ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ನಿರ್ದೇಶಕರಾಗಿ ಶಾಸಕ ಬಿ.ಕೆ ಸಂಗಮೇಶ್ವರ್ ಅವರ ಸಹೋದರ, ನಗರದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ಪಿಎಲ್‌ಡಿ ಬ್ಯಾಂಕ್) ಅಧ್ಯಕ್ಷ ಬಿ.ಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ.
ಕನ್ನಡಪ್ರಭ ವಾರ್ತೆ ಭದ್ರಾವತಿ
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ನಿರ್ದೇಶಕರಾಗಿ ಶಾಸಕ ಬಿ.ಕೆ ಸಂಗಮೇಶ್ವರ್ ಅವರ ಸಹೋದರ, ನಗರದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ಪಿಎಲ್‌ಡಿ ಬ್ಯಾಂಕ್) ಅಧ್ಯಕ್ಷ ಬಿ.ಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ.
ಶಿವಕುಮಾರ್ ಅವರು ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕಿನ ನಿರ್ದೇಶಕ ಸಹ ಆಗಿದ್ದು, ಶಿವಮೊಗ್ಗ ಜಿಲ್ಲಾ ಸಹಕಾರ ಕ್ಷೇತ್ರದಿಂದ ಪ್ರತಿನಿಧಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ನೂತನ ನಿರ್ದೇಶಕ ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಅಧ್ಯಕ್ಷ, ಶಾಸಕ ಜಿ.ಟಿ ದೇವೇಗೌಡ ಹಾಗು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಹಕಾರ ಕೋರಿದರು.
ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಕ್ಷರಿ, ಟಿಎಪಿಸಿಎಂಎಸ್ ಅಧ್ಯಕ್ಷ ಎಚ್. ಲೋಕೇಶಪ್ಪ, ಮೆಸ್ಕಾಂ ಸಲಹಾ ಸಮಿತಿ ತಾಲೂಕು ಅಧ್ಯಕ್ಷ ಬಸವಂತಪ್ಪ, ಡಿಸಿಸಿ ಬ್ಯಾಂಕ್ ನಿರ್ದೆಶಕ ದಶರಥ ಗಿರಿ, ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ್ ಸಹಿತ ಇತರರು ಪಾಲ್ಗೊಂಡಿದ್ದರು.
-----ಫೋಟೊ----
ಡಿ27-ಬಿಡಿವಿಟಿ 1
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ನಿರ್ದೇಶಕರಾಗಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಅಧ್ಯಕ್ಷ, ಶಾಸಕ ಜಿ.ಟಿ ದೇವೇಗೌಡ ಹಾಗೂ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಹಕಾರ ಕೋರಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.