ಸ್ವಪಕ್ಷೀಯರ ಅಸಮಾಧಾನ ಶಮನಕ್ಕೆ ಖಾಸಗಿ ಹೋಟೆಲ್‌ನಲ್ಲಿ ಶಿವಲಿಂಗೇಗೌಡರ ಸಂಧಾನ ಸಭೆ

KannadaprabhaNewsNetwork |  
Published : Nov 10, 2026, 12:30 AM IST
9ಎಚ್ಎಸ್ಎನ್17 :  | Kannada Prabha

ಸಾರಾಂಶ

reconciliation meetingಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಪರಾಜಿತ ಅಭ್ಯರ್ಥಿಗಳು ಹಾಗೂ ಪ್ರಮುಖ ಮುಖಂಡರೊಂದಿಗೆ ಸಚಿವ ಕೆ.ಎಂ.ಶಿವಲಿಂಗೇಗೌಡ ಮತ್ತು ಸಂಸದ ಶ್ರೇಯಸ್ ಎಂ.ಪಟೇಲ್ ಸಭೆ ನಡೆಸಿ, ಮುಖಂಡರ ಅಸಮಾಧಾನ ಆಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಅವರನ್ನು ಸ್ವಾಗತಿಸಲು ಪಕ್ಷದ ಮುಖಂಡರಿಗೆ ಸೂಕ್ತ ಅವಕಾಶ ಕಲ್ಪಿಸದಿರುವುದು ಸಭೆಯಲ್ಲಿ ಪ್ರಮುಖ ಚರ್ಚೆಯ ವಿಷಯವಾಯಿತು. ಮುಖ್ಯಮಂತ್ರಿಗಳ ಭೇಟಿಯಂತಹ ಮಹತ್ವದ ಕಾರ್ಯಕ್ರಮದ ವೇಳೆ ಪಕ್ಷದ ಮುಖಂಡರನ್ನು ಕಡೆಗಣಿಸಿರುವುದಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ ಅವರ ವಿರುದ್ಧ ಸ್ವಪಕ್ಷೀಯ ಕಾಂಗ್ರೆಸ್ ಮುಖಂಡರಲ್ಲಿ ಭುಗಿಲೆದ್ದಿರುವ ಅಸಮಾಧಾನವನ್ನು ಶಮನಗೊಳಿಸಲು ಭಾನುವಾರ ರಾತ್ರಿ ನಗರದ ಖಾಸಗಿ ಹೋಟೆಲ್‌ನಲ್ಲಿ ಮಹತ್ವದ ಸಂಧಾನ ಸಭೆ ನಡೆಯಿತು.

ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಪರಾಜಿತ ಅಭ್ಯರ್ಥಿಗಳು ಹಾಗೂ ಪ್ರಮುಖ ಮುಖಂಡರೊಂದಿಗೆ ಸಚಿವ ಕೆ.ಎಂ.ಶಿವಲಿಂಗೇಗೌಡ ಮತ್ತು ಸಂಸದ ಶ್ರೇಯಸ್ ಎಂ.ಪಟೇಲ್ ಸಭೆ ನಡೆಸಿ, ಮುಖಂಡರ ಅಸಮಾಧಾನ ಆಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಅವರನ್ನು ಸ್ವಾಗತಿಸಲು ಪಕ್ಷದ ಮುಖಂಡರಿಗೆ ಸೂಕ್ತ ಅವಕಾಶ ಕಲ್ಪಿಸದಿರುವುದು ಸಭೆಯಲ್ಲಿ ಪ್ರಮುಖ ಚರ್ಚೆಯ ವಿಷಯವಾಯಿತು. ಮುಖ್ಯಮಂತ್ರಿಗಳ ಭೇಟಿಯಂತಹ ಮಹತ್ವದ ಕಾರ್ಯಕ್ರಮದ ವೇಳೆ ಪಕ್ಷದ ಮುಖಂಡರನ್ನು ಕಡೆಗಣಿಸಿರುವುದಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಸೂಕ್ತ ಗೌರವ ನೀಡಬೇಕು ಎಂಬ ಒತ್ತಾಯವೂ ಸಭೆಯಲ್ಲಿ ಕೇಳಿಬಂತು. ಮುಖಂಡರ ಅಸಮಾಧಾನಕ್ಕೆ ಪ್ರತಿಕ್ರಿಯಿಸಿದ ಸಚಿವ ಶಿವಲಿಂಗೇಗೌಡ ಅವರು, ಹಲವು ವಿಚಾರಗಳ ಕುರಿತು ಸಮಜಾಯಿಷಿ ನೀಡಿ ಎಲ್ಲರನ್ನೂ ಸಮಾಧಾನಪಡಿಸಲು ಪ್ರಯತ್ನಿಸಿದರು. ಪಕ್ಷದೊಳಗಿನ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಂಡು ಸಂಘಟನೆಯನ್ನು ಬಲಪಡಿಸುವ ಅಗತ್ಯವಿದೆ ಎಂಬ ಸಂದೇಶ ನೀಡಿದರು ಎನ್ನಲಾಗಿದೆ. ಇದೇ ವೇಳೆ ಮಾಜಿ ಸಚಿವ ಬಿ.ಶಿವರಾಂ ಅವರು ಜಿಲ್ಲಾಧಿಕಾರಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನಕ್ಕೆ ಆಗಮಿಸುತ್ತಿದ್ದರೂ ಜಿಲ್ಲಾಡಳಿತದಿಂದ ತಮಗೆ ಯಾವುದೇ ಮಾಹಿತಿ ನೀಡಿಲ್ಲ. ಜನಪ್ರತಿನಿಧಿಗಳು ಹಾಗೂ ಪಕ್ಷದ ಪ್ರಮುಖ ಮುಖಂಡರಿಗೆ ಕನಿಷ್ಠ ಮಾಹಿತಿ ನೀಡುವ ಸೌಜನ್ಯವನ್ನೂ ಜಿಲ್ಲಾಧಿಕಾರಿ ತೋರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳ ಕಾರ್ಯಕ್ರಮದ ನಿರ್ವಹಣೆ ಹಾಗೂ ಪಕ್ಷದ ಮುಖಂಡರಿಗೆ ನೀಡಬೇಕಾದ ಆದ್ಯತೆಯ ವಿಚಾರ ಸಭೆಯಲ್ಲಿ ಚರ್ಚೆಗೆ ಗ್ರಾಸವಾಯಿತು. ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧವೇ ಸ್ವಪಕ್ಷೀಯರು ಅಸಮಾಧಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ನಡೆದ ಈ ಸಭೆ ಹಾಸನ ಜಿಲ್ಲಾ ಕಾಂಗ್ರೆಸ್ ವಲಯದಲ್ಲಿ ರಾಜಕೀಯ ಮಹತ್ವ ಪಡೆದುಕೊಂಡಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳಕಿನ ಹಬ್ಬ: ಲಕ್ಷ್ಮೀಪೂಜೆ, ಬಲಿಪಾಡ್ಯಮಿಗೆ ಎಲ್ಲೆಡೆ ಸಂಭ್ರಮ
ನ್ಯಾಯಾಂಗ ವ್ಯವಸ್ಥೆಗೆ ದಕ್ಷ ವಕೀಲರು ಅತ್ಯಗತ್ಯ