ನಂಜುಂಡೇಶ್ವರ ದೇವಾಲಯದಲ್ಲಿ ಶಿವದೀಪೋತ್ಸವ

KannadaprabhaNewsNetwork |  
Published : Dec 04, 2025, 01:30 AM IST
3ಎಚ್ಎಸ್ಎನ್6 : ಬೇಲೂರಿನಲ್ಲಿ  ಶಿವದೀಪೋತ್ಸವ ಅಂಗವಾಗಿ  ನಂಜುಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ – ಭಜನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. | Kannada Prabha

ಸಾರಾಂಶ

ಮಹಾನ್ಯಾಸ ಪೂರ್ವಕ ಏಕಾದಶವಾರ ರುದ್ರಾಭಿಷೇಕ ನೆರವೇರಿತು. ನವಗ್ರಹ ರುದ್ರ ಹೋಮ ನಡೆಯಿತು. ಪೂರ್ಣಾಹುತಿ, ಮಹಾ ಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮಗಳು ನಡೆದವು. ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ವಿಜಯಕೇಶವ ಮಾತನಾಡಿ, ಶ್ರೀ ನಂಜುಂಡೇಶ್ವರ ಸ್ವಾಮಿಯ ಅನಂತ ಕೃಪೆಯಿಂದ ಒಂದು ಭಕ್ತಿಮಹೋತ್ಸವಕ್ಕೆ ಸಾಕ್ಷಿಯಾಗಿದೆ. ಭಕ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿರುವುದು ಸಂತೋಷದ ಸಂಗತಿ. ಧರ್ಮ–ಸಂಸ್ಕೃತಿ–ಪರಂಪರೆಯನ್ನು ಉಳಿಸುವ ದಾರಿಯಲ್ಲಿ ಇಂತಹ ಕಾರ್ಯಕ್ರಮಗಳು ಜನರಲ್ಲಿ ಭಕ್ತಿ ಹಾಗೂ ಒಗ್ಗಟ್ಟನ್ನು ಹೆಚ್ಚಿಸುತ್ತದೆ ಎಂದರು.

ಬೇಲೂರು: ಶಿವದೀಪೋತ್ಸವದ ಅಂಗವಾಗಿ ನಂಜುಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಭಜನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗಿನ ಜಾವದಿಂದಲೇ ದೇವಾಲಯದ ಭಕ್ತರು ಶ್ರದ್ಧಾ ಭಕ್ತಿಯಿಂದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.

ಮುಂಜಾನೆ ಮಹಾನ್ಯಾಸ ಪೂರ್ವಕ ಏಕಾದಶವಾರ ರುದ್ರಾಭಿಷೇಕ ನೆರವೇರಿತು. ನವಗ್ರಹ ರುದ್ರ ಹೋಮ ನಡೆಯಿತು. ಪೂರ್ಣಾಹುತಿ, ಮಹಾ ಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮಗಳು ನಡೆದವು. ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ವಿಜಯಕೇಶವ ಮಾತನಾಡಿ, ಶ್ರೀ ನಂಜುಂಡೇಶ್ವರ ಸ್ವಾಮಿಯ ಅನಂತ ಕೃಪೆಯಿಂದ ಒಂದು ಭಕ್ತಿಮಹೋತ್ಸವಕ್ಕೆ ಸಾಕ್ಷಿಯಾಗಿದೆ. ಭಕ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿರುವುದು ಸಂತೋಷದ ಸಂಗತಿ. ಧರ್ಮ–ಸಂಸ್ಕೃತಿ–ಪರಂಪರೆಯನ್ನು ಉಳಿಸುವ ದಾರಿಯಲ್ಲಿ ಇಂತಹ ಕಾರ್ಯಕ್ರಮಗಳು ಜನರಲ್ಲಿ ಭಕ್ತಿ ಹಾಗೂ ಒಗ್ಗಟ್ಟನ್ನು ಹೆಚ್ಚಿಸುತ್ತದೆ ಎಂದರು.

ಸಂಜೆ ಕಾರ್ಯ ಕ್ರಮದಲ್ಲಿ ಸಕಿ ಸಮೂಹ ಸಂಸ್ಥೆ ಭಕ್ತಿಗೀತೆಗಳು, ದೇವರ ನಾಮಸ್ಮರಣೆ ಹಾಗೂ ಭಜನೆ ಕಾರ್ಯಕ್ರಮಗಳನ್ನು ನಡೆಯಲಿದೆ. ಭಕ್ತರು ಅತಿ ಹೆಚ್ಚಿನ ರೀತಿಯಲ್ಲಿ ಬಂದು ಕಾರ್ಯಕ್ರಮ ಯಶಸ್ವಿಗೊಳಿಸಿ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬ್ಯಾಲೆಟ್‌ನಲ್ಲಿ ಮತದಾನ ನಡೆಸಿದರೆ ತಪ್ಪೇನು? ರಾಜ್ಯ ಚುನಾವಣಾ ಆಯುಕ್ತ
ಜಾಗತಿಕ ಸವಾಲಿಗೆ ನವೋದ್ಯಮ ಉತ್ತರ : ರಾಧಾಕೃಷ್ಣನ್‌