ಶಿಫಾ ಜಮಾದಾರಗೆ ಜಿಲ್ಲಾಡಳಿತದಿಂದ ಸನ್ಮಾನ

KannadaprabhaNewsNetwork |  
Published : Oct 10, 2025, 01:02 AM IST
ರಷ್ಯಾ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾಗವಹಿಸಿದ ಶಿಫಾ ಜಮಾದಾರಗೆ ಸನ್ಮಾನ | Kannada Prabha

ಸಾರಾಂಶ

ವಿಜಯಪುರ: ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಎಂಟು ದಿನಗಳ ಕಾಲ ನಡೆದ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತದ ಏಕೈಕ ಯುವ ಪ್ರತಿನಿಧಿಯಾಗಿ ಭಾಗವಹಿಸಿ ವಿಶ್ವ ಶಾಂತಿ ಸಂದೇಶ ಸಾರಿದ ವಿಜಯಪುರದ ಶಿಫಾ ಜಮಾದಾರ ಅವರಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ, ಜಿಲ್ಲಾ ಪಂಚಾಯತಿ ಸಿದೊ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸನ್ಮಾನಿಸಿ ಗೌರವಿಸಿದರು. ಈ ವೇಳೆ ಯುವ ಸಮಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ ಉಪಸ್ಥಿತರಿದ್ದರು.

ಎಸ್ಪಿ ಲಕ್ಷ್ಮಣ ನಿಂಬರಗಿ ಮಾತನಾಡಿ, ವಿಜಯಪುರ ಯುವತಿ ರಷ್ಯಾ ಶೃಂಗ ಸಭೆಯಲ್ಲಿ ಭಾಗವಹಿಸಿ ತಮ್ಮ ವಿಚಾರ ಮಂಡನೆ ಮಾಡಿರುವುದು ಭಾರತೀಯ ಸಂಸ್ಕೃತಿಯ ಧ್ಯೇಯೋದ್ದೇಶಗಳನ್ನು ಸಾರಿರುವುದು ಸಂತೋಷ ತರಿಸಿದೆ. ಇಡೀ ಜಿಲ್ಲೆ ಹೆಮ್ಮೆ ಪಡುವ ಸಾಧನೆ ಇದಾಗಿದೆ ಎಂದು ಹುರಿದುಂಬಿಸಿದರು.

ಸನ್ಮಾನ ಸ್ವೀಕರಿಸಿದ ಶಿಫಾ ಜಮಾದಾರ ಮಾತನಾಡಿ, ಭಗವಂತನ ಅನುಗ್ರಹ, ವಿಜಯಪುರ ಜಿಲ್ಲೆಯ ಜನತೆಯ ಆಶೀರ್ವಾದ ಬಲ, ತಂದೆ-ತಾಯಿ ಪ್ರೋತ್ಸಾಹದಿಂದ ಈ ಅವಕಾಶ ಪ್ರಾಪ್ತಿಯಾಗಿದೆ. ನಿಮ್ಮೆಲ್ಲರ ಮಾರ್ಗದರ್ಶನದಲ್ಲಿ ಜಿಲ್ಲೆಗೆ ಕೀರ್ತಿ ತರುವ ಕೆಲಸ ಮಾಡಲು ಸದಾ ಶ್ರಮಿಸುವೆ. ಈ ದೊಡ್ಡ ಅವಕಾಶ ನನಗೆ ಇನ್ನಷ್ಟು ಉತ್ತಮವಾಗಿ ಕಾರ್ಯನಿರ್ವಹಿಸಲು ಅನುಕೂಲವಾಗಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂದೆ ರೈತ ಎಂದು ಹೇಳಿಕೊಳ್ಳಲು ಮುಜುಗರ ಬೇಡ: ಜಿಲ್ಲಾಧಿಕಾರಿ ಸಂಗಪ್ಪ ಎಂ.
16ರಂದು ಬೆಳಗಾವಿ ಚಲೋಗೆ ಪತ್ರ ಬರಹಗಾರರ ನಿರ್ಣಯ