ಕಾರವಾರ: ನಮ್ಮಲ್ಲಿರುವ ಜ್ಞಾನವನ್ನು ಹಂಚುವುದರ ಮೂಲಕ ಸಮಾಜಕ್ಕೆ ನಾವು ಉಪಕಾರಿಯಾಗಬೇಕು. ನಮ್ಮ ಸಾಧನೆಯ ಜತೆಗೆ ನಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಜ್ಞಾನವನ್ನು ಹಂಚಬೇಕು. ನಮ್ಮ ಅನುಭವಗಳನ್ನು ದಾಖಲಿಸಬೇಕು ಎಂದು ಡಾ. ಪಾದೇಕಲ್ಲು ವಿಷ್ಣುಭಟ್ ತಿಳಿಸಿದರು.
ಸಿಐಡಿ ಪೋಲೀಸ್ ಅಧೀಕ್ಷಕ ರಾಘವೇಂದ್ರ ಹೆಗಡೆ ಮಾತನಾಡಿ, ಪ್ರಶಸ್ತಿ ಪುರಸ್ಕಾರದಿಂದ ಸಾಧನೆಗೆ ಗೌರವ ಸಲ್ಲಿಸಲ್ಪಟ್ಟರೆ, ಇನ್ನುಳಿದವರಿಗೆ ಅವರ ಸಾಧನೆಯೇ ಪ್ರೇರಣೆಯಾಗಲು ಸಾಧ್ಯವಾಗುತ್ತದೆ. ಹವ್ಯಕ ಮಹಾಸಭೆ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು. ಸಮಾಜದ ಉನ್ನತಿ ಇನ್ನಷ್ಟು ಸಾಧ್ಯವಾಗಲಿ ಎಂದು ಅಭಿಪ್ರಾಯಪಟ್ಟರು.
ಹವ್ಯಕ ಮಹಾಸಭೆಯ ಅಧ್ಯಕ್ಷ ಡಾ. ಗಿರಿಧರ ಕಜೆ ಮಾತನಾಡಿ, ಹವ್ಯಕ ಸಮಾಜ ಯಾವುದೋ ಘರ್ಷಣೆ ಇತ್ಯಾದಿಗಳ ಕಾರಣದಿಂದ ಹುಟ್ಟುಕೊಂಡಿದ್ದಲ್ಲ. ಲೋಕಕಲ್ಯಾಣದ ಕಾರಣಕ್ಕಾಗಿಯೇ ಹುಟ್ಟಿಕೊಂಡವರು ಹವ್ಯಕರು. ಸ್ವಾತಂತ್ರ್ಯ ಪೂರ್ವದಲ್ಲೇ ಸಂಘಟಿತರಾಗಿ ಈ ಮಹಾಸಭೆಯನ್ನು ಹವ್ಯಕರು ಸಂಘಟಿಸದರು ಎಂದರೆ ನಮ್ಮ ಸಮಾಜದ ಮುಂದಾಲೋಚನೆಯನ್ನು ಗುರುತಿಸಲು ಸಾಧ್ಯ. ಹವ್ಯಕ ಮಹಾಸಭೆಯು 81ನೇ ಸಂಸ್ಥಾಪನೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಇಷ್ಟು ವರ್ಷಗಳಲ್ಲಿ ಮಹಾಸಭೆ ಎಷ್ಟು ಆಸ್ತಿಯನ್ನುಗಳಿಸಿದೆ ಎಂದು ಆಲೋಚಿಸುವುದಕ್ಕಿಂತ, ಪ್ರತಿಭಾವಂತ ಹವ್ಯಕ ಸಮಾಜವೇ ಮಹಾಸಭೆಯ ಆಸ್ತಿ ಎಂದು ಅಭಿಪ್ರಾಯಪಟ್ಟರು.2018ರಲ್ಲಿ ಎರಡನೇ ವಿಶ್ವ ಹವ್ಯಕ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಅದಕ್ಕೆ ನಾಡಿನಾದ್ಯಂತ ಅಭೂತಪೂರ್ವ ಪ್ರತಿಸ್ಪಂದನೆ ವ್ಯಕ್ತವಾಗಿತ್ತು. ಇದೀಗ ಈ ವರ್ಷ ಡಿ. 27, 28, 29ರಂದು 3ನೇ ವಿಶ್ವಹವ್ಯಕ ಸಮ್ಮೇಳನವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಹತ್ತಾರು ಸಮಾವೇಶಗಳು ನಡೆಯಲಿದ್ದು, ಇದು ಎಲ್ಲ ಸಮಾಜದವರಿಗೂ ಮುಕ್ತವಾಗಿರಲಿದೆ. ಇದು ಜಾತಿಯ ಸಮಾವೇಶವಾಗದೇ, ಹವ್ಯಕ ಸಮಾಜವನ್ನು ಸಮಷ್ಟಿ ಸಮಾಜಕ್ಕೆ ಪರಿಚಯಿಸುವ ಕಾರ್ಯ ಇಲ್ಲಿ ನಡೆಯಲಿದೆ ಎಂದರು.
ಹವ್ಯಕರನ್ನು ಮಯೂರ ವರ್ಮ ಉತ್ತರದ ಅಹಿಚ್ಛತ್ರದಿಂದ ಕರೆದುಕೊಂಡು ಬಂದ ಎಂಬುದು ನಿಜವಾದರೂ, ಹವ್ಯಕರು ಮೂಲತಃ ಈ ನಾಡಿನವರು. ಕಾರಣಾಂತರಗಳಿಂದ ಇಲ್ಲಿಂದ ಉತ್ತರ ಭಾರತಕ್ಕೆ ವಲಸೆ ಹೋಗಿದ್ದರು. ಮಯೂರವರ್ಮ ಮತ್ತೆ ನಮ್ಮ ಈ ಮಣ್ಣಿಗೆ ಕರೆತಂದ ಎಂದು ಹವ್ಯಕರ ಇತಿಹಾಸದ ಕುರಿತಾಗಿ ಹೇಳಿದರು.
ಪ್ರಧಾನ ಕಾರ್ಯದರ್ಶಿ ಸಿಎ. ವೇಣುವಿಘ್ನೇಶ ಸಂಪ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪಾಧ್ಯಕ್ಷ ಆರ್.ಎಂ. ಹೆಗಡೆ ಬಾಳೇಸರ, ಶ್ರೀಧರ ಭಟ್ಟ ಕೆಕ್ಕಾರು, ಕೋಶಾಧಿಕಾರಿ ಕೃಷ್ಣಮೂರ್ತಿ ಭಟ್ ಯಲಹಂಕ, ಕಾರ್ಯದರ್ಶಿ ಪ್ರಶಾಂತಕುಮಾರ ಭಟ್ಟ ಮಲವಳ್ಳಿ, ಆದಿತ್ಯ ಹೆಗಡೆ ಕಲಗಾರು, ಕಾರ್ಯಕ್ರಮದ ಸಂಚಾಲಕರಾದ ರವಿನಾರಾಯಣ ಪಟ್ಟಾಜೆ, ಮುಗಲೋಡಿ ಕೃಷ್ಣಮೂರ್ತಿ ಇದ್ದರು.
ಹವ್ಯಕ ವಿಭೂಷಣ: ಎಚ್. ಎಂ. ತಿಮ್ಮಪ್ಪ ಕಲಸಿ(ಸಾಹಿತ್ಯ), ಹವ್ಯಕ ಭೂಷಣ ಗಣೇಶ ಭಟ್(ಶಿಲ್ಪಶಾಸ್ತ್ರ), ಶಿವಾನಂದ ಕಳವೆ(ಪರಿಸರ), ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ(ಯೋಗ), ಹವ್ಯಕ ಶ್ರೀ-