ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಶಿರಾಡಿ ಗುಡ್ಡ ಕಸಿತ : ಭೂಗರ್ಭ ಶಾಸ್ತ್ರಜ್ಞರ ತಂಡ ಭೇಟಿ

KannadaprabhaNewsNetwork |  
Published : Aug 03, 2024, 12:49 AM ISTUpdated : Aug 03, 2024, 06:22 AM IST
2ಎಚ್ಎಸ್ಎನ್4 : ರಾಷ್ಟ್ರೀಯ ಹೆದ್ದಾರಿ ೭೫ ರಲ್ಲಿ ಭೂಕುಸಿತವಾಗುತ್ತಿರುವ ಪ್ರದೇಶಕ್ಕೆ ಭೇಟಿ ನೀಡಿದ ಉಪವಿಭಾಗಾಧಿಕಾರಿ ಡಾ.ಶೃತಿ ಹಾಗೂ ತಹಸೀಲ್ದಾರ್ ಮೇಘನಾ. | Kannada Prabha

ಸಾರಾಂಶ

ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಶಿರಾಡಿ ಗುಡ್ಡ ಕುಸಿದಿರುವುದು.

 ಸಕಲೇಶಪುರ :   ಪದೇ ಪದೆ ಭೂಕುಸಿತ ಸಂಭವಿಸುತ್ತಿರುವ ತಾಲೂಕಿನ ದೊಡ್ಡತಪ್ಪಲೆ ಹಾಗೂ ಇನ್ನಿತರ ಸ್ಥಳಗಳಿಗೆ ಶುಕ್ರವಾರ ಭೂಗರ್ಭ ಶಾಸ್ತ್ರಜ್ಞರ ತಂಡ ಭೇಟಿ ನೀಡಿತ್ತು. 

ಈ ಸಂದರ್ಭದಲ್ಲಿ ಅಲ್ಲಿನ ಮಣ್ಣು ಮತ್ತು ಕಲ್ಲಿನ ಮಾದರಿಗಳನ್ನು ಸಂಗ್ರಹಿಸಿ ಕೊಂಡೊಯ್ಯಲಾಗಿದೆ. ಅತಿಯಾದ ಮಳೆಯಿಂದಾಗಿ ಭೂಮಿಯ ಪದರಗಳ ಒಳಗೆ ನೀರು ಸೇರಿಕೊಂಡು ಭೂಕುಸಿತ ಆಗುತ್ತಿದೆ. ಹಾಗೆಯೇ ರಸ್ತೆ ಅಗಲೀಕರಣಕ್ಕಾಗಿ ಅವೈಜ್ಞಾನಿಕವಾಗಿ ಗುಡ್ಡಗಳನ್ನು ಯಂತ್ರಗಳಿಂದ ಕತ್ತರಿಸುತ್ತಿರುವುದು ಭೂಕುಸಿತಕ್ಕೆ ಮೇಲ್ನೋಟದ ಕಾರಣಗಳಾಗಿವೆ ಎಂದು ತಂಡ ಅಭಿಪ್ರಾಯಪಟ್ಟಿದೆ.

ಈ ಮಧ್ಯೆ, ತಾಲೂಕಿನಲ್ಲಿ ಜಿಟಿಜಿಟಿ ಮಳೆ ಮುಂದುವರಿದಿದ್ದು, ರಾಷ್ಟ್ರಿಯ ಹೆದ್ದಾರಿ 75ರ ಶಿರಾಡಿಘಾಟ್‌ನಲ್ಲಿ ಮತ್ತಷ್ಟು ಭೂಕುಸಿತ ಸಂಭವಿಸಿದೆ. ಹೆದ್ದಾರಿ 75ರ ದೋಣಿಗಾಲ್ ಗ್ರಾಮದಿಂದ ಮಾರನಹಳ್ಳಿ ಗ್ರಾಮದವರೆಗೆ ಗುರುವಾರ ರಾತ್ರಿ ಮತ್ತಷ್ಟು ಭೂಕುಸಿತ ಸಂಭವಿಸಿದೆ. ಇದರಿಂದಾಗಿ, ಮಂಗಳೂರು-ಬೆಂಗಳೂರು ನಡುವಿನ ಸಂಚಾರ ಬಂದ್‌ ಆಗಿತ್ತು. ಬಳಿಕ, ಮಣ್ಣು ತೆರವುಗೊಳಿಸಲಾಗಿದ್ದು, ಶುಕ್ರವಾರ ಮಧ್ಯಾಹ್ನದಿಂದ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರ ಕ್ಷೇತ್ರಕ್ಕೆ ಆರ್ಥಿಕ ಶಿಸ್ತು ಅಗತ್ಯ
ಅಧಿಕಾರಿಗಳು ಜಾತ್ಯತೀತವಾಗಿ ಕೆಲಸ ಮಾಡಿ : ಸಿಎಂ ಸಿದ್ದರಾಮಯ್ಯ