ಕನ್ನಡಪ್ರಭ ವಾರ್ತೆ ಮೈಸೂರು
ಸೋಮವಾರ ಶ್ರೀರಾಂಪುರದ ಶಿವಭವನದಲ್ಲಿ ಜರುಗಿದ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಮಾನವ ಜೀವನದಲ್ಲಿ ಧರ್ಮ, ಅರ್ಥ, ಕಾಮ, ಮೋಕ್ಷಾ ಎಂಬ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದನ್ನಾದರೂ ಸಂಪಾದಿಸಿಕೊಳ್ಳದಿದ್ದರೆ ಮಾನವ ಜೀವನ ವ್ಯರ್ಥವಾಗುತ್ತದೆ. ಸುಖದ ಮೂಲ ಧರ್ಮದ ಆಚರಣೆಯಲ್ಲಿದೆ. ಅರಿತು ಆಚರಿಸಿ ಬಾಳುವುದೇ ನಿಜವಾದ ಧರ್ಮ ಎಂಬುದು ಅಶ್ವತವೃಕ್ಷ ಇದ್ದಂತೆ ಆ ವೃಕ್ಷದ ನೆರಳಿನಲ್ಲಿ ಸಕಲ ಜೀವರಾಶಿಗಳು ಬಾಳಿ ಬದುಕಿಸುವ ಶಕ್ತಿ ಇದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ಅಹಿಂಸಾದಿ ಧ್ಯಾನ ಪರ್ಯತರವಾದ ದಶಧರ್ಮ ಸೂತ್ರಗಳನ್ನು ಬೋಧಿಸಿ ಸಕಲರನ್ನು ಉದ್ದರಿಸಿದ್ದಾರೆ ಎಂದರು.ಇಷ್ಟಲಿಂಗಾರ್ಚನೆಯಿಂದ ಸಂಕಷ್ಟಗಳು ದೂರವಾಗಿ ಇಷ್ಟಾರ್ಥ ಫಲಗಳು ಪ್ರಾಪ್ತವಾಗುತ್ತವೆ. ಶಿವನನ್ನು ಪೂಜಿಸಿದರೆ ಸಕಲ ದೇವಾನುದೇವತೆಗಳನ್ನು ಪೂಜಿಸಿದ ಪುಣ್ಯ ಫಲ ಪ್ರಾಪ್ತವಾಗುತ್ತದೆ. ವೈಚಾರಿಕತೆ ಹೆಸರಿನಲ್ಲಿ ಭಾರತೀಯ ಉತ್ಕೃಷ್ಟ ಸಂಸ್ಕೃತಿ ನಾಶಗೊಳ್ಳಬಾರದು. ಸತ್ಯ ಧರ್ಮದ ತಳಹದಿಯ ಮೇಲೆ ಮಾನವ ಜೀವನ ರೂಪಿತಗೊಂಡಾಗ ಬದುಕು ಸಮೃದ್ಧಗೊಳ್ಳುತ್ತದೆ. ಮೈಸೂರು ನಗರದಲ್ಲಿ ಇಷ್ಟಲಿಂಗ ಮಹಾಪೂಜೆ ಹಮ್ಮಿಕೊಂಡಿರುವುದು ಸಕಲ ಭಕ್ತರಿಗೆ ಹರುಷವನ್ನು ಉಂಟುಮಾಡಿದೆ. ಪ್ರತಿವರ್ಷ ಇಂಥ ಕಾರ್ಯಕ್ರಮಗಳು ಜರುಗಿದರೆ ಯುವ ಜನಾಂಗಕ್ಕೆ ಅರಿವು ಉಂಟಾಗಿ ಸನ್ಮಾರ್ಗದಲ್ಲಿ ನಡೆಯಲು ಸಹಕಾರವಾಗುವುದರಲ್ಲಿ ಯಾವುದೇ ಸಂದೇಹ ಇಲ್ಲ ಎಂದರು.
ಅರಮನೆ ಜಪದಕಟ್ಟೆ ಮಠದ ಡಾ ಮುಮ್ಮಡಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಂಪಸಾಗರ ನವಲಿ ಹಿರೇಮಠದ ಶ್ರೀ ಶಿವಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ವಿರೂಪಾಕ್ಷ, ಟಿ.ಟಿ. ಮಹೇಶ್, ಪ್ರಸನ್ನ ಕುಮಾರ್, ಆದಪ್ಪ ಶೆಟ್ಟರು, ಎನ್.ಜಿ. ಗಿರೀಶ, ವೀರೇಶ, ಖಂಡೇಶ್, ಅಶೋಕ ಹಾಗೂ ಕುಮಾರಸ್ವಾಮಿ ಇದ್ದರು.
ಸಮಾರಂಭಕ್ಕೂ ಮುನ್ನ ಶಿವಭವನದಲ್ಲಿ ಶ್ರೀಗಳು ಇಷ್ಟಲಿಂಗ ಮಹಾಪೂಜೆ ನೆರವೇರಿಸಿದರು. ಬಳಿಕ ಭಕ್ತರಿಗೆ ಅನ್ನದಾಸೋಹಯನ್ನು ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಸಮಿತಿಯವರು ಆಯೋಜಿಸಿದ್ದರು.