ಶಿರ್ವ - ಎಂಎಸ್‌ಆರ್‌ಎಸ್‌ ಕಾಲೇಜಿನಲ್ಲಿ ಆಟಿಡೊಂಜಿ ದಿನ ಆಚರಣೆ

KannadaprabhaNewsNetwork |  
Published : Aug 19, 2026, 02:30 AM IST
18ಎಂಎಸ್‌ಆರ್‌ಎಸ್‌ | Kannada Prabha

ಸಾರಾಂಶ

ಇಲ್ಲಿನ ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನ ವಿದ್ಯಾರ್ಥಿ ಸಂಘದ ವತಿಯಿಂದ ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಹಾಗೂ ಆಚಾರ-ವಿಚಾರಗಳನ್ನು ಪರಿಚಯಿಸುವ ಉದ್ದೇಶದಿಂದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಕಾಪು: ಇಲ್ಲಿನ ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನ ವಿದ್ಯಾರ್ಥಿ ಸಂಘದ ವತಿಯಿಂದ ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಹಾಗೂ ಆಚಾರ-ವಿಚಾರಗಳನ್ನು ಪರಿಚಯಿಸುವ ಉದ್ದೇಶದಿಂದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ತಯಾರಿಸಿ ತಂದ ವಿವಿಧ ಸಾಂಪ್ರದಾಯಿಕ ಆಟಿ ತಿಂಡಿ ಹಾಗೂ ಆಹಾರ ಪದಾರ್ಥಗಳನ್ನು ಪ್ರದರ್ಶಿಸಿ, ಎಲ್ಲರೊಂದಿಗೆ ಹಂಚಿಕೊಂಡರು. ವಿದ್ಯಾರ್ಥಿಗಳೇ ಸಿದ್ಧಪಡಿಸಿದ ಸಾಂಪ್ರದಾಯಿಕ ಆಟಿ ಊಟವು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು.

ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದ, ಕಾಲೇಜಿನ ಹಳೆ ವಿದ್ಯಾರ್ಥಿನಿ ಅನಿಷಾ ಭಂಡಾರಿ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ನಾಡು, ನುಡಿ ಮತ್ತು ಸಂಸ್ಕೃತಿಯ ಬಗ್ಗೆ ಅಭಿಮಾನ ಮೂಡಿಸುತ್ತದೆ ಎಂದರು. ಅಧ್ಯಕ್ಷೀಯ ಮಾತುಗಳನ್ನಾಡಿದ ಪ್ರಾಂಶುಪಾಲರಾದ ಡಾ. ಮಿಥುನ್ ಚಕ್ರವರ್ತಿ ಅವರು, ಆಧುನಿಕ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ತಮ್ಮ ಸ್ಥಳೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂದರು.

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿದ್ಯಾರ್ಥಿ ಕ್ಷೇಮಾಧಿಕಾರಿ ಹೇಮಲತಾ ಶೆಟ್ಟಿ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಸನ್ನಿಧಿ ವಂದಿಸಿದರು. ಪ್ರಥಮ ಬಿ. ಕಾಂ ವಿದ್ಯಾರ್ಥಿನಿ, ಅನನ್ಯ ಎಸ್. ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸದ್ಭಾವನಾ ವೇದಿಕೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ
ನಿರಂತರ ಶ್ರಮದಿಂದ ಯಶಸ್ಸು: ಸಿಎ ರಾಘವೇಂದ್ರ ಶೆಟ್ಟಿ