14ರಂದು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶೀಂಟೂರು ಸ್ಮೃತಿ

KannadaprabhaNewsNetwork | Published : Aug 10, 2024 1:38 AM

ಸಾರಾಂಶ

ಶ್ರೀ ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು ರೂಪಕಲಾ ಕೆ. ಅವರಿಗೆ ‘ಶೀಂಟೂರು ಸನ್ಮಾನ’ ಪ್ರದಾನ ಮಾಡಲಾಗುವುದು.

ಕನ್ನಡಪ್ರಭ ವಾರ್ತೆ ಪುತ್ತೂರು

ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸ್ಥಾಪಕ ಶೀಂಟೂರು ನಾರಾಯಣ ರೈಯವರ ೧೩ನೇ ವರ್ಷದ ಸ್ಥಾಪಕರ ದಿನಾಚರಣೆ ಆ.೧೪ರಂದು ಸವಣೂರು ವಿದ್ಯಾಗಂಗೋತ್ರಿಯ ವಿದ್ಯಾಚೇತನ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಶೀಂಟೂರು ಸ್ಮೃತಿ, ಶಿಷ್ಯ ವೇತನ ವಿತರಣೆ ಹಾಗೂ ಸನ್ಮಾನ ಸಮಾರಂಭ ನಡೆಯಲಿದೆ ಎಂದು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸಹಕಾರಿ ರತ್ನ ಸವಣೂರು ಕೆ.ಸೀತಾರಾಮ ರೈ ತಿಳಿಸಿದ್ದಾರೆ.

ಅವರು ಶುಕ್ರವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಶೀಂಟೂರು ಪ್ರತಿಷ್ಠಾನದ ವತಿಯಿಂದ ನಡೆಯಲಿರುವ ಈ ಕಾರ್ಯಕ್ರಮವನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದಾರೆ. ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಅಧ್ಯಕ್ಷತೆ ವಹಿಸುವರು. ಬಳ್ಳಾರಿ ಕುಮಾರಸ್ವಾಮಿ ಮಿನರಲ್ ಎಕ್ಸ್‌ಪೋರ್ಟ್‌ನ ಮಾಲಕ ಮಲಾರ್‌ಬೀಡು ರವೀಂದ್ರನಾಥ ಆಳ್ವ, ಗುಜರಾತ್‌ನ ಗ್ರೀನ್ ಹೀರೋ ಆಫ್ ಇಂಡಿಯಾದ ಫಾರೆಸ್ಟ್ ಕ್ರಿಯೇಟರ್‌ನ ಸಹ ಸ್ಥಾಪಕ ಡಾ. ಆರ್ ಕೆ. ನಾಯರ್, ದ.ಕ. ಮತ್ತು ಉಡುಪಿ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ನಡುಮನೆ, ಸವಣೂರು ಎಸ್.ಎನ್.ಆರ್. ರೂರಲ್ ಎಜ್ಯುಕೇಶನ್ ಟ್ರಸ್ಟ್‌ನ ವಿಶ್ವಸ್ಥರಾದ ಎನ್. ಸುಂದರ ರೈ ನಡುಮನೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಸಾಪ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು ಶೀಂಟೂರು ಸಂಸ್ಮರಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು ರೂಪಕಲಾ ಕೆ. ಅವರಿಗೆ ‘ಶೀಂಟೂರು ಸನ್ಮಾನ’ ಪ್ರದಾನ ಮಾಡಲಾಗುವುದು. ಇದೇ ಸಂದರ್ಭ ಸೇನೆಗೆ ನೀಡುವ ಗೌರವಾರ್ಥ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಗೌರವಿಸಲಾಗುವುದು ಎಂದರು. ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿಗಳಾದ ಮಹಮ್ಮದ್ ಝಯಾನ್, ಮನ್ವಿತ್ ಎಚ್ ಆಚಾರ್ಯ, ಕೃಪಾಲಿ ಎಸ್.ಡಿ., ಜಶ್ವಿತ್ ಕೆ., ಧನುಷ್ ಎಂ ಎಸ್, ಆಝ್ಮಿಯತ್ ಸಫಾ, ಕೆ. ಯಶಸ್ವಿ ರೈ, ಯಶ್ವಿನಿ ಪಿ.ಆರ್., ಶಿಲ್ಪಾ ಎನ್. ಮತ್ತು ಶೀಲಾ ಕೆ.ಡಿ. ಅವರಿಗೆ ‘ಶೀಂಟೂರು ಶಿಷ್ಯ ವೇತನ’ ನೀಡಿ ಪುರಸ್ಕರಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ನಾರಾಯಣ ಮೂರ್ತಿ ಕೆ., ವಿದ್ಯಾರಶ್ಮಿ ಸ್ವತಂತ್ರ ಪ.ಪೂ. ಕಾಲೇಜಿನ ಪ್ರಾಂಶುಪಾಲ ಸೀತಾರಾಮ ಕೇವಳ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ ಉಪಸ್ಥಿತರಿದ್ದರು.

Share this article