ಕನ್ನಡಪ್ರಭ ವಾರ್ತೆ ಕಲಬುರಗಿ
ಸುಭಾಶ್ಚಂದ್ರ ಪಾಟೀಲ್ ಸ್ಮಾರಕ ಜನಕಲ್ಯಾಣ ಟ್ರಸ್ಟ್ ನಗರದ ಲಿಂ. ಡಾ. ಬಸವರಾಜಪ್ಪ ಅಪ್ಪ ಸ್ಮರಣಾರ್ಥ ಭವನದಲ್ಲಿ ರವಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಶರಣ ಸಾಹಿತ್ಯ ಮತ್ತು ಸಾಂಸ್ಕೃತಿ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರೋಟದಲ್ಲಿ ಮೆರವಣಿಗೆಯಲ್ಲಿ ಶರಣರ ವಚನ ಕಟ್ಟುಗಳ ಪ್ರದರ್ಶನ, ಮಹಿಳೆಯರ ಕುಂಭ ಕಳಸ, ಗೊಂಬೆ ಕುಣಿತ ಮತ್ತು ವಿವಿಧ ಸಾಂಸ್ಕೃತಿಕ ಕಲಾ ತಂಡಗಳ ನೃತ್ಯ ನೋಡಿದರೆ ಇಂದಿನ ಆಧುನಿಕ ಯುಗದಲ್ಲಿಯೂ ಕಲೆ, ಸಂಸ್ಕೃತಿ ಉಳಿಸಿಕೊಂಡು ಹೋಗುತ್ತಿರುವುದನ್ನು ನೋಡಿ ತುಂಬಾ ಖುಷಿಯಾಯಿತು. ಈ ಸಂಸ್ಕೃತಿ ನಿರಂತರವಾಗಿರಲಿ ಎಂದರು.ಮಾಧ್ಯಮ ಪ್ರತಿನಿಧಿಗಳಿಗೆ, ವೈದ್ಯಕೀಯ ಕ್ಷೇತ್ರದ ಸಾಧಕರಿಗೆ ಗೌರವ ಸನ್ಮಾನ, ಸಾಧಕರಿಗೆ ರಾಜ್ಯ ಮಟ್ಟದ ಬಸವ ಪುರಸ್ಕಾರ, ಬಸವ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಂತರ ಮೊದಲ ಗೋಷ್ಠಿ ಮತ್ತು ಕವಿಗೋಷ್ಠಿ ನಡೆದ ಬಳಿಕ ಸಂಜೆ ಸಮಾರೋಪ ಸಮಾರಂಭ ನಡೆಯಿತು.
ಮುಖ್ಯಮಂತ್ರಿ ಸಲಹೆಗಾರ ಬಿ.ಆರ್.ಪಾಟೀಲ್, ಶಾಸಕ ಅಲ್ಲಮಪ್ರಭು ಪಾಟೀಲ್, ಸ್ವಾಗತ ಸಮಿತಿಯ ಶಿವಕಾಂತ ಮಹಾಜನ, ಕಾರ್ಯಾಧ್ಯಕ್ಷ ದಿಲೀಪ ಆರ್. ಪಾಟೀಲ್, ಸಮ್ಮೇಳನದ ಸಂಚಾಲಕ ಪ್ರೊ ಯಶವಂತರಾಯ ಅಷ್ಠಗಿ,
ಟ್ರಸ್ಟ್ ಅಧ್ಯಕ್ಷ ಶರಣಗೌಡ ಪಾಟೀಲ್ ಪಾಳಾ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಸಮ್ಮೇಳನದ ಸಂಚಾಲಕ ಪ್ರೊ.ಯಶವಂತರಾಯ ಅಷ್ಠಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಾಗಲಿಂಗಯ್ಯ ಮಠಪತಿ ಕಾರ್ಯಕ್ರಮ ನಿರೂಪಿಸಿದರು.
ಗಮನ ಸೆಳೆದ ಸಾರೋಟದ ಮೆರವಣಿಗೆ: ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮತ್ತು ಸಮ್ಮೇಳನದ ಸರ್ವಾಧ್ಯಕ್ಷರಾಗಿರುವ ಮಾತೋಶ್ರೀ ಡಾ.ದಾಕ್ಷಾಯಿಣಿ ಎಸ್. ಅಪ್ಪ ಅವರಿಗೆ ಬೆಳಗ್ಗೆ ಸಾರೋಟದಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಗೆ ಎಸಿಪಿ ಡಿ.ಜಿ.ರಾಜಣ್ಣ ಚಾಲನೆ ನೀಡಿದರು. ಶ್ರೀ ಶರಣಬಸವೇಶ್ವರ ದೇವಸ್ಥಾನ ಆವರಣದಿಂದ ಸಮ್ಮೇಳನದ ಸಭಾಭವನದವರೆಗೂ ಮಹಿಳೆಯರಿಂದ ಕುಂಭ ಕಳಸ ಮೆರವಣಿಗೆ ಮತ್ತು ಶರಣರ ವಚನ ಕಟ್ಟುಗಳ ಪ್ರದರ್ಶನ, ಗೊಂಬೆ ಕುಣಿತ, ವಿವಿಧ ಕಲಾ ತಂಡಗಳ ನೃತ್ಯ ಗಮನ ಸೆಳೆಯಿತು. ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಅವರು ರಾಷ್ಟಧ್ವಜಾರೋಹಣ ನೆರವೇರಿಸಿದರು. ಪ್ರಭು ಶ್ರೀ ತಾಯಿ ಅವರು ಷಟಸ್ಥಲ ಧ್ವಜಾರೋಹಣ ನೆರವೇರಿಸಿದರು.ಶ್ರೀ ಶರಣಬಸವೇಶ್ವರ ಸಂಸ್ಥಾನದ ದೊಡ್ಡಪ್ಪ ಅಪ್ಪ ಮತ್ತು ನೀಲಮ್ಮ ಗೌಡತಿಯವರು ತ್ರಿವಿಧ ದಾಸೋಹ ಸೇವೆ ಮಾಡುತ್ತಿದ್ದರು. ಅವರಂತೆಯೇ ಡಾ. ಶರಣಬಸವಪ್ಪ ಅಪ್ಪ ಮತ್ತು ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವನವರು ಅದನ್ನು ಮುಂದುವರಿಸಿಕೊಂಡು ಹೋಗುವುದರ ಜೊತೆಗೆ ನಿರ್ಗತಿಕರಿಗೆ ನೆರವಾಗುತ್ತಿದ್ದಾರೆ.