ಕನ್ನಡಪ್ರಭ ವಾರ್ತೆ ಹಲಗೂರು
ವಿದ್ಯಾ ಭಾರತಿ ವತಿಯಿಂದ ಹೈದರಾಬಾದ್‌ನಲ್ಲಿ ನಡೆದ ವೇದಗಣಿತ ಪತ್ರ ವಾಚನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಜೆಜೆ ಪಬ್ಲಿಕ್ ಶಾಲೆ 8ನೇ ತರಗತಿ ವಿದ್ಯಾರ್ಥಿನಿ ಶರಣ್ಯರನ್ನು ಶಾಲಾ ವತಿಯಿಂದ ಅಭಿನಂದಿಸಲಾಯಿತು.ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶರಣ್ಯ, ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಬರುತ್ತದೆ ಎಂದು ನಂಬಿದ್ದೆ. ಆದರೆ, ದ್ವಿತೀಯ ಸ್ಥಾನ ಬಂದಿದೆ. ಮುಂದಿನ ದಿನಗಳಲ್ಲಿ ನಮ್ಮ ಶಾಲೆಯಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಭಾಗವಹಿಸಿ ಶಾಲೆ ಹಾಗೂ ನಮ್ಮ ಪೋಷಕರಿಗೆ ಕೀರ್ತಿ ತರುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ ಎಂದರು.
ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದೇನೆ. ಅಂತರ್ ಶಾಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಮಂಡ್ಯದ ತೂಬಿನಕೆರೆಯಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ರಾಜ್ಯ ಮಟ್ಟದಲ್ಲಿ ಮೈಸೂರಿನಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಝೋನಲ್ ಮಟ್ಟದ ಹೈದರಾಬಾದಿನಲ್ಲಿ ನಡೆದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದೇನೆ ಎಂದರು.ನನಗೆ ಈ ಅವಕಾಶ ನೀಡಿದ ನನ್ನ ಶಾಲೆಯ ಶಿಕ್ಷಕ ವೃಂದಕ್ಕೆ ಧನ್ಯವಾದ ಅರ್ಪಿಸುತ್ತೇನೆ. ಮುಂದಿನ ಸ್ಪರ್ಧೆಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಲು ಪ್ರಯತ್ನಿಸುತ್ತೇನೆ ಎಂದರು.
ಶಾಲೆ ಶಿಕ್ಷಣ ಸಂಯೋಜಕ ವಿಕಾಸ್ ಮಾತನಾಡಿ, ಶರಣ್ಯ ಝೋನಲ್ ಮಟ್ಟದಲ್ಲಿ 122 ಬಾಲಕರು, 90 ಬಾಲಕಿಯರು, 95 ಶಿಕ್ಷಕರನ್ನೊಳಗೊಂಡ ಕಠಿಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆಯುವುದು ಸುಲಭದ ಮಾತಲ್ಲ. ಶರಣ್ಯ ಮುಂದಿನ ಸ್ಪರ್ಧೆಗಳಲ್ಲಿ ಇನ್ನು ಹೆಚ್ಚಿನ ಸಾಧನೆ ಮಾಡಲಿ ಎಂದು ಹಾರೈಸುತ್ತೇನೆ ಎಂದರು.ಈ ಸಂದರ್ಭದಲ್ಲಿ ಶಾಲೆ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಕೆ.ಜೆ. ಸೋಮಶೇಖರ್, ಪ್ರಾಂಶುಪಾಲೆ ಕೆ.ಎನ್.ಲಲಿತಾಂಬ, ಶಿಕ್ಷಕಿಯರಾದ ಬಿ.ಸುಮಿತ್ರ ,ಲೀಲಾವತಿ, ಶಿಕ್ಷಕ ಎಸ್.ವಿಕಾಸ್ ಸೇರಿದಂತೆ ಇತರರು ಇದ್ದರು.
ನಾಳೆ ಲೋಕಪಾವನಿ ಬ್ಯಾಂಕ್ ವಾರ್ಷಿಕ ಸಭೆಮಂಡ್ಯ:
ನಗರದ ಲೋಕಪಾವನಿ ಮಹಿಳಾ ಸಹಕಾರಿ ಬ್ಯಾಂಕ್‌ನ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯನ್ನು ಸೆ.24ರಂದು ಕರೆಯಲಾಗಿದೆ. ಬ್ಯಾಂಕ್‌ನ ಅಧ್ಯಕ್ಷೆ ಸಿ.ಜೆ.ಸುಜಾತಾ ಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಅಂದು ಬೆಳಗ್ಗೆ 10.30ಕ್ಕೆ ಕಲ್ಲಹಳ್ಳಿಯ ನಾಗಸಿರಿ ಕಲ್ಯಾಣ ಮಂಪಟದಲ್ಲಿ ಸಭೆ ಆರಂಭಗೊಳ್ಳಲಿದೆ ಎಂದು ಬ್ಯಾಂಕಿನ ಪ್ರಭಾರ ವ್ಯವಸ್ಥಾಪಕಿ ಸುಮತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.