....ಶರಾವತಿ ಹಿನ್ನೀರಿನ ಮಟ್ಟ ಏರಿಕೆ:ಮುಪ್ಪಾನೆ ಲಾಂಚ್‌ ಸೇವೆ ಪುನಾರಂಭ

KannadaprabhaNewsNetwork |  
Published : Jul 14, 2026, 01:45 AM IST
ಪೊಟೋ: 13ಎಸ್‌ಎಂಜಿಕೆಪಿ03 | Kannada Prabha

ಸಾರಾಂಶ

ಲಿಂಗನಮಕ್ಕಿ ಜಲಾಶಯದಲ್ಲಿ ಶರಾವತಿ ಹಿನ್ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆ ಮುಪ್ಪಾನೆ ಮತ್ತು ಹಲ್ಕೆ ನಡುವಿನ ಲಾಂಚ್ ಸೇವೆ ಪುನಾರಂಭಗೊಂಡಿದೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಲಿಂಗನಮಕ್ಕಿ ಜಲಾಶಯದಲ್ಲಿ ಶರಾವತಿ ಹಿನ್ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆ ಮುಪ್ಪಾನೆ ಮತ್ತು ಹಲ್ಕೆ ನಡುವಿನ ಲಾಂಚ್ ಸೇವೆ ಪುನಾರಂಭಗೊಂಡಿದೆ. ಲಿಂಗನಮಕ್ಕಿ ಡ್ಯಾಂ ಹಿನ್ನೀರು ಕನಿಷ್ಠ ಮಟ್ಟಕ್ಕೆ ಇಳಿದ ಪರಿಣಾಮ ನೀರಿನ ಆಳದಲ್ಲಿನ ಮರದ ಕಾಂಡಗಳು ಲಾಂಚ್‌ ತಳಭಾಗಕ್ಕೆ ತಗಲುವ ಸಾಧ್ಯತೆ ಹಾಗೂ ವಾಹನ ಇಳಿಸುವ ಪ್ಲಾಟ್‌ಫಾರ್ಮ್ ಜಾಗದಲ್ಲಿ ಲಾಂಚ್ ಅಡಿ ಭಾಗ ನೆಲಕ್ಕೆ ತಾಗುವ ಹಿನ್ನೆಲೆ, ಜನರ ಸುರಕ್ಷತೆಯ ಹಿನ್ನೆಲೆ ಕಳೆದ ಜೂನ್ 2 ರಂದು ತಾತ್ಕಾಲಿಕವಾಗಿ ಮುಪ್ಪಾನೆ- ಹಲ್ಕೆ ಲಾಂಚ್ ಸೇವೆ ಸ್ಥಗಿತಗೊಂಡಿತ್ತು.

ಈಗ ಹಿನ್ನೀರಿನ ಮಟ್ಟ ಹೆಚ್ಚಳವಾಗಿರುವುದರಿಂದ ಸೋಮವಾರದಿಂದ ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆ ಲಾಂಚ್ ಸೇವೆಯನ್ನು ಪುನಾರಂಭ ಮಾಡಿದೆ. ಕರೂರು ಮತ್ತು ಭಾರಂಗಿ ಹೋಬಳಿಯ ಸಂಪರ್ಕದ ಅತಿ ಮುಖ್ಯ ಮಾರ್ಗವಾಗಿರುವ ಮುಪ್ಪಾನೆ ಲಾಂಚ್‌ ತುಮರಿ, ಸಿಗಂದೂರು ಮತ್ತು ಭಾರಂಗಿ ಹೋಬಳಿ ಜನರಿಗೆ ಅನುಕೂಲ ಕಲ್ಪಿಸುತ್ತದೆ.

----------

ಪೊಟೋ: 13ಎಸ್‌ಎಂಜಿಕೆಪಿ03

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೀಘ್ರದಲ್ಲೇ ‌ಹಲವು ಅಭಿವೃದ್ಧಿ ಕಾಮಗಾರಿಗಳು ಪೂರ್ಣ: ಕೆ.ಎಂ.ಉದಯ್
ಕಾವೇರಿ ನದಿಯಲ್ಲಿ ಗಾಯಕಿ ಎಸ್.ಜಾನಕಿ ಅಸ್ಥಿ ವಿಸರ್ಜನೆ