ಲಕ್ಷಾಂತರ ಜನರ ಬದುಕು ಹಸನುಗೊಳಿಸಿದ ಶಿವಕುಮಾರ ಶ್ರೀಗಳು: ಚಾನಾಳ್ ಶೇಖರ್

KannadaprabhaNewsNetwork |  
Published : Apr 02, 2025, 01:01 AM IST
ಬಳ್ಳಾರಿಯ ಕೊಟ್ಟೂರುಸ್ವಾಮಿ ಮಠದಲ್ಲಿ ತುಮಕೂರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಗಳ 118ನೇ ಜಯಂತಿ ಕಾರ್ಯಕ್ರಮ ಜರುಗಿತು. ವೀರಶೈವ ಸಮಾಜದ ಮುಖಂಡರು ಭಾಗವಹಿಸಿದ್ದರು.  | Kannada Prabha

ಸಾರಾಂಶ

ನಗರದ ಕೊಟ್ಟೂರುಸ್ವಾಮಿ ಮಠದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದಿಂದ ತ್ರಿವಿಧ ದಾಸೋಹಿ ತುಮಕೂರಿನ ಸಿದ್ಧಗಂಗಾಮಠದ ಶ್ರೀ ಶಿವಕುಮಾರಸ್ವಾಮಿಗಳ 118ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸಿದ್ಧಗಂಗಾಮಠದ ಶಿವಕುಮಾರಸ್ವಾಮಿಗಳ 118ನೇ ಜಯಂತಿ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಬಳ್ಳಾರಿ

ನಗರದ ಕೊಟ್ಟೂರುಸ್ವಾಮಿ ಮಠದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದಿಂದ ತ್ರಿವಿಧ ದಾಸೋಹಿ ತುಮಕೂರಿನ ಸಿದ್ಧಗಂಗಾಮಠದ ಶ್ರೀ ಶಿವಕುಮಾರಸ್ವಾಮಿಗಳ 118ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸಮಾರಂಭದಲ್ಲಿ ಮಾತನಾಡಿದ ವೀರಶೈವ ಮಹಾಸಭಾದ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಚಾನಾಳ್ ಶೇಖರ್,

ಶತಾಯುಷಿಯಾಗಿದ್ದ ಶಿವಕುಮಾರ ಸ್ವಾಮಿಗಳು ಜಗತ್ತು ಕಂಡ ಅಚ್ಚರಿಯಾಗಿದ್ದಾರೆ. ನಡೆದಾಡುವ ದೇವರು ಎಂದೇ ಶ್ರೀಗಳನ್ನು ಕರೆಯಲಾಗುತ್ತಿತ್ತು. ತಾರುಣ್ಯದಲ್ಲಿಯೇ ತಮ್ಮ ವೈಯುಕ್ತಿಕ ಜೀವನವನ್ನು ತ್ಯಾಗ ಮಾಡಿ ಸುಮಾರು 80 ವರ್ಷಗಳಿಗೂ ಹೆಚ್ಚು ಕಾಲ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಜಾತಿ, ಧರ್ಮ ಎನ್ನದೆ ಎಲ್ಲ ಸಮುದಾಯದ ಮಕ್ಕಳಿಗೆ ಅನ್ನ, ಅಕ್ಷರ ಹಾಗೂ ಆಶ್ರಯವಿನ್ನಿಟ್ಟು ಲಕ್ಷಾಂತರ ಜನರ ಬದುಕನ್ನು ಹಸನುಗೊಳಿಸಿದ್ದಾರೆ. ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಅದರ ಅಡಿಯಲ್ಲಿ ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಪದವಿವರೆಗೆ ಉಚಿತ ಶಿಕ್ಷಣ ನೀಡಿದ್ದಾರೆ. ಸದ್ಯ ಸಿದ್ಧಗಂಗಾ ಮಠದಲ್ಲಿ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ರಾಜ್ಯದ ನಾನಾ ಮೂಲೆಗಳಿಂದಲೂ ಬರುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಾರ್ಥಕ ಸೇವೆಯನ್ನು ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಮಾಡುತ್ತಿದೆ ಎಂದು ತಿಳಿಸಿದರು.

ಕಾಯಕ ತತ್ವವನ್ನು ಬದುಕಿನಲ್ಲಿ ಅಳವಡಿಸಿಕೊಂಡಿದ್ದ ಶ್ರೀ ಶಿವಕುಮಾರ ಸ್ವಾಮಿಗಳು, ಕರ್ನಾಟಕದ ಕೀರ್ತಿ ಕಲಶವಾಗಿದ್ದಾರೆ. ಭಾರತದ ಹೆಮ್ಮೆಯ ಸಂತರಾಗಿ ಜೀವನ ನಡೆಸಿದ್ದಾರೆ ಎಂದು ವೀರಶೈವ ಸಮಾಜದ ಮುಖಂಡರು ಸ್ಮರಿಸಿದರು.

ರೈಲ್ವೆ ಕ್ರಿಯಾ ಸಮಿತಿಯ ಅಧ್ಯಕ್ಷ ಕೆ.ಎಂ.ಮಹೇಶ್ವರಸ್ವಾಮಿ, ತುಂಗಭದ್ರಾ ರೈತ ಸಂಘದ ಅಧ್ಯಕ್ಷ ಜಿ.ಪುರುಷೋತ್ತಮಗೌಡ, ಆಂಧ್ರಪ್ರದೇಶದ ವೀರಶೈವ ಮುಖಂಡ ದಂಡಿನ ಶಿವಾನಂದ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ನಿಷ್ಠಿರುದ್ರಪ್ಪ, ವೀವಿ ಸಂಘದ ಕೋರಿ ವಿರುಪಾಕ್ಷಪ್ಪ,ಕರೇಗೌಡ, ಗಂಗಾವತಿ ವಿರೇಶ್, ಕೊಟೆಕಲ್ ಶಿವಕುಮಾರ್, ಶ್ರೀಧರಗಡ್ಡೆ ವೀರನಗೌಡ, ಮಲ್ಲಿಕಾರ್ಜುನ, ಹಲಕುಂದಿ ಮಲ್ಲಿಕಾರ್ಜುನ, ಬಸಲಿಂಗಪ್ಪ, ಅರವಿ ಶರಣಗೌಡ ಗೆಣಿಕೆಹಾಳ್, ದರೂರು ಸಾಗರ್, ಕೆ.ಪಿ.ಚನ್ನಬಸವರಾಜ, ಗೋನಾಳ್ ನಾಗಭೂಷಣ, ಡಾ. ಭ್ರಮರಾಂಭ, ಆರ್.ಎಚ್.ಎಂ. ಚನ್ನಬಸಯ್ಯಸ್ವಾಮಿ, ಎನ್.ಚಂದ್ರಮೋಹನ್, ಜಾಲಿಹಾಳ್ ಶ್ರೀಧರ್ ಸೇರಿದಂತೆ ನೂರಾರು ಜನರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ