ಶಿವಮೊಗ್ಗ ಫ್ರೀಡಂಪಾರ್ಕ್‌ಗೆ ಅಲ್ಲಮ ಪ್ರಭು ಹೆಸರು

KannadaprabhaNewsNetwork |  
Published : Jan 19, 2024, 01:46 AM IST
ಪೊಟೋ: 18ಎಸ್‌ಎಂಜಿಕೆಪಿ10: ಮಧು ಬಂಗಾರಪ್ಪ  | Kannada Prabha

ಸಾರಾಂಶ

ಶಿವಮೊಗ್ಗದ 46.32 ಎಕರೆ ವಿಸ್ತೀರ್ಣದ ಜೈಲು ಆವರಣದ ಮೈದಾನಕ್ಕೆ ಅಲ್ಲಮಪ್ರಭು ಹೆಸರು ನಾಮಕರಣ ಮಾಡುವ ಮೂಲಕ ಜಿಲ್ಲೆಯ ಜನತೆಯ ದಶಕಗಳ ಕನಸನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ನನಸು ಮಾಡಿದೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ ವಚನ ಸಾಹಿತ್ಯದ ಮೂಲಕ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾರಿದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಫ್ರೀಡಂ ಪಾರ್ಕಿಗೆ ನಾಮಕಾರಣ ಮಾಡಲು ಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಕ್ಕೆ ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಶಿವಮೊಗ್ಗದ 46.32 ಎಕರೆ ವಿಸ್ತೀರ್ಣದ ಜೈಲು ಆವರಣದ ಮೈದಾನಕ್ಕೆ ಅಲ್ಲಮಪ್ರಭು ಹೆಸರು ನಾಮಕರಣ ಮಾಡುವ ಮೂಲಕ ಜಿಲ್ಲೆಯ ಜನತೆಯ ದಶಕಗಳ ಕನಸನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ನನಸು ಮಾಡಿದೆ. 12ನೇ ಶತಮಾನದಲ್ಲಿ ಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಫ್ರೀಡಂಪಾರ್ಕ್​​ಗೆ ಇಡಬೇಕು ಎಂಬುದು ಜನತೆಯ ಒತ್ತಾಸೆಯಾಗಿತ್ತು. ಜಿಲ್ಲೆಯ ಜನರ ಬೇಡಿಕೆಗೆ ಸ್ಪಂದಿಸಿರುವುದು ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ಪಡೆದುಕೊಳ್ಳುತ್ತದೆ ಎಂಬುದಕ್ಕೆ ಇದು ನಿದರ್ಶನ ಎಂದು ಸಚಿವ ಮಧು ಬಂಗಾರಪ್ಪ ಬಣ್ಣಿಸಿದ್ದಾರೆ.12ನೇ ಶತಮಾನದ ಒಬ್ಬ ಪ್ರಸಿದ್ಧ ಕವಿ, ತತ್ವಜ್ಞಾನಿ ಅಲ್ಲಮಪ್ರಭುಗಳು ಶಿಕಾರಿಪುರದ ಬಳ್ಳಿಗಾವೆಯವರು. ಅವರು ನಮ್ಮ ಶಿವಮೊಗ್ಗ ಜಿಲ್ಲೆಯವರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಹೀಗಾಗಿ ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಅವರ ಹೆಸರಿಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ಅವರಿಗೆ ಮನವಿ ಮಾಡಲಾಗಿತ್ತು. ಇದಕ್ಕಾಗಿ ಇಡೀ ಜಿಲ್ಲೆಯ ಜ‌ನರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸಮ ಸಮಾಜದ ಕಲ್ಪನೆಯ ಜತೆಗೆ ಮಹಿಳೆಯರಿಗೆ ಸಮಾನ ಗೌರವ ಸ್ಥಾನ ಮಾಡಲು ನೀಡಲು ಹೋರಾಟ ನಡೆಸಿದ, ಜಾತಿಯತೆಯ ನಿರ್ಮೂಲನೆಗೆ 12ನೇ ಶತಮಾನದಲ್ಲೇ ಕ್ರಾಂತಿ ಮಾಡಿದ ಮತ್ತು ತಮ್ಮ ವಚನಗಳ ಮೂಲಕ ಜಗತ್ತಿನ ಕಣ್ಣು ತೆರೆಸಿದ ಅಲ್ಲಮಪ್ರಭು ಅವರ ಆದರ್ಶಗಳು ಮುಂದಿನ ಯುವಪೀಳಿಗೆಗೆ ಮಾದರಿಯಾಗಬೇಕು. ಸರ್ಕಾರದ ನಿರ್ಧಾರ ಅತ್ಯಂತ ಸಮಯೋಚಿತವಾಗಿದೆ ಎಂದು ತಿಳಿಸಿದ್ದಾರೆ.ಯುವನಿಧಿ ಕಾರ್‍ಯಕ್ರಮದಲ್ಲಿ ಮನವಿ

ಕಳೆದ ಜ.12 ರಂದು ಶಿವಮೊಗ್ಗದ ಐತಿಹಾಸಿಕ ಫ್ರೀಡಂ ಪಾಕ್೯ನಲ್ಲಿ ನಡೆದ ಯುವನಿಧಿ ಕಾರ್ಯಕ್ರಮದ ವೇಳೆ ಅಲ್ಲಮಪ್ರಭು ಹೆಸರು ನಾಮಕರಣ ಮಾಡುವಂತೆ ವೇದಿಕೆ ಯಲ್ಲಿದ್ದ ಸಿ.ಎಂ ಹಾಗೂ ಡಿಸಿಎಂ ಅವರಿಗೆ ಮಧು ಬಂಗಾರಪ್ಪ ಮನವಿ ಮಾಡಿದ್ದರು. ಇದೇ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಈ ವಿಷಯ ಘೋಷಿಸಿದ್ದರು ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ರೈಲ್ವೆಗೆ ₹7,748 ಕೋಟಿ ‘ದಾಖಲೆ’: ವೈಷ್ಣವ್‌
ಮಂಗನ ಕಾಯಿಲೆಗೆ ಲಸಿಕೆ ರೆಡಿ: ಮಾನವ ಪ್ರಯೋಗ ಆರಂಭ