ಶಿರಾದಲ್ಲಿ ಸೆ. ೧೩ರಂದು ಬೃಹತ್ ಲೋಕ ಅದಾಲತ್

KannadaprabhaNewsNetwork |  
Published : Aug 31, 2025, 01:08 AM IST
೩೦ಶಿರಾ೧: ರಾಷ್ಟ್ರೀಯ ಲೋಕ ಅದಾಲತ್ ಪ್ರಯುಕ್ತ ಶಿರಾ ನಗರದ ನ್ಯಾಯಾಲಯದ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಝರೀಫಾ ಬಾನು ಎ.ಆರ್, ಪ್ರಧಾನ ಸಿವಿಲ್ ನ್ಯಾಯಾಧಿಶರಾದ ನರಸಿಂಹಮೂರ್ತಿ, ಅಧಿಕ ಸಿವಿಲ್ ನ್ಯಾಯಾಧೀಶರಾದ ಶರ್ಮಿಳಾ.ಇ.ಜೆ, ತಹಶೀಲ್ದಾರ್ ಆನಂದ ಕುಮಾರ್, ವಕೀಲರ ಸಂಘದ ಅಧ್ಯಕ್ಷ ಎಚ್.ಗುರುಮೂರ್ತಿ ಗೌಡ ಸೇರಿದಂತೆ ಹಲವರು ಹಾಜರಿದ್ದರು. | Kannada Prabha

ಸಾರಾಂಶ

ಸೆ. ೧೩ ರಂದು ರಾಷ್ಟ್ರೀಯ ಲೋಕ್‌ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಅದಾಲತ್‌ನಲ್ಲಿ ಕಕ್ಷಿದಾರರು ರಾಜಿ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಿ

ಕನ್ನಡಪ್ರಭ ವಾರ್ತೆ ಶಿರಾ ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಸೆ. ೧೩ ರಂದು ರಾಷ್ಟ್ರೀಯ ಲೋಕ್‌ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಅದಾಲತ್‌ನಲ್ಲಿ ಕಕ್ಷಿದಾರರು ರಾಜಿ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಝರೀಫಾ ಬಾನು ಎ.ಆರ್ ಅವರು ತಿಳಿಸಿದರು. ಅವರು ನಗರದ ನ್ಯಾಯಾಲಯದ ಆವರಣದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಶಿರಾ ತಾಲೂಕಿನಲ್ಲಿ ಸುಮಾರು ೧೦ ಸಾವಿರ ಪ್ರಕರಣಗಳು ಬಾಕಿ ಇದ್ದು, ಇದರಲ್ಲಿ ಸುಮಾರು ೨ ಸಾವಿರ ಪ್ರಕರಣಗಳು ರಾಜಿ ಸಂಧಾನಕ್ಕೆ ಅರ್ಹವಾಗಿವೆ. ಇದರಲ್ಲಿ ಸುಮಾರು ೧೫೦೦ ಪ್ರಕರಣಗಳನ್ನು ಇತ್ಯರ್ಥಪಡಿಸಬೇಕೆಂದು ಗುರಿ ಹೊಂದಲಾಗಿದೆ. ಆದ್ದರಿಂದ ಎಲ್ಲಾ ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಂಡು ತಮ್ಮ ಸಮಯ ಹಾಗೂ ಹಣವನ್ನು ಉಳಿಸಬಹುದು ಎಂದು ತಿಳಿಸಿದರು. ಪ್ರಧಾನ ಸಿವಿಲ್ ನ್ಯಾಯಾಧಿಶರಾದ ನರಸಿಂಹಮೂರ್ತಿ ಅವರು ಮಾತನಾಡಿ ಸೆ. ೧೩ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಕಕ್ಷಿದಾರರು ಪಾಲ್ಗೊಳ್ಳುವ ಮೂಲಕ ಆದಷ್ಟು ಹೆಚ್ಚಿನ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಿ. ಲೋಕ ಅದಾಲತ್‌ನಲ್ಲಿ ವ್ಯಾಜ್ಯ ಪೂರ್ವ ಪ್ರಕರಣಗಳು, ಹಣ ವಸೂಲಾತಿ ದಾವೆಗಳು, ವಿಭಾಗ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಕ್ರಿಮಿನಲ್ ಪ್ರಕರಣಗಳು ಮತ್ತು ಕಂದಾಯ ಪ್ರಕರಣಗಳು ಇವುಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಈ ಬಗ್ಗೆ ಸಂಬಂಧಪಟ್ಟವರು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದರು. ವಕೀಲರ ಸಂಘದ ಅಧ್ಯಕ್ಷ ಎಚ್.ಗುರುಮೂರ್ತಿ ಗೌಡ ಮಾತನಾಡಿ ಸೆ. ೧೩ ರಂದು ರಾಷ್ಟ್ರೀಯ ಮೆಗಾ ಲೋಕ್‌ ಅದಾಲತ್ ಹಮ್ಮಿಕೊಳ್ಳಲಾಗಿದೆ. ಈ ನಲ್ಲಿ ರೈತರು, ಸಾರ್ವಜನಿಕರು ಸೇರಿದಂತೆ ಸಂಬಂಧಪಟ್ಟವರು ತಮ್ಮ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಶಿರಾ ತಾಲೂಕು ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಭೂಮಿ ಆಸ್ತಿ ಬೆಲೆ ಹೆಚ್ಚಿದೆ. ಆದ್ದರಿಂದ ಸಾರ್ವಜನಿಕರು ತಮ್ಮ ಜಮೀನು, ನಿವೇಶನ ಸೇರಿದಂತೆ ಇತರೆ ವ್ಯಾಜ್ಯಗಳಿದ್ದರೆ ಅದನ್ನು ಕ ಇತ್ಯರ್ಥಪಡಿಸಿಕೊಳ್ಳಿ. ಇದರಿಂದ ಸಮಯ ಹಣ ಉಳಿತಾಯವಾಗುತ್ತದೆ. ಬ್ಯಾಂಕ್‌ನವರು ತಮ್ಮ ಬ್ಯಾಂಕ್‌ನಲ್ಲಿ ಸಾಲ ಪಡೆದ ರೈತರಿಗೆ ಅತಿ ಹೆಚ್ಚಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ ಲೋನ್ ಪಡೆದ ರೈತರಿಗೆ ಸಾಲ ಮರುಪಾವತಿ ಮಾಡಲು ಅನುಕೂಲ ಮಾಡಿಕೊಡಬೇಕು. ಈ ಲೋಕ ಅದಾಲತ್‌ಗೆ ವಕೀಲರು ಎಲ್ಲಾ ರೀತಿಯಲ್ಲಿಯೂ ಸಹಕಾರ ನೀಡಲಿದ್ದೇವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಅಧಿಕ ಸಿವಿಲ್ ನ್ಯಾಯಾಧೀಶರಾದ ಶರ್ಮಿಳಾ.ಇ.ಜೆ, ತಹಶೀಲ್ದಾರ್ ಆನಂದ ಕುಮಾರ್, ವಕೀಲರ ಸಂಘದ ಕಾರ್ಯದರ್ಶಿ ಶ್ರೀನಿವಾಸ್, ಖಜಾಂಚಿ ಹೊನ್ನೇಶ್ ಗೌಡ, ವಕೀಲರಾದ ವಿಶ್ವೇಶ್ವರಯ್ಯ, ಎಂ.ಸಿ.ರವಿ, ಗೋವರ್ಧನ್.ಆರ್, ಎಚ್.ಡಿ.ನಾಗರಾಜು, ರೆಹಮತ್ ಉಲ್ಲಾ, ಜಗದೀಶ್, ಪಿಎಸ್‌ಐ ರೇಣುಕಾ ಯಾದವ್ ಸೇರಿದಂತೆ ವಿವಿಧ ಬ್ಯಾಂಕುಗಳ ಪ್ರತಿನಿಧಿಗಳು, ನಗರಸಭೆ ಅಧಿಕಾರಿಗಳು ಹಾಜರಿದ್ದರು.

PREV

Recommended Stories

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : 3 ಜಿಲ್ಲೆಗಳಿಗೆ 3 ದಿನ ಯೆಲ್ಲೋ, 2 ದಿನ ಆರೆಂಜ್‌ ಅಲರ್ಟ್‌
ಅಲೆಮಾರಿಗಳಿಗೆ 6 ನಿರ್ಣಯ ಜಾರಿ ಮಾಡಿ ವಿಶೇಷ ಪ್ಯಾಕೇಜ್‌ಗೆ ಸಮಾಜ ಆಗ್ರಹ