ಶಿರಗುಪ್ಪಿ ಕಾರ್ಖಾನೆಯಿಂದ ₹4,000 ದರ ಘೋಷಣೆ

KannadaprabhaNewsNetwork |  
Published : Nov 08, 2026, 03:00 AM IST
07 ಚಬನನವ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಕಾಗವಾಡಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿರುವ ಶಿರಗುಪ್ಪಿ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ ಕಾರ್ಖಾನೆಯು 2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ಒಟ್ಟು ₹4,000 ದರ ಘೋಷಿಸುವ ಮೂಲಕ ಕಬ್ಬು ಬೆಳೆಗಾರರಿಗೆ ದೀಪಾವಳಿ ಹಬ್ಬದ ಸಿಹಿ ಸುದ್ದಿ ನೀಡಿದೆ.

ಕನ್ನಡಪ್ರಭ ವಾರ್ತೆ ಕಾಗವಾಡ

ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿರುವ ಶಿರಗುಪ್ಪಿ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ ಕಾರ್ಖಾನೆಯು 2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ಒಟ್ಟು ₹4,000 ದರ ಘೋಷಿಸುವ ಮೂಲಕ ಕಬ್ಬು ಬೆಳೆಗಾರರಿಗೆ ದೀಪಾವಳಿ ಹಬ್ಬದ ಸಿಹಿ ಸುದ್ದಿ ನೀಡಿದೆ. ಕಾರ್ಖಾನೆಯ ಸಂಸ್ಥಾಪಕ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕಲ್ಲಪ್ಪಣ್ಣ ಮಗೆಣ್ಣವರ ಅವರು ಅಧಿಕೃತ ಸುತ್ತೋಲೆ ಹೊರಡಿಸಿ, ಪತ್ರಿಕಾಗೋಷ್ಠಿಯಲ್ಲಿ ದರ ಘೋಷಿಸಿದರು. ಪ್ರಸಕ್ತ ಸಾಲಿನಲ್ಲಿ ಅತ್ಯಲ್ಪ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಬ್ಬಿನ ಬೆಳೆ ಪರಿಸ್ಥಿತಿ ಹಾಗೂ ಇಳುವರಿಯನ್ನು ಪರಿಶೀಲಿಸಿ, ಆಡಳಿತ ಮಂಡಳಿಯು ಕಂತುಗಳಲ್ಲಿ ದರ ಪಾವತಿಸಲು ನಿರ್ಧರಿಸಿದೆ ಎಂದು ಅವರು ತಿಳಿಸಿದರು.

ಪ್ರಸಕ್ತ ಹಂಗಾಮಿನಲ್ಲಿ ಕಾರ್ಖಾನೆಗೆ ಕಬ್ಬು ಪೂರೈಸುವ ರೈತರಿಗೆ ಮೊದಲ ಕಂತಾಗಿ ಪ್ರತಿ ಮೆಟ್ರಿಕ್ ಟನ್‌ಗೆ ₹3,700 ಪಾವತಿಸಲಾಗುವುದು. ಹಂಗಾಮು ಮುಕ್ತಾಯದ ಬಳಿಕ ಎರಡನೇ ಕಂತಿನಲ್ಲಿ ₹100 ಹಾಗೂ ಮುಂದಿನ ಹಂಗಾಮು ಆರಂಭಕ್ಕೂ ಮುನ್ನ ಸಕ್ಕರೆ ಮಾರಾಟ ದರ ₹50 ತಲುಪಿದಲ್ಲಿ ಮೂರನೇ ಕಂತಿನಲ್ಲಿ ₹200 ಪಾವತಿಸಲಾಗುವುದು. ಈ ಮೂಲಕ ಒಟ್ಟು ₹4,000 ದರ ನೀಡಲಾಗುವುದು ಎಂದು ಮಗೆಣ್ಣವರ ವಿವರಿಸಿದರು.

ಕ್ಷೇತ್ರದ ಎಲ್ಲ ಕಬ್ಬು ಬೆಳೆಗಾರರು ತಮ್ಮ ಜಮೀನಿನಲ್ಲಿ ಬೆಳೆದ ಕಬ್ಬನ್ನು ಗರಿಷ್ಠ ಪ್ರಮಾಣದಲ್ಲಿ ಶಿರಗುಪ್ಪಿ ಸಕ್ಕರೆ ಕಾರ್ಖಾನೆಗೆ ಪೂರೈಸಿ, ಹಂಗಾಮು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದು ಆಡಳಿತ ಮಂಡಳಿಯ ಪರವಾಗಿ ಅವರು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಎಲ್ಲ ರೈತರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕವಿ ಹೃದಯದ ಡಾ.ಚೆನ್ನಬಸವ ಶ್ರೀಗಳು: ತೋಂಟದಾರ್ಯ ಶ್ರೀ
ವಿದ್ಯುತ್ ಗುತ್ತಿಗೆದಾರರ ಧರಣಿ ಆರನೇ ದಿನಕ್ಕೆ