ಬಸವಕಲ್ಯಾಣದಲ್ಲಿ ಇಂದಿನಿಂದ ಶರಣ ಕಮ್ಮಟ ಅನುಭವ ಮಂಟಪ ಉತ್ಸವ

KannadaprabhaNewsNetwork |  
Published : Nov 23, 2024, 12:31 AM IST
ಚಿತ್ರ 22ಬಿಡಿಆರ್56 | Kannada Prabha

ಸಾರಾಂಶ

ಬಸವಕಲ್ಯಾಣದ ಅನುಭವ ಮಂಟಪದ ಆವರಣದಲ್ಲಿ ಇಂದಿನಿಂದ ಶನಿವಾರ ಹಾಗೂ ಭಾನುವಾರ ನಡೆಯಲಿರುವ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವಕ್ಕೆ ಭರದ ಸಿದ್ಧತೆ ನಡೆದಿದೆ.

ಕನ್ನಡಪ್ರಭ ವಾರ್ತೆ ಬಸವಕಲ್ಯಾಣ

ಬಸವಕಲ್ಯಾಣದ ಅನುಭವ ಮಂಟಪದ ಆವರಣದಲ್ಲಿ ಇಂದಿನಿಂದ ಶನಿವಾರ ಹಾಗೂ ಭಾನುವಾರ ನಡೆಯಲಿರುವ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವಕ್ಕೆ ಭರದ ಸಿದ್ಧತೆ ನಡೆದಿದೆ.

ಗದಗಿನ ತೋಂಟದ ಶ್ರೀಗಳು ಹಾಗೂ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರ ಸಾನಿಧ್ಯದಲ್ಲಿ ಹಾಗೂ ಇಳಕಲ್ ನ ಗುರುಮಂಹಾತ ಮಹಾಸ್ವಾಮಿಗಳು, ಹಾರಕೂಡಿನ ಡಾ. ಚನ್ನವೀರ ಶಿವಾಚಾರ್ಯರು, ಹುಲಸೂರಿನ ಶಿವಾನಂದ ಮಹಾಸ್ವಾಮಿ, ಬೈಲಹೊಂಗಲಿನ ಸಿದ್ದಲಿಂದ ಮಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯಲಿರುವ ಉತ್ಸವವನ್ನು ಬೆಳಿಗ್ಗೆ 11 ಗಂಟೆಗೆ ಮೇಘಾಲಯದ ರಾಜ್ಯಪಾಲರಾದ ಸಿಎಚ್ ವಿಜಯಶಂಕರ ಉದ್ಘಾಟಿಸುವರು.

ಕರ್ನಾಟಕದ ರಾಜ್ಯಪಾಲರಾದ ಥಾವರಚಂದ ಗೆಹಲೋಟ್ ಪ್ರಶಸ್ತಿ ಪ್ರದಾನ ಮಾಡುವರು. ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅಧ್ಯಕ್ಷತೆ ವಹಿಸುವರು. ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿವೈ ವಿಜಯೇಂದ್ರ ಗ್ರಂಥ ಲೋಕಾರ್ಪಣೆ ಮಾಡುವರು. ಸಂಸದ ಸಾಗರ ಖಂಡ್ರೆ ಬಸವಗುರುಪೂಜೆ ಮಾಡಿದರೆ ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ಸದಸ್ಯರಾದ ಮಾರುತಿರಾವ ಮೂಳೆ ಭಾಗವಹಿಸುವರು ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾದ ಶಾಸಕ ಶರಣು ಸಲಗರ ಸ್ವಾಗತಿಸುವರು.

ಪ್ರಶಸ್ತಿ ಪುರಸ್ಕೃತರಾದ ಪದ್ಮಶ್ರೀ ಪುರಸ್ಕೃತ ಡಾ. ಕೆಎಸ್ ರಾಜಣ್ಣ, ನಿವೃತ್ತ ನ್ಯಾಯಮೂರ್ತಿಗಳಾದ ನಾಗಮೋಹನ ದಾಸ್, ಮಹಾರಾಷ್ಟ್ರ ಬಸವ ಪರಿಷತ್ ರಾಜ್ಯಾಧ್ಯಕ್ಷ ಬಿಎಂ ಪಾಟೀಲ್, ಬಸವ ಟಿವಿ ಸಂಸ್ಥಾಪಕರಾದ ಈ ಕೃಷ್ಣಪ್ಪ ಉಪಸ್ಥಿತರಿರುವರು.

ಮಧ್ಯಾಹ್ನ 2 ಗಂಟೆಗೆ ವಿವಿಧ ಶ್ರೀಗಳ ಸಮ್ಮುಖದಲ್ಲಿ ಲಿಂಗಾಯತ ಹೋರಾಟ ಮುಂದೇನು ಎಂಬ ಸಂವಾದ ನಡೆಯಲಿದೆ.

ಇದಕ್ಕೂ ಮುನ್ನ ಬೆಳಿಗ್ಗೆ 9.30ಕ್ಕೆ ಗುರುಬಸವ ಪೂಜೆ ಮತ್ತು ವಚನ ಪಠಣ ಷಟಸ್ಥಲ ಧ್ವಜಾರೋಹಣ ನಡೆಯಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪರಂಗೆ ಸಿಎಂ ಸ್ಥಾನ ನೀಡದಿದ್ದರೆ ರಾಜ್ಯಕ್ಕೆ ಅಪಮಾನ ಮಾಡಿದಂತೆ
ಮೀಸಲು ವರ್ಗೀಕರಣದ ವಿರುದ್ಧ ಇಂದು ಬೆಳಗಾವಿ ಚಲೋ