, ಗಣಿಗಾರಿಕೆ ಚಟುವಟಿಕೆಗಳಿಂದ ಸ್ಥಳೀಯರಿಗೆ ತೊಂದರೆ ಉಂಟಾಗುತ್ತಿದೆ ಎಂಬ ಮನವಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಪರಿಶೀಲನೆಗಾಗಿ ಸಮಿತಿ ರಚಿಸಲಾಗಿದೆ. ಸಮಿತಿ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವವರೆಗೆ ಗಣಿಗಾರಿಕೆಯನ್ನು ನಿಲ್ಲಿಸುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನು ಬಂಟೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆ ಬಗ್ಗೆ ದೂರುಗಳು ಬಂದಿದ್ದು, ಸಂಬಂಧಿಸಿದ ಜಮೀನು ಸರಕಾರಿ ಅಥವಾ ಖಾಸಗಿಯದ್ದೇ ಎಂಬುದನ್ನು ಸರ್ವೆ ಮಾಡಿ ನಂತರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಕನ್ನಡಪ್ರಭ ವಾರ್ತೆ ಹಾಸನಆಲೂರು ತಾಲೂಕಿನ ಹೊಸಮಠ ಗ್ರಾಮ ಸಮೀಪದ ಶಿಲುಬೆ ಬೆಟ್ಟದಲ್ಲಿ ನಡೆಯುತ್ತಿರುವ ಗಣಿಗಾರಿಕೆ ನಿಲ್ಲಿಸಲು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಐದು ದಿನಗಳಿಂದ ರೈತರು ಹಾಗೂ ಗ್ರಾಮಸ್ಥರು ಡಿಸಿ ಕಛೇರಿ ಮುಂದೆ ನಡೆಸುತ್ತಿದ್ದ ಅಹೋರಾತ್ರಿ ಪ್ರತಿಭಟನೆಗೆ ಮಹತ್ವದ ತಿರುವು ಸಿಕ್ಕಿದ್ದು, ಸ್ಥಳ ಪರಿಶೀಲನೆ ಪೂರ್ಣಗೊಳ್ಳುವವರೆಗೆ ಗಣಿಗಾರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇತರೆ ಬೇಡಿಕೆಗಳನ್ನು ೧೫ ದಿನಗಳಲ್ಲಿ ಈಡೇರಿಸುವಂತೆ ಎಡಿಸಿ ಅವರು ನೀಡಿದ ಭರವಸೆ ಮೇರೆಗೆ ಹೋರಾಟವನ್ನು ಸೋಮವಾರ ಸ್ಥಗಿತಗೊಳಿಸಲಾಯಿತು.
ಇದೇ ವೇಳೆ ಅಪರ ಜಿಲ್ಲಾಧಿಕಾರಿ ಜಗದೀಶ್ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಗಣಿಗಾರಿಕೆ ಚಟುವಟಿಕೆಗಳಿಂದ ಸ್ಥಳೀಯರಿಗೆ ತೊಂದರೆ ಉಂಟಾಗುತ್ತಿದೆ ಎಂಬ ಮನವಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಪರಿಶೀಲನೆಗಾಗಿ ಸಮಿತಿ ರಚಿಸಲಾಗಿದೆ. ಸಮಿತಿ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವವರೆಗೆ ಗಣಿಗಾರಿಕೆಯನ್ನು ನಿಲ್ಲಿಸುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನು ಬಂಟೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆ ಬಗ್ಗೆ ದೂರುಗಳು ಬಂದಿದ್ದು, ಸಂಬಂಧಿಸಿದ ಜಮೀನು ಸರಕಾರಿ ಅಥವಾ ಖಾಸಗಿಯದ್ದೇ ಎಂಬುದನ್ನು ಸರ್ವೆ ಮಾಡಿ ನಂತರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದರು. ಹಾಸನ ನಗರದ ರಾಘವೇಂದ್ರ ಕಾಲೋನಿ, ಬೀರನಹಳ್ಳಿ ಕೆರೆ ಪ್ರದೇಶದ ಹಕ್ಕುಪತ್ರ ವಿಚಾರವನ್ನು ಜಿಲ್ಲಾಮಟ್ಟದ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಅಗತ್ಯವಿದ್ದರೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು. ಈ ಎಲ್ಲಾ ವಿಚಾರಗಳನ್ನು ಪ್ರತಿಭಟನಾಕಾರರಿಗೆ ಮನವರಿಕೆ ಮಾಡಿಕೊಡಲಾಗಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಕೈಗೊಂಡ ಕ್ರಮಗಳಿಗೆ ಹೋರಾಟಗಾರರು ತಾತ್ಕಾಲಿಕ ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದರು.ಇದೀಗ ಐದು ದಿನಗಳಿಂದ ಪ್ರತಿಭಟನೆಯಲ್ಲಿ ಭಾಗವಹಿಸಿರುವ ರೈತ ಗಂಗಾಧರ್ ಮಾತನಾಡಿ, ೨೦೦೭ರ ಮೇ ೧೧ರಂದು ಯಾವುದೇ ನೋಟಿಸ್ ನೀಡದೇ ರಾಘವೇಂದ್ರ ಕಾಲೋನಿಯ ಬೀರನಹಳ್ಳಿ ಕೆರೆ ಪ್ರದೇಶದಲ್ಲಿ ೨೫ ವರ್ಷಗಳಿಂದ ವಾಸವಾಗಿದ್ದ ಸುಮಾರು ೭೫ ಕುಟುಂಬಗಳ ಮನೆಗಳನ್ನು ಏಕಾಏಕಿ ತೆರವುಗೊಳಿಸಲಾಗಿತ್ತು ಎಂದು ಆರೋಪಿಸಿದರು. ಅಂದು ನಡೆದ ಘಟನೆ ಯುದ್ಧದಂತಿತ್ತು ಎಂದು ಬೇಸರ ವ್ಯಕ್ತಪಡಿಸಿ, ಪರ್ಯಾಯವಾಗಿ ಕೃಷ್ಣನಗರದಲ್ಲಿ ಮನೆಗಳನ್ನು ನೀಡುವುದಾಗಿ ಹೇಳಿದ್ದರೂ ಇಂದಿಗೂ ನ್ಯಾಯ ಸಿಕ್ಕಿಲ್ಲ ಎಂದು ದೂರಿದರು.ರೈತ ಸಂಘದ ಅಧ್ಯಕ್ಷ ಬಾಬು ಮಾತನಾಡಿ, ಅಧಿಕಾರಿಗಳು ನೀಡಿರುವ ಭರವಸೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಶಿಲುಬೆ ಬೆಟ್ಟ ಗಣಿಗಾರಿಕೆಯನ್ನು ನಿಲ್ಲಿಸಲಾಗಿದೆ. ಬಂಟೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ಕುಡಿಯುವ ನೀರಿನ ಸಮಸ್ಯೆ ಹಾಗೂ ರಾಘವೇಂದ್ರ ಕಾಲೋನಿ ಸಮಸ್ಯೆ ಪರಿಹಾರಕ್ಕೆ ೧೫ ದಿನಗಳ ಕಾಲಾವಕಾಶ ಕೇಳಲಾಗಿದೆ. ಇಷ್ಟು ವರ್ಷಗಳಿಂದ ಕಾಯುತ್ತಿರುವ ನಮಗೆ ಇನ್ನೂ ೧೫ ದಿನ ಕಾಯುವುದು ಕಷ್ಟವಲ್ಲ, ಆದರೆ ಈ ಅವಧಿಯಲ್ಲಿ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.ಈ ವೇಳೆ ರೈತ ಸಂಘದ ರಾಜ್ಯ ಸಂಚಾಲಕ ಮಹಮ್ಮದ್ ಸಾದಿಕ್, ವಿಠಲ್, ವೆಂಕಟೇಶ್, ಸಮಿಉಲ್ಲ, ಅರುಣ ಭಾಸ್ಕರ್, ಪವಿತ್ರ, ರಂಗಮ್ಮ, ಕವಿತ ಸೇರಿದಂತೆ ಹಲವರು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.