ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ ಶಶಿಕುಮಾರ್ ರೈ ಬಾಲ್ಯೋಟ್ಟು ಅವಿರೋಧ ಆಯ್ಕೆ

KannadaprabhaNewsNetwork |  
Published : Jan 07, 2025, 12:30 AM IST
ಶಶಿಕುಮಾರ್‌ ರೈ ಬಾಲ್ಯೋಟ್ಟು | Kannada Prabha

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನೂತನ ಅಧ್ಯಕ್ಷರಾಗಿ ಎಸ್‌ಸಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನೀಲಯ ಎಂ. ಅಗರಿ ಆಯ್ಕೆಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನೂತನ ಅಧ್ಯಕ್ಷರಾಗಿ ಎಸ್‌ಸಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನೀಲಯ ಎಂ. ಅಗರಿ ಆಯ್ಕೆಯಾಗಿದ್ದಾರೆ.

ಸೋಮವಾರ ಯೂನಿಯನ್‌ನ ಕಚೇರಿಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್‌. ರಾಜೇಂದ್ರ ಕುಮಾರ್‌ ಉಪಸ್ಥಿತಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರನ್ನಾಗಿ ಶಶಿಕುಮಾರ್‌ ರೈ ಬಾಲ್ಯೊಟ್ಟು (ಪುತ್ತೂರು ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ) ಅವರನ್ನು ಮತ್ತು ಉಪಾಧ್ಯಕ್ಷರನ್ನಾಗಿ ನೀಲಯ ಎಂ. ಅಗರಿ ಅವರನ್ನು (ಮಂಗಳೂರು ತಾಲೂಕಿನ ಮೂಡುಬಿದಿರೆ ಮತ್ತು ಮೂಲ್ಕಿ ಫಿರ್ಕಾ ಹೊರತುಪಡಿಸಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ) ಆಯ್ಕೆ ಮಾಡಲಾಯಿತು.

ನಿರ್ದೇಶಕರ ಅವಿರೋಧ ಆಯ್ಕೆ:

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಆಡಳಿತ ಮಂಡಳಿ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳೂರು ತಾಲೂಕಿನ ಫ್ಯಾಕ್ಸ್ ಸಂಘಗಳ ಕ್ಷೇತ್ರದಿಂದ ನೀಲಯ ಎಂ. ಅಗರಿ, ಬಂಟ್ವಾಳ ತಾಲೂಕು ಫ್ಯಾಕ್ಸ್ ಸಹಕಾರ ಸಂಘಗಳ ಕ್ಷೇತ್ರದಿಂದ ಬಿ. ಪದ್ಮಶೇಖರ್ ಜೈನ್, ಪುತ್ತೂರು ತಾಲೂಕು ಫ್ಯಾಕ್ಸ್ ಸಹಕಾರ ಸಂಘಗಳ ಕ್ಷೇತ್ರದಿಂದ ಶಶಿಕುಮಾರ್ ರೈ ಬಾಲ್ಯೋಟ್ಟು, ಸುಳ್ಯ ತಾಲೂಕು ಫ್ಯಾಕ್ಸ್ ಸಹಕಾರ ಸಂಘಗಳ ಕ್ಷೇತ್ರದಿಂದ ವಿಷ್ಣು ಭಟ್ ಬಿ., ಬೆಳ್ತಂಗಡಿ ತಾಲೂಕು ಫ್ಯಾಕ್ಸ್ ಸಹಕಾರ ಸಂಘಗಳ ಕ್ಷೇತ್ರದಿಂದ ಸತೀಶ್ ಕೆ., ಮಂಗಳೂರು ತಾಲೂಕಿನ ಮೂಡುಬಿದಿರೆ- ಮೂಲ್ಕಿ ಫಿರ್ಕಾ ಫ್ಯಾಕ್ಸ್ ಸಹಕಾರ ಸಂಘಗಳ ಕ್ಷೇತ್ರದಿಂದ ಜೊಯ್ಲಸ್ ವಿಲ್ಫ್ರೇಡ್ ಡಿಸೋಜ, ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಸುಧಾಕರ ಪಿ. ಶೆಟ್ಟಿ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಹಕಾರಿ ಕ್ಷೇತ್ರದಿಂದ ಮಂಜುನಾಥ್ ಎನ್. ಎಸ್, ಮಹಿಳಾ ಸಹಕಾರಿ ಸಂಘಗಳ ಕ್ಷೇತ್ರದಿಂದ ಸವಿತಾ ಎನ್. ಶೆಟ್ಟಿ, ಪಟ್ಟಣ ಸಹಕಾರಿ ಬ್ಯಾಂಕ್, ಪತ್ತಿನ ಸಹಕಾರಿ ಸಂಘಗಳ ಕ್ಷೇತ್ರದಿಂದ ಡಾ.ಎಸ್. ಆರ್. ಹರೀಶ್ ಆಚಾರ್ಯ, ಮೀನುಗಾರಿಕಾ ಸಹಕಾರ ಸಂಘಗಳು, ಕೈಗಾರಿಕಾ ಸಹಕಾರ ಸಂಘಗಳ ಕ್ಷೇತ್ರದಿಂದ ಕೆ. ಸಂಜೀವ ಪೂಜಾರಿ, ಜಿಲ್ಲೆಯ ಮಾರಾಟ ಸಹಕಾರಿ ಸಂಘಗಳ, ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಹಕಾರ ಬ್ಯಾಂಕುಗಳ ಕ್ಷೇತ್ರದಿಂದ ಪ್ರವೀಣ್ ಗಿಲ್ಬರ್ಟ್ ಪಿಂಟೊ ಹಾಗೂ ಇತರ ಎಲ್ಲ ಸಹಕಾರ ಸಂಘಗಳ ಕ್ಷೇತ್ರದಿಂದ ಚಿತ್ತರಂಜನ್ ಬೋಳಾರ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಅಧ್ಯಕ್ಷರ ಚುನಾವಣೆಯ ಸಂದರ್ಭ ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್., ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ ಇದ್ದರು. ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ್ ಕುಮಾರ್ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

PREV

Recommended Stories

ಇಂದಿನಿಂದ ಪ್ರೊ ಕಬಡ್ಡಿ ಲೀಗ್‌ ಶುರು : 12ನೇ ಆವೃತ್ತಿ । 12 ತಂಡ, ಒಟ್ಟು 117 ಪಂದ್ಯ
‘ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವವರು ಕಷ್ಟಕ್ಕೆ ಸಿಲುಕ್ತಾರೆ’