ಕುವೆಂಪು ಕನ್ನಡ ಸಂಘದಿಂದ ಶಿವಾಜಿ ಮಹಾರಾಜರ 395ನೇ ಜಯಂತಿಯಲ್ಲಿ ಸತೀಶ ಪೂಜಾರಿ ಸಲಹೆ । ಶಿವಾಜಿ ಪುತ್ಥಳಿಗೆ ಪುಷ್ಪಾರ್ಚನೆ
----ಕನ್ನಡಪ್ರಭ ವಾರ್ತೆ ದಾವಣಗೆರೆ
ಛತ್ರಪತಿ ಶಿವಾಜಿ ಮಹಾರಾಜರು, ಸಾಂಬಾಜಿ ಮಹಾರಾಜರ ನೈಜ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಮೂಲಕ ಮಹಾನ್ ದೇಶಪ್ರೇಮಿಗಳು, ಹೋರಾಟಗಾರರ ಕೆಚ್ಚೆದೆಯನ್ನು ಮಕ್ಕಳಲ್ಲಿ ಮೂಡಿಸಬೇಕು ಎಂದು ಹಿಂದು ಜಾಗರಣಾ ವೇದಿಕೆಯ ಯುವ ಮುಖಂಡ ಸತೀಶ ಪೂಜಾರಿ ಕರೆ ನೀಡಿದರು.ಕೆಟಿಜೆ ನಗರ 12ನೇ ಕ್ರಾಸ್‌ನ ಹಳೆ ಜಿಲ್ಲಾ ಖಜಾನೆ ಪಕ್ಕ ಕುವೆಂಪು ಕನ್ನಡ ಯುವಕರ ಸಂಘ ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ 395ನೇ ಜಯಂತ್ಯೋತ್ಸವ ಅಂಗವಾಗಿ ರಕ್ತದಾನ ಶಿಬಿರದಲ್ಲಿ ಛತ್ರವತಿ ಶಿವಾಜಿ ಮಹಾರಾಜರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ಹಿಂದು ಧರ್ಮದ ರಕ್ಷಣೆ, ಹಿಂದುಗಳು, ಗೋವುಗಳು, ಹಿಂದುತ್ವದ ರಕ್ಷಣೆಗಾಗಿ ಸಮಸ್ತ ಹಿಂದು ಸಮಾಜ ಒಗ್ಗೂಡಿಸಿದ ಶ್ರೇಷ್ಠತೆ ಛತ್ರಪತಿ ಶಿವಾಜಿ ಮಹಾರಾಜರಿಗೆ ಸಲ್ಲುತ್ತದೆ ಎಂದರು.
ವಿಶ್ವವೇ ಮೆಚ್ಚುವಂತಹ ಅಪ್ರತಿಮ ಹೋರಾಟಗಾರರಾದ ಶಿವಾಜಿ ಮತ್ತು ಸಾಂಬಾಜಿ ಮಹಾರಾಜರ ಕೊಡುಗೆ, ತ್ಯಾಗ, ಬಲಿದಾನ ನಾವ್ಯಾರೂ ಮರೆಯಬಾರದು. ಶಿವಾಜಿ ಮಹಾರಾಜರು ತಮ್ಮ ತಾಯಿಯಿಂದ ದೇಶಾಭಿಮಾನಿ, ಧರ್ಮನಿಷ್ಟೆಯನ್ನು ಮೈಗೂಡಿಸಿಕೊಂಡವರು. ಪರಸ್ತ್ರೀಯರನ್ನು ತಾಯಿಯಂತೆ ಗೌರವಿಸುತ್ತಿದ್ದವರು ಎಂದು ಅವರು ತಿಳಿಸಿದರು.ಛತ್ರಪತಿ ಕುಟುಂಬಕ್ಕೆ, ಕರ್ನಾಟಕಕ್ಕೂ ಅವಿನಾಭಾವ ಸಂಬಂಧವಿದೆ. ಶಿವಾಜಿಯವರ ತಂದೆ ಷಹಾಜಿ ರಾಜೇಯವರ ಸಮಾಧಿ ದಾವಣಗೆರೆ ಜಿಲ್ಲೆ ಚನ್ನಗಿರಿ ತಾ. ಹೊದಿಗೆರೆ ಗ್ರಾಮದಲ್ಲಿದೆ. ಮಹಾರಾಷ್ಟ್ರದ ಮನೆ ಮಾತಾದ ಶಿವಾಜಿ-ಸಾಂಬಾಜಿ ಮಹಾರಾಜರ ಹಿರಿಯರ ಸಮಾಧಿ ಜಿಲ್ಲೆಯಲ್ಲಿರುವುದು ಅಭಿಮಾನದ ಸಂಗತಿ. ಇಂತಹ ವಿಷಯಗಳನ್ನು ಯುವ ಪೀಳಿಗೆಗೆ ತಿಳಿಸುವ ಕೆಲಸ ಆಗಬೇಕು ಎಂದು ಸತೀಶ ಪೂಜಾರಿ ಮನವಿ ಮಾಡಿದರು.
ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆ.ಜಿ.ಯಲ್ಲಪ್ಪ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರ ತಂದೆ ಷಹಾಜಿ ಪೂರ್ವಿಕ ಬೆಳ್ಳಿಯಪ್ಪ ಕನ್ನಡಿಗರು. ಗದಗ ಜಿಲ್ಲೆಯ ಸೊರಟೂರು ಮೂಲದವರು. ಬರ ಹಿನ್ನೆಲೆ ಬೆಳ್ಳಿಯಪ್ಪ ಮಹಾರಾಷ್ಟ್ರಕ್ಕೆ ತೆರಳುತ್ತಾರೆ. ಅಲ್ಲಿಂದ ನಾಲ್ಕನೇ ತಲೆಮಾರಿನವರೇ ಶಿವಾಜಿ ಮಹಾರಾಜರು. ಶಿವಾಜಿ ಕೇವಲ ಜಾತಿ, ಧರ್ಮೀಯರ ಬಗ್ಗೆ ಸಹಾನುಭೂತಿ ಹೊಂದಿದ್ದರು ಎಂದರು.ಕನ್ನಡ ಸಂಘದ ಮಂಜುನಾಥ ರಾವ್, ಅರಣಿ ತಿಮ್ಮಣ್ಣ, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ನಾಗರಾಜ ಎಸ್.ಬಡದಾಳ್, ವೀರಪ್ಪ ಸಾವಂತ್, ಆನಂದಪ್ಪ ಕುರಿಯವರ್, ಭರಣಿ ಹೊಟೆಲ್ ಮಾಲೀಕ ಪರಶುರಾಮರಾವ್ ಸಾಳಂಕೆ, ರವೀಂದ್ರನಾಥ ಡಿ.ಅವತಾಡೆ, ಬಾಬುರಾವ್ ಡಿ.ಅವತಾಡೆ, ವಕೀಲ ಶಂಕರರಾವ್ ಎಂ.ಜಾಧವ್, ಲಕ್ಷ್ಮಿಬಾಯಿ ಚಂದ್ರ ಶೇಖರ, ಅನ್ನಪೂರ್ಣ ರವೀಂದ್ರನಾಥ, ರೇಖಾ ಬಾಬುರಾವ್, ಭೂಮಿಕಾ ಬಿ.ಅವತಾಡೆ, ರಾಘವೇಂದ್ರ ಸಿ.ಕಂಚಿಕೇರಿ, ಸೌಮ್ಯ ರಾಘವೇಂದ್ರ, ಜಗದೀಶ ಕುಮಾರ ಪಿಸೆ, ಸಿದ್ದೇಶ, ಅಣ್ಣೇಶ ರಾವ್, ಶ್ರೀನಿವಾಸ ಕಲ್ಪತರು, ಶ್ರೀಧರ್ ರಾವ್ ಅವತಾಡೆ, ವಿಕಾಸ್ ಈ.ಇಟಗಿ, ವೆಂಕಟೇಶ ಲಲ್ಯಾ, ಜೆ.ಪಿ.ದೀಪಕ್, ಬಿ.ಟಿ.ಲೋಕೇಶ, ಆಟೋ ಬಸವರಾಜ, ಧರ್ಮರಾಜ, ನಾಗೇಶ, ಬಿ.ಮಂಜುನಾಥ ಇತರರು ಇದ್ದರು. ...ಕೋಟ್..
ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಅಭಿಮಾನ, ಗೌರವವನ್ನು ಹೊಂದಿದ್ದ ಶಿವಾಜಿ ಮಹಾರಾಜರು ಹೆಣ್ಣು ಮಕ್ಕಳ ಗೌರವಕ್ಕೆ ಒಂದಿಷ್ಟು ಚ್ಯುತಿ ಬಂದರೂ ಸಹಿಸುತ್ತಿರಲಿಲ್ಲ. ವಿಶ್ವಕ್ಕೆ ಗೆರಿಲ್ಲಾ ಯುದ್ಧ ನೀತಿ ಪರಿಚಯಿಸಿದ್ದು, ಚಾಣಾಕ್ಷ ರಣತಂತ್ರ ಹೆಣೆದ ಮೊದಲಿಗರೆಂಬ ಶಿವಾಜಿ ಮಹಾರಾಜರಿಗೆ ಸಲ್ಲುತ್ತದೆ. ಇಂದಿಗೂ ಅನೇಕ ದೇಶಗಳಿಗೆ ಶಿವಾಜಿ ಸ್ಪೂರ್ತಿಯಾಗಿದ್ದಾರೆ.-ಕೆ.ಜಿ.ಯಲ್ಲಪ್ಪ ರಾಜ್ಯಾಧ್ಯಕ್ಷ, ವಿಶ್ವ ಕರವೇ.
..................ಫೋಟೊ: 19ಕೆಡಿವಿಜಿ1-ದಾವಣಗೆರೆ ಕೆಟಿಜೆ ನಗರ 12ನೇ ಕ್ರಾಸ್‌ನಲ್ಲಿ ಕುವೆಂಪು ಕನ್ನಡ ಸಂಘದಿಂದ ನಡೆದ ಛತ್ರಪತಿ ಶಿವಾಜಿ ಮಹಾರಾಜರ 395ನೇ ಜಯಂತ್ಯೋತ್ಸವದಲ್ಲಿ ಛತ್ರಪತಿ ಪುತ್ಥಳಿಗೆ ಪುಷ್ಪಾರ್ಚನೆ ಮಾಡಲಾಯಿತು.
...........19ಕೆಡಿವಿಜಿ2-ದಾವಣಗೆರೆ ಕೆಟಿಜೆ ನಗರ 12ನೇ ಕ್ರಾಸ್‌ನಲ್ಲಿ ಕುವೆಂಪು ಕನ್ನಡ ಸಂಘದಿಂದ ನಡೆದ ಛತ್ರಪತಿ ಶಿವಾಜಿ ಮಹಾರಾಜರ 395ನೇ ಜಯಂತ್ಯೋತ್ಸವದಲ್ಲಿ ವಿವಿಧ ಕ್ಷೇತ್ರದವರಿಗೆ ಸನ್ಮಾನಿಸಲಾಯಿತು.