ಕನ್ನಡಪ್ರಭ ವಾರ್ತೆ ತುಮಕೂರು
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ಮರಾಠ ಕ್ಷತ್ರಿಯ ಪರಿಷತ್ ಹಾಗೂ ಕರ್ನಾಟಕ ಮರಾಠ ಕ್ಷತ್ರಿಯ ಪರಿಷತ್ತಿನ ಸಹಯೋಗದಲ್ಲಿ ಬುಧವಾರ ನಗರದ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ‘ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿವಾಜಿಯವರಲ್ಲಿದ್ದ ದೇಶಭಕ್ತಿ, ಆತ್ಮಗೌರವವನ್ನು ಈಗಿನ ಯುವಕರು ಅಳವಡಿಸಿಕೊಳ್ಳಬೇಕು. ಮರಾಠ ಸಮುದಾಯದ ಯುವಕರು ಸರ್ಕಾರಿ ಸೌಲಭ್ಯಗಳನ್ನು ಬಳಸಿಕೊಂಡು ವಿದ್ಯಾವಂತರಾಗಿ, ಭವಿಷ್ಯವನ್ನು ಉತ್ತಮವಾಗಿಸಿಕೊಳ್ಳಬೇಕೆಂದು ತಿಳಿಸಿದರು.ಜಿಲ್ಲಾ ಮರಾಠ ಕ್ಷತ್ರಿಯ ಪರಿಷತ್ತಿನ ಗೌರವಾಧ್ಯಕ್ಷ ನಾಗೇಶ್‌ರಾವ್ ಗಾಯಕ್ವಾಡ್ ಮಾತನಾಡಿ, ಭಾರತೀಯ ಇತಿಹಾಸದಲ್ಲಿ ಅನನ್ಯ ವ್ಯಕ್ತಿತ್ವವನ್ನು ಹೊಂದಿದ್ದ ಮಹಾನ್ ಶಕ್ತಿಶಾಲಿ ಆಡಳಿತಗಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ನಾವಿಂದು ಗೌರವಯುತವಾಗಿ ಆಚರಿಸುತ್ತಿದ್ದೇವೆ. ಈ ಸಂದರ್ಭದಲ್ಲಿ ಅವರ ಜೀವನ ಮತ್ತು ಆದರ್ಶಗಳನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ. ತಾಯಿ ಜೀಜಾಬಾಯಿಯವರ ಪ್ರಭಾವದಿಂದ ಶಿವಾಜಿ ಅವರು ಧರ್ಮನಿಷ್ಠ, ಧೈರ್ಯಶಾಲಿ ಮತ್ತು ಪ್ರಜಾಪಾಲಕನಾಗಿ ಬೆಳೆಯಲು ಕಾರಣವಾಯಿತು ಎಂದರು.
ತಹಸೀಲ್ದಾರ್ ರಾಜೇಶ್ವರಿ ಮಾತನಾಡಿ, ಶಿವಾಜಿ ಮಹಾರಾಜರು ನಮ್ಮೆಲ್ಲರಿಗೂ ಪ್ರೇರಣೆಯಾಗಿದ್ದಾರೆ. ಒಬ್ಬ ವ್ಯಕ್ತಿ ಎಷ್ಟು ಜೀವಿಸಬೇಕು ಎನ್ನುವುದಕ್ಕಿಂತ ಹೇಗೆ ಜೀವಿಸಬೇಕು. ನಮ್ಮ ಸಂಸ್ಕೃತಿಯನ್ನು ಹೇಗೆ ಕಾಪಾಡಿಕೊಳ್ಳಬೇಕು ಎನ್ನುವುದು ಶಿವಾಜಿಯವರ ಆದರ್ಶಗಳಿಂದ ಕಲಿಯಬೇಕು ಎಂದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸುರೇಶ್ ಕುಮಾರ್, ಜಿಲ್ಲಾ ಮರಾಠ ಕ್ಷತ್ರಿಯ ಪರಿಷತ್ತಿನ ಅಧ್ಯಕ್ಷ ಜನಾರ್ದನ್‌ರಾವ್ ಸೋನಾಲೆ, ಕಾರ್ಯದರ್ಶಿಗಳಾದ ಶ್ರೀನಿವಾಸ್‌ರಾವ್ ಸಾಳಂಕೆ ಹಾಗೂ ಗಂಗೋಜಿರಾವ್, ಸಹಕಾರ್ಯದರ್ಶಿ ರಮೇಶ್ ಶಿಂಧೆ, ನಿರ್ದೇಶಕರಾದ ರಾಮಕೃಷ್ಣರಾವ್ ಕರಾಂಡೆ, ಹರ್ಷ ಕದಂ, ಮುರಳೀಧರ, ಲೋಕೇಶ್ ಸಾವಂತ್, ಪಾಂಡುರಾವ್, ಗಣೇಶ್‌ರಾವ್ ಬೋಂಸ್ಲೆ, ಮೋಹನ್‌ರಾವ್, ರವಿನಾಥ್, ಶ್ರೀನಿವಾಸ್‌ರಾವ್ ಜಾಧವ್ ಸೇರಿದಂತೆ ಇನ್ನಿತರರು ಹಾಜರಿದ್ದರು.