ಶಿಕ್ಷಣ ಮತ್ತು ಕ್ರೀಡೆಗೆ ಸಮಾನ ಸ್ಥಾನವಿದೆ : ವಿಷ್ಣುಮೂರ್ತಿ ಭಟ್

KannadaprabhaNewsNetwork |  
Published : Nov 23, 2026, 03:00 AM IST
ಶಿಮಂತೂರು  ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್  ವಾರ್ಷಿಕ ಕ್ರೀಡಾಕೂಟ | Kannada Prabha

ಸಾರಾಂಶ

ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ಜರಗಿದ ವಾರ್ಷಿಕ ಕ್ರೀಡಾಕೂಟ

ಮೂಲ್ಕಿ: ಶಿಕ್ಷಣ ಮತ್ತು ಕ್ರೀಡೆ ಜೀವನದಲ್ಲಿ ಸಮಾನ ಮಹತ್ವವನ್ನು ಹೊಂದಿದ್ದು ,ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಸಾಧನೆಗೆ ಸೀಮಿತವಾಗದೆ, ಕ್ರೀಡೆ, ಕಲೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕೆಂದು ಜ್ಯೋತಿಷಿ ಹಾಗೂ ವೇದ ವಿದ್ವಾಂಸ ವಿಷ್ಣು ಮೂರ್ತಿ ಭಟ್ ಶಿಮಂತೂರು ಹೇಳಿದರು.

ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ಜರಗಿದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಶಿಮಂತೂರು ಶ್ರೀ ಶಾರದಾ ಸೊಸೈಟಿಯ ಅಧ್ಯಕ್ಷ ಡಾ ಧರ್ಮದರ್ಶಿ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿ ಮಾತನಾಡಿ ಗೆದ್ದಾಗ ಅಹಂಕಾರ ಪಡದೆ, ಸೋತಾಗ ನಿರಾಶರಾಗದೆ, ಸೋಲನ್ನು ಮುಂದಿನ ಗೆಲುವಿನ ಮೆಟ್ಟಿಲನ್ನಾಗಿ ಸ್ವೀಕರಿಸಬೇಕೆಂದು ಹೇಳಿದರು. ಧ್ವಜಾರೋಹಣಗ್ಯೆದ ಶರಣ್ಯ ನಿತ್ಯಾನಂದ ಸುವರ್ಣ ಮಾತನಾಡಿ ವಿದ್ಯಾರ್ಥಿಗಳು ಕ್ರೀಡಾಸ್ಫೂರ್ತಿಯಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ, ಶಿಸ್ತು ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕೆಂದು ಹೇಳಿದರು.

ಈ ಸಂದರ್ಭ ಶಿಮಂತೂರು ಶ್ರೀ ಶಾರದಾ ಸೊಸೈಟಿಯ ನಿರ್ದೇಶಕ ಸುರೇಶ್ ರಾವ್ ನೀರಳಿಕೆ, ಶಾಲಾ ಪ್ರಾಚಾರ್ಯ ಜಿತೇಂದ್ರ ವಿ ರಾವ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಹೇಮಲತಾ ದೇವಾಡಿಗ ಉಪಸ್ಥಿತರಿದ್ದರು. ಶಾಲಾ ಸಂಚಾಲಕ ದೇವಪ್ರಸಾದ್ ಪುನರೂರು ಸ್ವಾಗತಿಸಿದರು, ಸಹ ಶಿಕ್ಷಕಿ ಸೌಮ್ಯ ಪ್ರತಿಜ್ಞಾ ವಿಧಿ ಬೋಧಿಸಿದರು, ಹರಿಣಿ ವಂದಿಸಿದರು, ಶರ್ಮಿಳಾ ಹಾಗೂ ದೀಕ್ಷಿತ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬರದಲ್ಲಿ ಆಸರೆಯಾದ ಕಳಸಕೊಪ್ಪ ಕೆರೆ
ಬೆಳಗಾವಿಯಲ್ಲಿ ಮಟಕಾ ದಂಧೆ ಮೇಲೆ ಪೊಲೀಸರ ಸರಣಿ ದಾಳಿ