ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲಸಂಗಮದಲ್ಲಿ ಆಯೋಜಿಸಿದ್ದ 37ನೇ ಶರಣ ಮೇಳ ಉದ್ಘಾಟಿಸಿ ಮಾತನಾಡಿದರು.
ಬಸವಾದಿ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದರು. ಪಟ್ಟಭದ್ರ ಹಿತಾಸಕ್ತಿಗಳು ಚಲನೆ ರಹಿತ ಜಾತಿ ವ್ಯವಸ್ಥೆ ರೂಪಿಸಿದ್ದರು. ಇದನ್ನು ವಿರೋಧಿಸಿದ ಬಸವಣ್ಣನವರು ಜಾತಿ, ಆಚರಣೆಗಳು ದೇವರು ಮಾಡಿದ್ದಲ್ಲ ಎಂದು ಸಾರಿದರು.ಬಹುಸಂಖ್ಯಾತರನ್ನು ಶಿಕ್ಷಣದಿಂದ ದೂರ ಇಡಲು ಅಸಮಾನತೆಯಿಂದ ಕೂಡಿದ ಚಾತುವರ್ಣ ವ್ಯವಸ್ಥೆ ಮಾಡಿದ್ದರು. ಬಸವಾದಿ ಶರಣರ ವಚನ ಚಳವಳಿ ತಾರತಮ್ಯದಿಂದ ಕೂಡಿದ ಕರ್ಮ ಸಿದ್ಧಾಂತವನ್ನು, ಮೌಢ್ಯವನ್ನು ತೊಡೆದು ಹಾಕಿತು. ಹಣೆಬರಹ ಮತ್ತು ಕರ್ಮ ಸಿದ್ಧಾಂತವನ್ನು, ಹಿಂದಿನ ಜನ್ಮ, ಮುಂದಿನ ಜನ್ಮ ಎನ್ನುವುದನ್ನು ಬಸವಣ್ಣನವರು ಸಂಪೂರ್ಣ ತಿರಸ್ಕರಿಸಿದರು ಎಂದು ಹೇಳಿದರು.
ಪಟ್ಟಭದ್ರ ಹಿತಾಸಕ್ತಿಗಳು ಇರುವುದು ಬಹಳ ಕಡಿಮೆ ಜನ. ಆದರೆ ಇವರು ಬಹಳಷ್ಟು ಸ್ಟ್ರಾಂಗ್ ಇದ್ದಾರೆ. ಶೋಷಣೆಗೆ, ದೌರ್ಜನ್ಯಕ್ಕೆ ಒಳಗಾದವರು ಬಹುಸಂಖ್ಯಾತರು. ಇವರು ಒಗ್ಗಟ್ಟಾಗಬೇಕು. ಜಾತಿಯ ಕಾರಣಕ್ಕೆ ಹಿಂದುಳಿದಿರುವ ಸಮುದಾಯಗಳಿಗೆ ಆರ್ಥಿಕ ಶಕ್ತಿ ನೀಡಬೇಕು ಎಂದರು.
ಬಸವಧರ್ಮ ಪೀಠಾಧ್ಯಕ್ಷೆ ಜಗದ್ಗುರು ಡಾ.ಮಾತೆ ಗಂಗಾದೇವಿ, ಉಪಾಧ್ಯಕ್ಷರಾದ ಮಹದೇಶ್ವರ ಸ್ವಾಮೀಜಿ, ಕುಂಬಳಗೋಡಿನ ವಿಶ್ವಕಲ್ಯಾಣ ಮಿಷನ್ ನ ಬಸವಯೋಗಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಹುನಗುಂದ ಶಾಸಕರಾದ ಶರಣ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆ ವಹಿಸಿದ್ದರು.ಸಚಿವರಾದ ಬೈರತಿ ಸುರೇಶ್, ಆರ್.ಬಿ. ತಿಮ್ಮಾಪುರ, ಶಾಸಕರಾದ ಎಂ.ನರೇಂದ್ರ ಸ್ವಾಮಿ, ಎಚ್.ವೈ.ಮೇಟಿ, ರಾಘವೇಂದ್ರ ಹಿಟ್ನಾಳ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
---ಶರಣ ಮೇಳ ಇದು ಮನುಷ್ಯರ ಮೇಳ, ಚರ್ಚೆಯಾಗುವ ಮೇಳ, ಮಾನವ ಅಲ್ಪ ಮಾನವನಾಗಿದ್ದಾನೆ. ಕುವೆಂಪು ಅವರ ಹೇಳಿಕೆಯಂತೆ ವಿಶ್ವ ಮಾನವರಾಗಬೇಕು, ಶರಣಮೇಳ ಆಯೋಜಿಸಿದ್ದಕ್ಕೆ ತಮಗೆಲ್ಲ ಧನ್ಯವಾದಗಳು. ಶರಣಮೇಳದಲ್ಲಿ ಅತ್ಯಂತ ಸಂತೋಷದಿಂದ ಭಾಗವಹಿಸಿದ್ದೇನೆ...
- ಸಿದ್ದರಾಮಯ್ಯ ಮುಖ್ಯಮಂತ್ರಿ