ್ಲಿ ಶಿರಸ್ತೇದಾರ್‌ ಪವನ್, ಕೆಡಿಪಿ ಸದಸ್ಯ ಕಬ್ಬಾಳು ಮಹೇಶ್, ತಾಲೂಕು ಗಂಗಾಮತಸ್ಥರ ಸಂಘದ ಅಧ್ಯಕ್ಷ ಸಿ.ಜಿ.ಕುಮಾರ್. ಉಪಾಧ್ಯಕ್ಷ ಬೋರಣ್ಣ, ಕಾರ್ಯದರ್ಶಿ ಎಚ್.ಎಸ್. ವೆಂಕಟೇಶ್, ನಿರ್ದೇಶಕರಾದ ರಾಜಣ್ಣ, ಮಂಜು ನಾಥ್ ಶ್ರವಣೀರಿ, ಬಾಗೂರು ವೆಂಕಟೇಶ್, ಮುಖಂಡರಾದ ರಾಜಣ್ಣ, ವೆಂಕಟೇಶ್, ಲೋಕೇಶ್ ಹಿರೀಸಾವೆ. ನಂದೀಶ್ ಆನೇಕೆರೆ ಇತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣಕ್ಕೆ ಸಿದ್ಧಗಂಗಾ ಮಠದ ಕೊಡುಗೆ ಅನನ್ಯ
ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರ ಹಿತ ಕಾಪಾಡಿ