ಶಿವಾಜಿ ಧೈರ್ಯ, ಶೌರ್ಯ, ಸಾಹಸ ಮೈಗೂಡಿಸಿಕೊಳ್ಳಿ

KannadaprabhaNewsNetwork |  
Published : Feb 20, 2026, 03:15 AM IST
ಜಿಲ್ಲಾಡಳಿತದಿಂದ ಶಿವಾಜಿ ಜಯಂತಿ | Kannada Prabha

ಸಾರಾಂಶ

ಶಿವಾಜಿ ಮಹಾರಾಜರ ಧೈರ್ಯ, ಶೌರ್ಯ ಹಾಗೂ ಪರಾಕ್ರಮ, ಸಾಹಸಗಳನ್ನು ಇಂದಿನ ಯುವಕರು ಮೈಗೂಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಶಿವಾಜಿ ಮಹಾರಾಜರ ಧೈರ್ಯ, ಶೌರ್ಯ ಹಾಗೂ ಪರಾಕ್ರಮ, ಸಾಹಸಗಳನ್ನು ಇಂದಿನ ಯುವಕರು ಮೈಗೂಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಹೇಳಿದರು.

ನಗರದ ಕಂದಗಲ್ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿವಾಜಿ ಸ್ವರಾಜ ಪಡೆಯುತ್ತೇವೆ ಎಂಬದನ್ನು ಪ್ರತಿಪಾದಿಸಿದ್ದರು. ಶತ್ರುಗಳು ಎಷ್ಟೆ ಬಲಿಷ್ಟವಾಗಿದ್ದರು ಅವರನ್ನು ಎದೆಗುಂದದೆ ಎದುರಿಸಿ ಗೆಲ್ಲುವ ಶಕ್ತಿ ನಮ್ಮಲ್ಲಿ ಇರಬೇಕು. ಸಾರ್ವಜನಿಕರ ಬೆಳವಣಿಗೆಯೆ ನಮ್ಮ ರಾಜ ಧರ್ಮ ಎಂದು ತಿಳಿಸಿದವರು, ಅದರೊಂದಿಗೆ, ಮಹಿಳೆಯರಿಗೆ ಅಪಾರವಾದ ಗೌರವದಿಂದ ಕಾಣುತ್ತಿದ್ದ ಅವರು ನಮ್ಮ ದೇಶಕ್ಕೆ ನಿಜವಾದ ಸ್ವರಾಜ್ಯವನ್ನು ತಂದುಕೊಟ್ಟು ದೇಶದ ಸ್ವಾಂತತ್ರ ಅಡಿಪಾಯ ಹಾಕಿಕೊಟ್ಟ ಅವರ ಸಾಹಸಗಾಥೆ ಎಲ್ಲರೂ ಸ್ಮರಿಸಬೇಕು ಹಾಗೂ ಅವರು ಈ ದೇಶಕ್ಕೆ ನೀಡಿದ ಅಪಾರ ಕೊಡುಗೆಗಳನ್ನು ಇಂದಿನ ಯುವಕರಿಗೆ ತಿಳಿಹೇಳಬೇಕು ಎಂದು ಹೇಳಿದರು.

ವ್ಹಿ.ಬಿ ದರಬಾರ ಪದವಿ ಮಹಾವಿದ್ಯಾಲಯದ ಉಪನ್ಯಾಸಕ ಕಾಶಿನಾಥ ಕೋಣೇನವರ ಕಾರ್ಯಕ್ರಮದ ಉಪನ್ಯಾಸ ನೀಡಿ, ಶಿವಾಜಿ ಅವರಿಗೆ ಪೂರ್ಣಪ್ರಮಾಣದ ಯುದ್ಧ ಕೌಶಲವನ್ನು ಧಾರೆ ಎರೆದವರು ದಾದಾಜಿ ಕೊಂಡದೇವ. ಕತ್ತಿವರಸೆ, ಕುದುರೆ ಸವಾರಿ, ಯುದ್ಧಕಲೆಗಳನ್ನು ಕರಗತ ಮಾಡಿಕೊಂಡ ಶಿವಾಜಿ ತನ್ನ 17ನೇ ವಯಸ್ಸಿಗೆ ತೋರಣದುರ್ಗ ವಶಪಡಿಸಿಕೊಂಡು ಮಹತ್ವಾಕಾಂಕ್ಷೆಯ ಹೆಜ್ಜೆಗಳನ್ನು ಇಡಲು ಆರಂಭಿಸಿದ್ದರು. ಎಳೆಯ ವಯಸ್ಸಿನಿಂದಲೇ ತಾಯಿ ಜೀಜಾಬಾಯಿ ಅವರಿಂದ ಜೀವನ ಮೌಲ್ಯಗಳ ಶಿಕ್ಷಣ ಪಡೆದಿದ್ದ ಶಿವಾಜಿ ಸಂತ ರಾಮದಾಸರ ಪರಮಭಕ್ತರಾಗಿದ್ದರು ಎಂದರು.

ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ ಮಾತನಾಡಿದರು. ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿದೇಶಕರಾದ ಸಂತೋಷ ಬೋವಿ ಸ್ವಗತಿಸಿದರು.

ಮೆರವಣಿಗೆ:

ಕಾರ್ಯಕ್ರಮಕ್ಕೂ ಮುಂಚೆ ಗುರುವಾರ ಬೆಳಗ್ಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಮಹಾನಗರ ಪಾಲಿಕೆ ಮಹಾ ಪೌರರಾದ ಸಿದ್ರಾಮಪ್ಪ ಕರಡಿ ಅವರು ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮಣ ನಿಂಬರಗಿ, ಮಹಾನಗರ ಪಾಲಿಕೆ ಸದಸ್ಯ ರಾಹುಲ ಜಾಧವ, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಅಡಿವೆಪ್ಪ ಸಾಲಗಲ್ಲ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿವೇಶನ ರಹಿತರಿಗೆ ಸರ್ಕಾರದಿಂದ ಸೈಟ್‌
ಕರ್ಕಶ ಸೌಂಡ್‌ ಸಿಸ್ಟಮ್‌ಗಳ ಮೇಲೆ ಖಾಕಿ ಕಣ್ಣು