ಕನ್ನಡಪ್ರಭ ವಾರ್ತೆ, ತುಮಕೂರುಸಿದ್ಧಗಂಗಾ ಮಠಾಧ್ಯಕ್ಷರಾಗಿದ್ದ ಲಿಂಗೈಕ್ಯ ಡಾ.ಶಿವಕುಮಾರಸ್ವಾಮಿಗಳ ಏಳನೆಯ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಠಕ್ರಮಕ್ಕೆ ಜನವರಿ 21 ರಂದು ಭಾರತದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ಆಗಮಿಸಲಿದ್ದಾರೆ ಎಂದು ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಕಾರ್ಯಾದರ್ಶಿ ಟಿ.ಕೆ.ನಂಜುಂಡಪ್ಪ ಅವರು ತಿಳಿಸಿದರು.ಸಿದ್ದಗಂಗಾ ಮಠದಲ್ಲಿ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂದು ಬೆಳಗ್ಗೆ 11 ಗಂಟೆಗೆ ಈ ಕಾರ್ಯುಕ್ರಮ ನಡೆಯಲಿದ್ದು, ಉಪರಾಷ್ಟ್ರಪತಿಗಳು ಶ್ರೀ ಮಠಕ್ಕೆ 10.52ಕ್ಕೆ ಆಗಮಿಸಿ ಮೊದಲು ಡಾ. ಶಿವಕುಮಾರಸ್ವಾಮಿಗಳ ಗದ್ದುಗೆಗೆ ಪೂಜೆ ಸಲ್ಲಿಸುವರು,ಅವರಜೊತೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ, ರಾಜ್ಯಪಾಲರು ಇರುವರು ನಂತರ ವೇದಿಕೆಗೆ ಆಗಮಿಸುವರು ಎಂದು ಅವರು ತಿಳಿಸಿದರು.ಉಪರಾಷ್ಟ್ರಪತಿಗಳಾದ ನಂತರ ಮೊದಲ ಬಾರಿಗೆ ಅವರು ಸಿದ್ಧಗಂಗಾ ಮಠಕ್ಕೆ ಆಗಮಿಸುತ್ತಿದ್ದು ಅವರನ್ನು ಸಕಲ ಗೌರವಗಳೊಂದಿಗೆ ಸ್ವಾಗತಿಸಲಾಗುವುದು ಎಂದರು. ಅಂದಿನ ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯ ಪಾಲ ಥಾವರ್ ಚಂದ್ ಗೆಹ್ಲೋಟ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರ ರೈಲ್ವೇ ರಾಜ್ಯ ಸಚಿವ ವಿ .ಸೋಮಣ್ಣ, ಚಿಕ್ಕಬಳ್ಳಾಪುರದ ಮಧುಸೂದನ್ ಸಾಯಿ ಗ್ಲೋಬಲ್ ಹ್ಯುಮಾನಿಟೆರಿಯನ್ ಮಿಷನ್ ಶ್ರೀ ಸತ್ಯಸಾಯಿ ಲೋಕ ಸೇವಾ ಗುರುಕುಲಂ ಸಂಸ್ಥಾಪಕ ಮಧುಸೂದನ ಸಾಯಿ, ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಶಿವಸಿದ್ದೇಶ್ವರ ಸ್ವಾಮೀಜಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ನವದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸಂಸದರಾದ ಗೋವಿಂದ ಎಂ.ಕಾರಜೋಳ, ಸಂಸದ ಸಿ.ಎನ್.ಮಂಜುನಾಥ್, ಶಾಸಕರಾದ ಸುರೇಶ್ ಗೌಡ, ಜ್ಯೋತಿ ಗಣೇಶ್ ಅವರು ಉಪಸ್ಥಿತರಿರುವರು. ಬೆಳಗಿನ ಜಾವ 3 ಗಂಟೆಗೆ ಡಾ.ಶಿವಕುಮಾರ ಸ್ವಾಮಿಗಳ ಗದ್ದಿಗೆಗೆ ಮಹಾರುದ್ರಾಭಿಷೇಕ ನಡೆಯಲಿದೆ, ನಂತರ ಮಠಾಧ್ಯಕ್ಷ ಸಿದ್ದಲಿಂಗಸ್ವಾಮಿಯವರು ಮಹಾಮಂಗಳಾರತಿ ಮಾಡುವರು, ಬೆಳಗ್ಗೆ ರುದ್ರಾಕ್ಷಿ ಮಂಟಪದಲ್ಲಿ ಡಾ.ಶ್ರಿ ಶಿವಕುಮಾರಸ್ವಾಮಿಗಳ ವಿಗ್ರಹವನ್ನು ಮೆರವಣಿಗೆಯಲ್ಲಿ ಕ್ಯಾತ್ಸಂದ್ರದವರೆಗೆ ತೆಗೆದುಕೊಂಡು ಹೋಗಲಾಗುವುದು ಎಂದು ವಿಶ್ವನಾಥಯ್ಯ ಅವರು ತಿಳಿಸಿದರು. ಪತ್ರಿಕಾ ಗೋಷ್ಠಿಯಲ್ಲಿ ಮಠದ ವಿಶೇಷ ಅಧಿಕಾರಿ ಜಯವಿಭವಸ್ವಾಮಿ, ಮುಖ್ಯಕರ್ಯಗನರ್ವಲಹಣಾಧಿಕಾರಿ ಶಿವಕುಮಾರಯ್ಯ, ಸಿದ್ದಗಂಗಾ ಮಠದ ಆಡಳಿತಾಧಿಕಾರಿ ವಿಶ್ವನಾಥಯ್ಯ ಹೆಚ್ಚುವರಿ ಪೊಲೀಸ್ ಮುಖ್ಯಾದಿಕಾರಿ ಪುರುಷೋತ್ತಮ್ ಉಪಸ್ಥಿತರಿದ್ದರು.